Site icon Vistara News

Mysore Dasara : ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಸಂಚಾರ

SWR TO RUN SPECIAL TRAINS FOR Dasara FESTIVAL

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ (Mysore Dasara) ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲುಗಳ ಸಂಚಾರ (SPECIAL TRAINS) ಇರಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಮೈಸೂರು ಟು ಬೆಂಗಳೂರು ಮತ್ತು ಮೈಸೂರು ಟು ಚಾಮರಾಜನಗರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. ಅಕ್ಟೋಬರ್ 20 ರಿಂದ 24ರವರೆಗೆ ಹೆಚ್ಚುವರಿ ರೈಲುಗಳ ಸಂಚಾರ ಇರಲಿದೆ.

*ರೈಲು ಸಂಖ್ಯೆ 06279/06280 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ (5 ಟ್ರಿಪ್ಸ್) ಇರಲಿದೆ. ಈ ವಿಶೇಷ ರೈಲು ಅಕ್ಟೋಬರ್ 20 ರಿಂದ 24 ರವರೆಗೆ ಇರಲಿದೆ. ರಾತ್ರಿ 11:15 ಗಂಟೆಗೆ ಮೈಸೂರು ನಿಲ್ದಾಣದಿಂದ 02:30 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಪುನಃ ಕೆ.ಎಸ್.ಆರ್ ಬೆಂಗಳೂರು-ಮೈಸೂರು ವಿಶೇಷ ರೈಲು ಮುಂಜಾನೆ 3 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಬೆಳಗ್ಗೆ 06:15 ಗಂಟೆಗೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ನಾಗನಹಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಚಂದ್ರಗಿರಿ, ಬ್ಯಾಡ್ರಹಳ್ಳಿ, ಯಲಿಯೂರು, ಮಂಡ್ಯ, ಹನಕೆರೆ, ಮದ್ದೂರು, ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ, ಹೆಜ್ಜಾಲ, ಕೆಂಗೇರಿ ಮತ್ತು ನಾಯಂಡಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ (18) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ ಒಟ್ಟು 21 ಬೋಗಿಗಳು ಹೊಂದಿರುತ್ತವೆ.

ಇದನ್ನೂ ಓದಿ: Dasara Tour: ದಸರಾ ರಜೆಯಲ್ಲಿ ಪ್ರವಾಸ ಮಾಡ್ತೀರಾ? ಕೆಎಸ್‌ಟಿಡಿಸಿ ಟೂರ್‌ ಪ್ಯಾಕೇಜ್‌ ಹೀಗಿದೆ

*ರೈಲು ಸಂಖ್ಯೆ 06597/06598 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ (5 ಟ್ರಿಪ್ಸ್) ರೈಲು ಸಂಖ್ಯೆ 06597 ಮೈಸೂರು-ಕೆ.ಎಸ್.ಆರ್ ಬೆಂಗಳೂರು ವಿಶೇಷ ರೈಲು ಮಧ್ಯಾಹ್ನ 12:15 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 03:30 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಪುನಃ ಬೆಂಗಳೂರಿನಿಂದ ಮಧ್ಯಾಹ್ನ 03:45 ಗಂಟೆಗೆ ಹೊರಟು ಅದೇ ದಿನ ಸಂಜೆ 07:20 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಜ್ಞಾನಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದ್ರಗಿರಿ ಕೊಪ್ಪಳ ಹಾಲ್ಟ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಈ ವಿಶೇಷ ರೈಲುಗಳು 8 ಡೆಮು ಕಾರ್ ಬೋಗಿಗಳನ್ನು ಹೊಂದಿರುತ್ತವೆ.

*ರೈಲು ಸಂಖ್ಯೆ 06281/06282 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ (1 ಟ್ರಿಪ್). ರೈಲು ಸಂಖ್ಯೆ 06281 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24 ರಂದು ರಾತ್ರಿ 11:30 ಗಂಟೆಗೆ ಮೈಸೂರಿನಿಂದ ಹೊರಟು ಮರುದಿನ 01:15 ಗಂಟೆಗೆ ಚಾಮರಾಜನಗರ ನಿಲ್ದಾಣವನ್ನು ತಲುಪಲಿದೆ. ಅದೇ ರೀತಿ ಪುನಃ ಈ ರೈಲು (06282) ಅಕ್ಟೋಬರ್ 25 ರಂದು ಬೆಳಗ್ಗೆ 5 ಗಂಟೆಗೆ ಚಾಮರಾಜನಗರದಿಂದ ಹೊರಟು ಅದೇ ದಿನ ಬೆಳಗ್ಗೆ 06:50 ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಈ ವಿಶೇಷ ರೈಲುಗಳು ಸಾಮಾನ್ಯ ದ್ವಿತೀಯ ದರ್ಜೆ (13) ಮತ್ತು 2ನೇ ದರ್ಜೆ ಲಗೇಜ್ ಕಂ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ ಒಟ್ಟು 15 ಬೋಗಿಗಳನ್ನು ಹೊಂದಿರುತ್ತವೆ.

*ರೈಲು ಸಂಖ್ಯೆ 06283/06284 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ (1 ಟ್ರಿಪ್). ರೈಲು ಸಂಖ್ಯೆ 06283 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24 ರಂದು ರಾತ್ರಿ 09:15 ಗಂಟೆಗೆ ಮೈಸೂರಿನಿಂದ ಹೊರಟು ಅದೇ ದಿನ ರಾತ್ರಿ 11:10 ಕ್ಕೆ ಚಾಮರಾಜನಗರವನ್ನು ತಲುಪಲಿದೆ. ಈ ರೈಲು (06284) ಅಕ್ಟೋಬರ್ 24 ರಾತ್ರಿ 11:30 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 01:30 ಗಂಟೆಗೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ,ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ ಸಿಟಿಂಗ್ (9), ಜನರಲ್ ಸೆಕೆಂಡ್ ಕ್ಲಾಸ್ (9) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ 21 ಬೋಗಿಗಳು ಹೊಂದಿರುತ್ತವೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version