ಮೈಸೂರು: ಮೈಸೂರಿನಲ್ಲಿ ಹಣ್ಣು-ತರಕಾರಿ ವ್ಯಾಪಾರ ಮಾಡುತ್ತಿದ್ದ ಎಂ.ಜೆ ರವಿ ಅವರನ್ನು ಮಂಗಳವಾರ ಸಂಜೆ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.
ಎಂ.ಜೆ ರವಿ ಬಂಡಿಪಾಳ್ಯದ ಎಪಿಎಂಸಿ ಮಳಿಗೆಯಲ್ಲಿದ್ದ ವೇಳೆ ಗುಂಪೊಂದು ಅವರ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರು ಬಳಿಕ ಪ್ರಾಣ ಕಳೆದುಕೊಂಡರು.
ರವಿ ಮೂಲತಃ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದವರಾಗಿದ್ದು, ಪ್ರಸ್ತುತ ಉತ್ತನಹಳ್ಳಿಯಲ್ಲಿ ವಾಸವಾಗಿದ್ದರು. ರವಿ ಅವರಿಗೆ ತಾಯಿ, ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.
ದಕ್ಷಿಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಎಸ್ಪಿ ಶಿವಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಆರ್.ದಂಡಿನ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆಯನ್ನು ನಡೆಸಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕೊಲೆಗೆ ವ್ಯವಹಾರಿಕ ದ್ವೇಷ ಕಾರಣ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ಸಾ.ರಾ.ಮಹೇಶ್ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್ಟಿಐ ಕಾರ್ಯಕರ್ತ ಗಂಗರಾಜು