Site icon Vistara News

leopard attack : ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ, ಗ್ರಾಮಸ್ಥರ ಪ್ರತಿಭಟನೆ

leopard

ಮೈಸೂರು: ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಬಾಲಕನನ್ನು ಚಿರತೆ (leopard attack) ಹೊತ್ತೊಯ್ದಿದೆ.

ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಹೊರಳಹಳ್ಳಿ ಗ್ರಾಮದ ಜಯಂತ್(11) ಮೃತ ಬಾಲಕ.
ಜಯಂತ್ ಶವಕ್ಕಾಗಿ ಗ್ರಾಮಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ಜಯಂತ್‌ ಮೃತದೇಹ ಪತ್ತೆಯಾಗಿದೆ. ಬಾಲಕನ ರುಂಡವನ್ನು ಚಿರತೆ ಹೊತ್ತೊಯ್ದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಶಾಸಕರು, ಜಿಲ್ಲಾಧಿಕಾರಿಗಳು ಹೊರಳಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಜಯಂತ್

ಹೊರಳಹಳ್ಳಿ ಗ್ರಾಮದಲ್ಲಿ ಪ್ರಸ್ತುತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಕಳೆದ ನವೆಂಬರ್‌ನಿಂದ ತಾಲ್ಲೂಕಿನಲ್ಲಿ ನಾಲ್ವರು ಚಿರತೆ ದಾಳಿಗೆ ಬಲಿಯಾದಂತಾಗಿದೆ. ಮೃತಪಟ್ಟವರ ವಿವರ ಇಂತಿದೆ.

ನ.1: ಉಕ್ಕಲಗೆರೆ ಮಂಜುನಾಥ್

ಡಿ.2: ಎಸ್.ಕೆಬ್ಬೇಹುಂಡಿ ಮೇಘನಾ

ಜ.20: ಕನ್ನಾಯಕನಹಳ್ಳಿ ಸಿದ್ದಮ್ಮ

ಜ.22: ಹೊರಳಹಳ್ಳಿ ಜಯಂತ್

ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಅರಣ್ಯ ಇಲಾಖೆ: ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ನಾಲ್ಕನೇ ಬಲಿಯಾಗಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಮಕ್ಕಳು, ಮಹಿಳೆಯರು, ವೃದ್ದರು ಒಂಟಿಯಾಗಿ ಓಡಾಡಬಾರದು. ಸಂಜೆ 6 ಗಂಟೆಯೊಳಗೆ ಮನೆ ಸೇರಿಕೊಳ್ಳಬೇಕು.
ಬಯಲು ಬಹಿರ್ದಿಸೆಗೆ ಹೋಗಬಾರದು. ಚಿರತೆಯ ಚಲನವಲನ ಕಂಡರೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಗ್ರಾಮಸ್ಥರಿಂದ ಪ್ರತಿಭಟನೆ:

ತಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರಳಹಳ್ಳಿಯ ಗ್ರಾಮೀಣ ಜನತೆ ಪ್ರತಿಭಟನೆ ನಡೆಸಿದ್ದಾರೆ.
ನರಸೀಪುರದಲ್ಲಿ ದಿನದಿಂದ ದಿನಕ್ಕೆ ಚಿರತೆಗಳು ಮನುಷ್ಯರು, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಲೇ ಇದೆ.
ಸೌಜನ್ಯಕ್ಕಾದರೂ ಉಸ್ತುವಾರಿ ಸಚಿವರು,ಅರಣ್ಯ ಇಲಾಖೆ ಸಚಿವರು ಭೇಟಿ ನೀಡಿಲ್ಲ. ಚಿರತೆ ದಾಳಿಯಿಂದ ದಿನನಿತ್ಯ ಸಾಯುತ್ತಿರುವ ಬಡ ಜೀವಗಳಿಗೆ ಬೆಲೆಯಿಲ್ಲವೇ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಜನತೆ ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿ ಮಾಡಿ.
ಇಲ್ಲದಿದ್ದರೆ ಜನತೆಯೇ ಅಧಿಕಾರಿಗಳು, ಸರ್ಕಾರ ಮತ್ತು ಆಡಳಿತದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ತಾಪಂ ಸದಸ್ಯ ರಮೇಶ್ ಎಚ್ಚರಿದ್ದಾರೆ.

Exit mobile version