Site icon Vistara News

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

CM Siddaramaiah inaugurated the website of the inter caste marriage registration website in Mysore

ಮೈಸೂರು: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Mysore News) ಅಭಿಪ್ರಾಯಪಟ್ಟರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

Exit mobile version