ನಲಪಾಡ್‌ ಅವರಿಗೆ ಸೇರಿದ್ದೆಂದು ಗೊತ್ತಿರಲಿಲ್ಲ ಎಂದ ಕೃತಿಕಾ: ಮೈಸೂರು ಹೋಟೆಲ್‌ ಗಲಾಟೆ - Vistara News

ಕ್ರೈಂ

ನಲಪಾಡ್‌ ಅವರಿಗೆ ಸೇರಿದ್ದೆಂದು ಗೊತ್ತಿರಲಿಲ್ಲ ಎಂದ ಕೃತಿಕಾ: ಮೈಸೂರು ಹೋಟೆಲ್‌ ಗಲಾಟೆ

ಮೈಸೂರಿನ ಹೋಟೆಲ್‌ನಲ್ಲಿ ನಡೆದ ಗಲಾಟೆಯಲ್ಲಿ ಆರೋಪ ಪ್ರತ್ಯಾರೋಪಗಳು ಮುಂದುವರಿದಿವೆ. ತಾನು ರೌಡಿಶೀಟರ್‌ ಅಲ್ಲ ಎಂದು ಸೈಯದ್‌ ರಿಯಾಜ್‌ ಹೇಳಿದ್ದಾರೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಹೋಟೆಲ್‌ ಗುತ್ತಿಗೆ ಅವಧಿ ಪೂರ್ಣಗೊಳ್ಳುವ ಮೊದಲೇ ಖಾಲಿ ಮಾಡುವಂತೆ ಒತ್ತಾಯ ಹಾಗೂ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣದಲಿ ಆರೋಫ ಪ್ರತ್ಯಾರೋಪಗಳು ಮುಂದುವರಿದಿವೆ. ಈ ಜಾಗ ಮೊಹಮ್ಮದ್‌ ನಲಪಾಡ್‌ ಅವದಿಗೆ ಸೇರಿದ್ದು ಎನ್ನುವುದು ನನಗೆ ಗೊತ್ತೇ ಇರಲಿಲ್ಲ, ಅವರಿಂದ ಗುತ್ತಿಗೆ ಪಡೆದು ಸೈಯದ್‌ ನನಗೆ ಕಾನೂನುಬಾಹಿರವಾಗಿ ಉಪಗುತ್ತಿಗೆ ನೀಡಿದ್ದಾರೆ, ಅವರೊಬ್ಬ ರೌಡಿ ಶೀಟರ್‌ ಎಂದು ಕೃತಿಕಾ ಗೌಡ ತಿಳಿಸಿದ್ದಾರೆ.

ಹೋಟೆಲ್‌ಗೆ ಆಗಮಿಸುವ ಸೈಯದ್‌ ರಿಯಾಜ್‌, ಕೃತಿಕಾ ಜತೆಗೆ ವಾಗ್ವಾದಕ್ಕಿಳಿದು ಕೊನೆಗೆ ಆಕೆಯನ್ನು ತಳ್ಳಿ ಕ್ಯಾಷಿಯರ್‌ ಕುರ್ಚಿ ಮೇಲೆ ಕುಳಿತುಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. (ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ)

ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿರುವ ಸೈಯದ್‌ ರಿಯಾಜ್‌, ನಾನು ರೌಡಿಶೀಟರ್‌ ಅಲ್ಲ. ನನಗಷ್ಟೆ ಅಲ್ಲದೆ, ಹೋಟೆಲ್‌ಗೆ ತರಕಾರಿ, ದಿನಸಿ ನೀಡಿದವರಿಗೂ ಲಕ್ಷಾಂತರ ರೂ. ಬಾಕಿ ಉಳಿಸಿಕೊಂಡಿದ್ದಾರೆ ಕೃತಿಕಾ. ಅವರೆಲ್ಲರೂ ನನ್ನ ಬಳಿ ಬಂದು ನೋವು ಹೇಳಿಕೊಂಡರು. ಈ ವಿಚಾರವನ್ನು ಕೇಳಲು ಹೋದಾಗ ರಂಪ ಮಾಡಿದ್ದಾರೆ ಎಂದಿದ್ದಾರೆ.

ಗುತ್ತಿಗೆ ನೀಡಲು 20 ಲಕ್ಷ ರೂ. ಪಡೆಯಲಾಗಿತ್ತು ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಇದೀಗ ಮಾತನಾಡಿರುವ ಕೃತಿಕಾ, ಗುತ್ತಿಗೆಗೆ 20 ಲಕ್ಷ ರೂ. ಅಲ್ಲ, 30 ಲಕ್ಷ ರೂ. ನೀಡಲಾಗಿತ್ತು ಎಂದಿದ್ದಾರೆ. ನಲಪಾಡ್‌ ಅವರಿಂದ ಗುತ್ತಿಗೆ ಪಡೆದು ನನಗೆ ಉಪಗುತ್ತಿಗೆ ನೀಡಿದ್ದಾರೆ, ಆದರೂ ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಿಯಾಜ್‌, ಹೋಟೆಲ್‌ ನಡೆಸುವ ಸಂಬಂಧ ಕೃತಿಕಾ ಗೌಡ ಜತೆಗೆ ಹಣಕಾಸು ನಿರ್ವಹಣಾ ಒಪ್ಪಂದ ಆಗಿದೆ. ಇದೀಗ ಸುಖಾಸುಮ್ಮನೆ ಅರೋಪ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಲಪಾಡ್‌ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Bengaluru New : ಹಿಂದೊಮ್ಮೆ ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌ ತೋರಿತ್ತು. ಇದೀಗ ಮತ್ತೊಬ್ಬ ಪ್ರಯಾಣಿಕನಿಗೂ ಇಂತಹದ್ದೇ ಅನುಭವವಾಗಿದ್ದು, ತಬ್ಬಿಬ್ಬಾಗಿದ್ದಾರೆ. ಆಟೋದಲ್ಲಿ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ಗೆ ಬರೋಬ್ಬರಿ 400 ರೂ. ಚಾರ್ಜ್‌ ಆಗಿದೆ.

VISTARANEWS.COM


on

By

Auto Fare in Bengaluru
Koo

ಬೆಂಗಳೂರು: ಬೆಂಗಳೂರಲ್ಲಿ ಆಟೋ ಮೀಟರ್‌ಗೆ ಪ್ರಯಾಣಿಕರೊಬ್ಬರು (Auto Fare) ಬೆಚ್ಚಿ ಬಿದ್ದಿದ್ದಾರೆ. ಅಲಾಮ್ ಸುಲ್ತಾನ್ ಎಂಬಾತ ಮೆಜೆಸ್ಟಿಕ್‌ನಿಂದ ಆಟೋ ಹಿಡಿದು ಲಾಲ್ ಬಾಗ್‌ಗೆ ಬಂದು ಇಳಿದಿದ್ದರು. ಈ ವೇಳೆ ಆಟೋ ಮೀಟರ್‌ ಚಾರ್ಜ್‌ ಕಂಡು ಶಾಕ್‌ ಆಗಿದ್ದರು.

ಯಾಕಂದರೆ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ 5 ರಿಂದ 6 ಕಿ.ಮೀ ಅಷ್ಟೇ ಅಂತರವಿದ್ದು, ಆಟೋ ಚಾರ್ಜ್‌ 400 ರೂಪಾಯಿ ತೋರಿಸಿತ್ತು. ಅಂದರೆ ಸೆಕೆಂಡ್‌ಗೆ 5 ರೂಪಾಯಿನಂತೆ ಮೀಟರ್ ಚಾರ್ಜ್‌ ಆಗಿತ್ತು. ಆಟೋ ಚಾಲಕನಿಗೆ ಅಲಾಮ್‌ ಇದನ್ನೂ ಪ್ರಶ್ನಿಸಿದ್ದಕ್ಕೆ 400 ರೂಪಾಯಿ ಆದರೂ ಡಬಲ್ ಮೀಟರ್ ಚಾರ್ಚ್ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲಾಮ್ ಸುಲ್ತಾನ್ ಈ ಬಗ್ಗೆ ಫೋಟೊ ಸಮೇತ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ. ಇನ್ನೂ ಹೆಚ್ಚುವರಿ ಹಣ ಕೊಡದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ: Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌

ಬೆಂಗಳೂರು: ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಆ ವ್ಯಕ್ತಿ ತುರ್ತು ಕೆಲಸಕ್ಕೆಂದು ಉಬರ್‌ ಆಟೋ (Uber Auto) ಬುಕ್‌ ಮಾಡಿದ್ದರು. ಟಿನ್‌ ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲಕ್ಕೆ ಇಳಿದ ಪ್ರಯಾಣಿಕ (Uber Auto Fare) ತಬ್ಬಿಬ್ಬಾಗಿದ್ದರು. ಯಾಕೆಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಜಸ್ಟ್‌ 15 ಕಿ.ಮೀ ದೂರದ ಪ್ರಯಾಣಕ್ಕೆ ಆಟೋ ಚಾರ್ಜ್‌ 500-1000 ರೂ. ಅಲ್ಲ ಬದಲಿಗೆ 1 ಕೋಟಿ ರೂ. (Uber Auto Fare) ತೋರಿಸಿತ್ತು.

ಆ್ಯಪ್ ಆಧಾರಿತ ಉಬರ್‌ ಆಟೋ ಬುಕ್‌ ಮಾಡಿ ಪ್ರಯಾಣಿಸಿದ ಆಂಧ್ರ ಪ್ರಯಾಣಿಕ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದರು. ಕೆಲಸ ನಿಮಿತ್ತ ಹೊರಹೋಗಲು ಉಬರ್ ಆಟೋ ಬುಕ್‌ ಮಾಡಿ ಟಿನ್‌ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲದಲ್ಲಿ ಬಂದು ಇಳಿದಿದ್ದರು. ಆಟೋ ಚಾರ್ಜ್‌ ಕೊಡೊಣಾ ಎಂದು ಪಾಕೆಟ್‌ನಿಂದ ಪರ್ಸ್‌ ತೆಗೆದು ಮೊಬೈಲ್‌ ನೋಡಿದಾಗ ಶಾಕ್‌ವೊಂದು ಕಾದಿತ್ತು.

Uber auto fare
ಪ್ರಯಾಣಿಕನಿಗೆ ಶಾಕ್‌

ಉಬರ್‌ ಆ್ಯಪ್‌ನಲ್ಲಿ ತೋರಿಸಿದ ಆಟೋ ಚಾರ್ಜ್‌ ನೋಡಿ, ಒಂದು ಕ್ಷಣ ತಲೆ ತಿರುಗುವಂತೆ ಮಾಡಿತ್ತು. ಯಾಕಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಗೆ 1,03,11,055 ರೂ. ಆಟೋ ಚಾರ್ಜ್ ತೋರಿತ್ತು. 207 ರೂ. ಆಗಿದ್ದ ಜಾಗದಲ್ಲಿ ಕೋಟಿ ರೂ. ನೋಡುತ್ತಿದ್ದಂತೆ ಬೆಚ್ಚಿಬಿದ್ದಿದ್ದ.

ಸದ್ಯ ಕೋಟಿ ರೂ. ಆಟೋ ಚಾರ್ಜ್‌ ತೋರಿಸುತ್ತಿದ್ದ ಉಬರ್ ಆ್ಯಪ್‌ನ ವಿಡಿಯೊ ಮಾಡಿ ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇಂತಹ ಆ್ಯಪ್ ಆಧಾರಿತ ಆಟೋಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದ್ದಾರೆ. ಕೂಡಲೇ ಇಂತಹ ಆ್ಯಪ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರಯಾಣಿಕರಿಂದ ಕಂಪೆನಿಗಳು ಹೇಗೆಲ್ಲ ಸುಲಿಗೆ ಮಾಡುತ್ತವೆ. 100-200ಪ್ರಯಾಣದ ಶುಲ್ಕಕ್ಕೆ 1 ಕೋಟಿ ರೂ. ತೋರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

Theft Case : ಬೆಳಗ್ಗೆ ಹೊತ್ತು ಸ್ವಿಗ್ಗಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುವ ಆ ಯುವಕ, ರಾತ್ರಿಯಾದರೆ ಸಾಕು ವರಸೆಯೇ ಬದಲಾಯಿಸಿಕೊಳ್ಳುತ್ತಿದ್ದ. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕ್ಷಣ ಮಾತ್ರದಲ್ಲೆ ಕದ್ದು ಪರಾರಿ ಆಗುತ್ತಿದ್ದ. ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ನಟೋರಿಯಸ್‌ ಕಳ್ಳನನ್ನು ಬಂಧಿಸಿದ್ದಾರೆ.

VISTARANEWS.COM


on

By

Theft Case in Bengaluru
Koo

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

ಬುಲೆಟ್‌ ಬೈಕ್‌ ಕದಿಯಲು ಕಳ್ಳನ ಒದ್ದಾಟ

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್‌ ಬೈಕ್ ಕಳ್ಳತನಕ್ಕೆ ಕಳ್ಳನೊಬ್ಬ ವಿಫಲ ಯತ್ನ ನಡೆಸಿದ್ದಾನೆ. ಬುಲೆಟ್ ಬೈಕ್‌ನ ಹ್ಯಾಂಡಲ್ ಲಾಕ್‌ ಕಾಲಿನಿಂದ ಒದ್ದು ಮುರಿಯಲು ಯತ್ನಿಸಿದ್ದಾನೆ. ಬೈಕ್ ಕದಿಯಲು ಕಳ್ಳನ ಒದ್ದಾಟವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏಪ್ರಿಲ್‌ 14ರ ಮಧ್ಯರಾತ್ರಿ 2:25ರ ಸುಮಾರಿಗೆ ಕಳ್ಳನೊಬ್ಬ ಬೆಂಗಳೂರಿನ ಜೆ.ಪಿ ನಗರದ ಮನೆ ಬಳಿ ಬಂದಿದ್ದ. ಒಂದೆರಡು ನಿಮಿಷ ಬುಲೆಟ್‌ ಬೈಕ್‌ ಅನ್ನೇ ನೋಡುತ್ತಾ, ಜತೆಗೆ ಧರಿಸಿದ್ದ ಟೀ ಶರ್ಟ್‌ನಲ್ಲೇ ಮುಖವನ್ನು ಮುಚ್ಚಿಕೊಂಡಿದ್ದ. ನಂತರ ಬುಲೆಟ್‌ ಬೈಕ್‌ ಏರಿ ಕುಳಿತು ಅತ್ತಿಂದಿತ್ತ ಕಣ್ಣಾಡಿಸಿ ಕಾಲಿನಿಂದ ಒದ್ದು ಹ್ಯಾಂಡಲ್‌ ಮುರಿಯಲು ಯತ್ನಿಸಿದ್ದಾನೆ. ಹೀಗೆ ನಾಲ್ಕೈದು ಬಾರಿ ಪ್ರಯತ್ನಿಸಿದ ನಂತರ ಮತ್ತ ಮನೆ ಮುಂದೆಯೇ ಬೈಕ್‌ ನಿಲ್ಲಿಸಿ, ಬಂದ ದಾರಿಗೆ ಸುಂಕವಿಲ್ಲ ಎಂದು ತಿಳಿದು ಹೊರಟು ಹೋಗಿದ್ದಾನೆ. ಸದ್ಯ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳತನವನ್ನೇ ಕಾಯಕ ಮಾಡಿಕೊಂಡ ಅಪ್ಪ-ಮಗ; ಗರಿ ಗರಿ ನೋಟು, ಡೈಮಂಡ್‌ ಕದ್ದವರು ಜೈಲುಪಾಲು

ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸರು (Madanayakanahalli Police) ಕುಖ್ಯಾತ ಮನೆಗಳ್ಳರನ್ನು (Theft Case) ಬಂಧಿಸಿದ್ದಾರೆ. ಮಿರ್ಜಾ ಸೈಯದ್ ಬೇಗ್ ಅಲಿಯಾಸ್‌ ಎಂಎಸ್ ಬೇಗ್ ಹಾಗೂ ಮಿರ್ಜಾ ನೂರುದ್ದಿನ್ ಬೇಗ್ ಬಂಧಿತರು. ಕಳ್ಳತನವನ್ನೇ ಕೆಲಸ ಮಾಡಿಕೊಂಡಿದ್ದ ಅಪ್ಪ-ಮಗನಿಂದ ಪೊಲೀಸರು ಸುಮಾರು 1 ಕೋಟಿ ಮೌಲ್ಯದ 1.25 ಕೆಜಿ ತೂಕದ ಡೈಮಂಡ್ ಹಾಗೂ ಚಿನ್ನಾಭರಣ, 2 ಕೆಜಿ ಬೆಳ್ಳಿ, 21 ಲಕ್ಷ ರೂ. ನಗದು ಸೇರಿದಂತೆ ಪೂಜೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರಿಬ್ಬರು ರಿಹ್ಯಾಬಿಲೇಷನ್ ಸೆಂಟರ್‌ನಲ್ಲಿ 11 ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕದ್ದಿದ್ದರು. ಮಿರ್ಜಾ ಸೈಯದ್ ಬೇಗ್ ಕ್ಲೀನಿಂಗ್ ಕೆಲಸಕ್ಕೆಂದು 15 ದಿನಕ್ಕೊಮ್ಮೆ ಓಲ್ಡ್ ಏಜ್ ಹೋಮ್‌ಗೆ ಬರುತ್ತಿದ್ದಾಗ, ಚಿನ್ನಾಭರಣಗಳು ಇರುವುದನ್ನು ಕಂಡಿದ್ದ. ದುರಾಸೆಗೆ ಬಿದ್ದ ಬೇಗ್‌ ಓಲ್ಡ್ ಏಜ್ ಹೋಮ್‌ ಮಾಲೀಕರ ಮನೆಗೆ ಕನ್ನ ಹಾಕಲು ಸ್ಕೆಚ್ ಹಾಕಿದ್ದ.

ಮಾತ್ರವಲ್ಲ ಕಳ್ಳತನಕ್ಕೆ ತಂದೆಯನ್ನೇ ಪಾರ್ಟ್ನರ್ ಆಗಿ ಮಾಡಿಕೊಂಡು, ಕಳ್ಳತನಕ್ಕೆ ಸ್ಕೆಚ್‌ ಹಾಕಿರುವುದಾಗಿ ಹೇಳಿದ್ದ. ಇದಕ್ಕೆ ಒಪ್ಪಿ ಕಳ್ಳತನಕ್ಕೆ ಸಾಥ್ ನೀಡಿದ ತಂದೆ ಮಿರ್ಜಾ ನೂರುದ್ದಿನ್ ಬೇಗ್, ಮನೆ ಮಾಲೀಕರು ಇಲ್ಲದ ಸಮಯದಲ್ಲಿ ಬಂದು ಇಡೀ ಮನೆಯನ್ನೇ ದೋಚಿದ್ದರು. ಸಿಕ್ಕಿ ಬೀಳಬಾರದೆಂದು ನಂತರ ಖಾರದಪುಡಿ ಹಾಕಿ ಸಾಕ್ಷಿ ನಾಶಕ್ಕೆ ಮುಂದಾಗಿದ್ದರು.

ಇನ್ನು ಮಿರ್ಜಾ ಸೈಯದ್‌ ಬೇಗ್‌ ತಂದೆಗೆ ಹೃದಯ ಸಂಬಂಧಿ ಖಾಯಿಲೆ ಜತೆಗೆ ಮೂರು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು. ಹೀಗಾಗಿ ಚಿನ್ನಾಭರಣವನ್ನೆಲ್ಲ ಕದ್ದು ಅದನ್ನು ಮಾರಾಟ ಮಾಡಿದರೆ, ಅದರಿಂದ ಬಂದ ಹಣದಲ್ಲಿ ಆರಾಮವಾಗಿ ಇರಬಹುದು ಎಂದು ಕಳ್ಳತನದ ದಾರಿ ತುಳಿದಿದ್ದರು. ಆದರೆ ಕರ್ಮ ರಿರ್ಟನ್ಸ್‌ ಎಂಬಂತೆ ಅಪ್ಪ-ಮಗ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ಈ ಸಂಬಂಧ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನವಾಗಿದೆ. ಮತ್ತಷ್ಟು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

Road Accident : ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮತ್ತೊರ್ವ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Road Accident in Hubballi
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಅಂಚಟಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಗಾಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನೂ ಮೃತರ ಗುರುತುಗಳು ಪತ್ತೆಯಾಗಿಲ್ಲ, ಪೊಲೀಸರು ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಜೇಲಂ ನದಿಯಲ್ಲಿ (Jhelum River) ಮಂಗಳವಾರ (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು (Boat Capsize), ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rameshwaram Cafe Blast: ಐಟಿ ಬಿಟಿ ಜನರೇ ರಾಮೇಶ್ವರಂ ಕೆಫೆ ಬಾಂಬರ್‌ಗಳ ಟಾರ್ಗೆಟ್ ಆಗಿದ್ದರು!

Rameshwaram Cafe Blast: ಬಾಂಬರ್‌ಗಳ ಟಾರ್ಗೆಟ್‌ ಮುಖ್ಯವಾಗಿ ಹಿಂದೂಗಳಾಗಿದ್ದು, ಐಟಿ ಬಿಟಿ ಕಂಪನಿಗಳ ನಡುವೆಯೇ ಬಾಂಬ್‌ ಇಡಲು ಮೊದಲು ಪ್ಲಾನ್‌ ಮಾಡಿದ್ದರು. ಎಸ್ಇಜೆಡ್ ಏರಿಯಾದಲ್ಲಿ ಸ್ಫೋಟ ಮಾಡಬೇಕು ಅಂತ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಟಾರ್ಗೆಟ್ ಮಾಡಿದ್ದರು.

VISTARANEWS.COM


on

Rameshwaram Cafe
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿರುವ (Blast in bengaluru) ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಬಂಧಿಸಲಾಗಿರುವ ಇಬ್ಬರು ಪ್ರಮುಖ ಉಗ್ರರನ್ನು (cafe bombers) ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಬೆಚ್ಚಿ ಬೀಳಿಸುವ ಕೆಲವು ಸಂಗತಿಗಳನ್ನು ಇವರು ಹೊರಗೆಡಹಿದ್ದಾರೆ. ಬೆಂಗಳೂರಿಗೆ ಅಂತಾರಾಷ್ಟ್ರೀಯ ಖ್ಯಾತಿ ತಂದುಕೊಟ್ಟ ಐಟಿ ಬಿಟಿ ಹಬ್‌ (IT hub) ಮೇಲೆಯೇ ಇವರು ಬಾಂಬ್‌ ದಾಳಿ (Bomb Blast) ನಡೆಸಲು ಸ್ಕೆಚ್‌ ಹಾಕಿದ್ದರು ಎಂಬುದು ಗೊತ್ತಾಗಿದೆ.

ರಾಮೇಶ್ವರಂ ಕೆಫೆ (Rameshwaram Cafe Blast) ಬಾಂಬರ್‌ಗಳನ್ನು ಎನ್‌ಐಎ (NIA) ಸತತವಾಗಿ ಡ್ರಿಲ್‌ ಮಾಡುತ್ತಿದ್ದು ವಿಚಾರಣೆಯ ವೇಳೆ ಬಾಂಬರ್‌ಗಳು ಹಲವು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಬಾಂಬರ್‌ಗಳ ಟಾರ್ಗೆಟ್‌ ಮುಖ್ಯವಾಗಿ ಹಿಂದೂಗಳಾಗಿದ್ದು, ಐಟಿ ಬಿಟಿ ಕಂಪನಿಗಳ ನಡುವೆಯೇ ಬಾಂಬ್‌ ಇಡಲು ಮೊದಲು ಪ್ಲಾನ್‌ ಮಾಡಿದ್ದರು. ಎಸ್ಇಜೆಡ್ ಏರಿಯಾದಲ್ಲಿ ಸ್ಫೋಟ ಮಾಡಬೇಕು ಅಂತ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಟಾರ್ಗೆಟ್ ಮಾಡಿದ್ದರು.

ಅದಕ್ಕೆ ಕಾರಣವೂ ಇತ್ತು. ಎಸ್ಎಜೆಡ್ ಏರಿಯಾದಲ್ಲಿ ಸ್ಫೋಟ ನಡೆಸಿದರೆ ದೇಶ ಹಾಗೂ ವಿದೇಶಗಳಲ್ಲೂ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ. ಎಸ್ಇಜೆಡ್ ಏರಿಯಾದಲ್ಲಿ ದೊಡ್ಡ ದೊಡ್ಡ ಬಹುರಾಷ್ಟ್ರೀಯ ಐಟಿಬಿಟಿ ಕಂಪನಿಗಳಿವೆ. ಸಾವಿರಾರು ಜನ ಟೆಕ್ಕಿಗಳು ಕೆಲಸ ಮಾಡುತ್ತಾರೆ. ಸಾಕಷ್ಟು ಸುದ್ದಿಯಾಗಿ ತಮ್ಮ ಕೃತ್ಯ ಅಂತಾರಾಷ್ಟ್ರೀಯವಾಗಿ ಮಿಂಚುತ್ತದೆ ಎಂದು ಪಾತಕಿಗಳು ವೈಟ್‌ಫೀಲ್ಡ್‌ನ ಹಲವೆಡೆ ಓಡಾಡಿದ್ದರು.

ಅದರೆ ಐಟಿಬಿಟಿ ಏರಿಯಾದಲ್ಲಿ ಬಾಂಬ್ ಇಡುವುದು ಅಷ್ಟು ಸುಲಭವಲ್ಲ‌ ಎಂದು ಅವರಿಗೆ ಮನವರಿಕೆಯಾಗಿತ್ತು. ಕಂಪನಿಗಳು ಇರುವ ಪ್ರದೇಶದಲ್ಲಿ ಟೈಟ್ ಸೆಕ್ಯುರಿಟಿ, ಸಿಸಿಟಿವಿಗಳ ಕಣ್ಗಾವಲು, ಮೆಟಲ್ ಡಿಟೆಕ್ಟರ್ಸ್ ಕಂಡುಬಂದಿದ್ದು, ಕಂಪನಿ ಕಂಪೌಂಡ್‌ಗಳ ಒಳಗೆ ಹೋಗುವುದು ಅಷ್ಟು ಸುಲಭವಲ್ಲ ಎಂದು ಅರ್ಥವಾಗಿತ್ತು. ನಂತರ ಫ್ಲಾನ್ ಚೇಂಜ್‌ ಮಾಡಿ, ಅದೇ ಪ್ರದೇಶದಲ್ಲಿ ಬ್ಲಾಸ್ಟ್ ಮಾಡಬೇಕು ಎಂದು ತೀರ್ಮಾನಿಸಿದ್ದರು.

ಈ ವೇಳೆ ಅವರಿಗೆ ಕಂಡಿದ್ದು ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ. ಅತಿ ಹೆಚ್ಚು ಜನ ಸೇರುತ್ತಾರೆ, ಇಲ್ಲಿಗೂ ಟೆಕ್ಕಿಗಳು ಬರುತ್ತಾರೆ. ಕೆಫೆ ಎಂಟ್ರಿಯಾಗಲು ಯಾವುದೇ ಅಡೆತಡೆ ಇರುವುದಿಲ್ಲ. ಸೆಕ್ಯುರಿಟಿ, ಮೆಟಲ್ ಡಿಟೆಕ್ಟರ್ ಕೂಡ ಇಲ್ಲ. ಆದ್ದರಿಂದ ಬಾಂಬ್ ಸ್ಫೋಟ ನಡೆಸಲು ರಾಮೇಶ್ವರಂ ಕೆಫೆ ಸೂಕ್ತ ಸ್ಥಳ ಎಂದು ಸೆಲೆಕ್ಟ್ ಮಾಡಿದ್ದರು. ಅಲ್ಲದೆ ಇದೇ ವೇಳೆ ರಾಮಮಂದಿರ ಕೂಡ ಉದ್ಘಾಟನೆಯಾಗಿದ್ದು, ಈ ಸಮಯದಲ್ಲಿ ಕೆಫೆ ಮುಂಭಾಗದಲ್ಲಿ ಸಂಭ್ರಮಾಚರಣೆ ಕೂಡ ನಡೆದಿತ್ತು.

ಮಾರ್ಚ್ 1ರಂದು ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸಲಾಗಿತ್ತು. ಕೇವಲ ಸಿಸಿಟಿವಿ ಫೂಟೇಜ್‌ನ ಪ್ರಾಥಮಿಕ ಸಾಕ್ಷ್ಯಗಳನ್ನು ಇಟ್ಟುಕೊಂಡು ಎನ್‌ಐಎ ದೇಶಾದ್ಯಂತ ಭಾರಿ ಪ್ರಮಾಣದ ತಲಾಶೆ ನಡೆಸಿತ್ತು. ಕೊನೆಗೂ ಕೋಲ್ಕತ್ತಾದಲ್ಲಿ ಪಾತಕಿಗಳು ಸಿಕ್ಕಿಬಿದ್ದಿದ್ದಾರೆ.

ಉಗ್ರರ ಕ್ಲೂ ಸಿಕ್ಕಿದ್ದು ಹೀಗೆ

ಉಗ್ರರು ಕೋಲ್ಕತ್ತಾದಲ್ಲಿಯೇ ಇದ್ದಾರೆ ಎಂಬುದು ಎನ್‌ಐಎಗೆ ಗೊತ್ತಾದದ್ದು ಹೇಗೆ? ಇದೂ ಕುತೂಹಲಕಾರಿಯಾಗಿದೆ. ಮಾರ್ಚ್ 1ರಂದು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆಸಿದ ನಂತರ ಇಬ್ಬರೂ ರಾಜ್ಯದಿಂದ ಎಸ್ಕೇಪ್ ಆಗಿದ್ದರು. ತಮಿಳುನಾಡು, ಒಡಿಶಾಗಳಲ್ಲಿ ಸುತ್ತಾಡಿ ಪಶ್ಚಿಮ ಬಂಗಾಳ ಸೇರಿಕೊಂಡಿದ್ದರು. ಹಲವಾರು ದಿನ ಸುತ್ತಾಡಿ ಕೈಯಲ್ಲಿದ್ದ ಹಣ ಖಾಲಿಯಾಗಿತ್ತು.

ಹ್ಯಾಂಡ್ಲರ್ ಮೂಲಕ ಇವರ ಬೇನಾಮಿ ಅಕೌಂಟ್‌ಗೆ ಹಣ ವರ್ಗಾವಣೆಯಾಗುತ್ತಿತ್ತು. ಶಂಕಿತರು ಬಳಸುತ್ತಿದ್ದ ಅಕೌಂಟ್ ಮಾಹಿತಿಯನ್ನು NIA ಸಂಗ್ರಹಿಸಿತ್ತು. ಇದೇ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು. ಅಂತಿಮವಾಗಿ ಕೋಲ್ಕತ್ತಾದಲ್ಲಿ ಹಣದ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಹಾಗಾಗಿ ಕೋಲ್ಕತ್ತಾದಲ್ಲಿ ತನಿಖಾ ತಂಡ ಬೀಡುಬಿಟ್ಟಿತ್ತು.

ನಂತರ ಅಲ್ಲಿನ ಲಾಡ್ಜ್‌ಗಳ ಲೆಡ್ಜರ್‌ಗಳು ಹಾಗೂ ಸಿಸಿಟಿವಿ ಫೂಟೇಜ್‌ಗಳನ್ನು ಇಟ್ಟುಕೊಂಡು ಪರಿಶೀಲಿಸಲಾಗಿತ್ತು. ನಕಲಿ ಗುರುತಿನ ದಾಖಲೆ ನೀಡಿ ಲಾಡ್ಜ್‌ನಲ್ಲಿ ವಾಸವಾಗಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿದಾಗ ಸಿಕ್ಕಿಬಿದ್ದಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬರ್‌ಗಳಿಗೆ 10 ದಿನ ಎನ್‌ಐಎ ಕಸ್ಟಡಿ; ಮತ್ತಷ್ಟು ಗ್ರಿಲ್‌ ಮಾಡಲು ಪೊಲೀಸರು ಸಜ್ಜು

Continue Reading
Advertisement
actor dwarakish
ಪ್ರಮುಖ ಸುದ್ದಿ3 mins ago

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

ಕ್ರೀಡೆ4 mins ago

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

Actor Dwarakish
ಕರ್ನಾಟಕ8 mins ago

Actor Dwarakish: ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

Lok Sabha Election 2024 What is the reason for DK Shivakumar and HD Kumaraswamy personal fight
Lok Sabha Election 202412 mins ago

Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

Rama Navami
ಪ್ರಮುಖ ಸುದ್ದಿ19 mins ago

Ram Navami 2024: ರಾಮ ನವಮಿಯನ್ನು ವಿಶೇಷವಾಗಿ ಆಚರಿಸುವ ಟಾಪ್‌ 5 ಸ್ಥಳಗಳಿವು

RR vs KKR
ಕ್ರೀಡೆ40 mins ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Toyota Kirloskar Motor Launches New Innova Hicross Petrol GX (O) Grade
ದೇಶ42 mins ago

Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

Lok Sabha Election 2024 IT companies to remain closed in Bengaluru on April 26 BBMP order
Lok Sabha Election 202454 mins ago

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

NEET PG-2024
ಶಿಕ್ಷಣ1 hour ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು1 hour ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ8 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌