Site icon Vistara News

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Kabini Dam

ಮೈಸೂರು: ಜಿಲ್ಲೆಯ ಕಬಿನಿ ಜಲಾಶಯದ (Kabini Dam) ಬಲದಂಡೆ ನಾಲೆ ಬಳಿ ಭಾರಿ ಪ್ರಮಾಣದ ಬಿರುಕು ಉಂಟಾಗಿದ್ದು, ನಾಲೆ ಹೊಡೆದರೆ ಅಪಾರ ಪ್ರಮಾಣದ ಹಾನಿಯುಂಟಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕು ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿರುವುದು ಈಗ ಭಾರಿ ಆತಂಕ ಸೃಷ್ಟಿಸಿದೆ.

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ. ಕಾಲುವೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಬೆಳೆ ಹಾನಿಯೂ ಆಗಲಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಲಾಗುತ್ತಿರುವ ನೀರು

https://vistaranews.com/wp-content/uploads/2024/07/Kabini.mp4

ನಿತ್ಯ 300ರಿಂದ 500 ಕ್ಯುಸೆಕ್ ನೀರು ಪೋಲಾಗುತ್ತಿದೆ. ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಜಲಾಶಯದ ಕೆಳಭಾಗದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2,284 ಅಡಿ ಎತ್ತರದ ಜಲಾಶಯಕ್ಕೆ ಮೂರು ದಿನಗಳ ಹಿಂದಷ್ಟೆ ಬಾಗಿನ ಅರ್ಪಣೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದರು. ಆದರೆ ಈಗ ನಾಲೆ ಬಿರುಕು ಬಿಟ್ಟಿರುವುದು ಭೀತಿ ಹೆಚ್ಚಿಸಿದೆ. ಬಲದಂಡೆ ನಾಲೆ‌ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ತಾಲೂಕಿನ ನಾಲೆಗಳಿಗೆ ಹಾನಿಯಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನ ಸಂಚಾರ ನಿಷೇಧ

ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ

ಇದನ್ನೂ ಓದಿ: Snake Bite: ಮಳೆಗಾಲದಲ್ಲಿ ಹಾವುಗಳ ಕಾಟ ಹೆಚ್ಚು; ಕಚ್ಚಿದರೆ ಈ ಕ್ರಮ ಅನುಸರಿಸಿ ಅಪಾಯದಿಂದ ಪಾರಾಗಿ!

Exit mobile version