Site icon Vistara News

ಮೈಸೂರಿನಲ್ಲಿ ಟೂರಿಸಂ ಸರ್ಕೀಟ್ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

cm bommai

ಮೈಸೂರು: ರಾಜ್ಯದ ಸಾಂಸ್ಕೃತಿ ರಾಜಧಾನಿ ಮೈಸೂರಿನಲ್ಲಿ ಟೂರಿಸಂ ಸರ್ಕೀಟ್ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಮೈಸೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಬಿಂಬಿಸಲು ಇದು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಉನ್ನತ ಶಿಕ್ಷಣ ಇಲಾಖೆ ಹಾಗೂ ಮೈಸೂರು ವಿಶ್ವವಿದ್ಯಾಲಯ ಜಂಟಿಯಾಗಿ ಮಾನಸ ಗಂಗೋತ್ರಿಯಲ್ಲಿ ಆಯೋಜಿಸಿದ್ದ ʼಯುವಜನ ಮಹೋತ್ಸವʼ ಹಾಗೂ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮೈಸೂರಿನಲ್ಲಿ ಪ್ರವಾಸೋದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆ, ಆಸ್ಪತ್ರೆಗಳ ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮೈಸೂರಿನ ಮಹರಾಜ ಕಾಲೇಜು ಹಾಗೂ ಮಹಾರಾಣಿ ಕಾಲೇಜುಗಳ ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ. ರೇಷ್ಮೆ ಜವಳಿ ಪಾರ್ಕ್, ಲಾಜಿಸ್ಟಿಕ್ಸ್ ಪಾರ್ಕ್ ಮೈಸೂರಿನಲ್ಲಿ ಬರಲಿದೆ. ಮೈಸೂರು ಶೈಕ್ಷಣಿಕ ಕೇಂದ್ರವಾಗಿದ್ದು, 1000 ಕೊಠಡಿಗಳ ವಿದ್ಯಾರ್ಥಿ ಸಮುಚ್ಛಯವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ನವಕರ್ನಾಟಕದಿಂದ ನವಭಾರತ
ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕಾಗಿ ಸಂಕಲ್ಪಿಸಿದ್ದಾರೆ. ದೇಶದಲ್ಲಿ ಆಹಾರ ಸ್ವಾವಲಂಬನೆಯನ್ನು ಸಾಧಿಸಲು ರೈತರು, ಗಡಿಯನ್ನು ಕಾಯುತ್ತಿರುವ ಯೋಧರು ಹಾಗೂ ದುಡಿಯುವ ವರ್ಗ ಶ್ರಮಿಸುತ್ತಿದೆ ಎಂದು ಹೇಳಿದ ಮುಖ್ಯಮಂತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಟ ಯಶ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಸಣ್ಣ ವಯಸ್ಸಿನಲ್ಲಿ ಮಹತ್ತರ ಸಾಧನೆಯನ್ನು ಮಾಡಿದ್ದು, ಯುವಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮಹತ್ತರ ಸಾಧನೆ ಮಾಡಬೇಕೆಂದು ಕರೆ ನೀಡಿದರು.

ಇದನ್ನೂ ಓದಿ | ಸರ್ಕಾರಿ ನೌಕರರ ಮನೆ ಮೇಲೆ ತ್ರಿವರ್ಣ ಧ್ವಜ ಹಾರಬೇಕು: ಸಿಎಂ ಬೊಮ್ಮಾಯಿ ಪತ್ರ

Exit mobile version