Site icon Vistara News

ಮೈಸೂರು| ಮನೆಯಲ್ಲಿದ್ದ ರಿಯಲ್ ಎಸ್ಟೇಟ್‌ ಉದ್ಯಮಿಯ ಹತ್ಯೆ

ಹತ್ಯೆ

ಮೈಸೂರು: ರಿಯಲ್ ಎಸ್ಟೇಟ್‌ ಉದ್ಯಮಿಯೊಬ್ಬರು ಮನೆಯಲ್ಲಿರುವಾಗಲೇ, ಮನೆಗೆ ನುಗ್ಗಿದ ವ್ಯಕ್ತಿಯೋರ್ವ ಅವರನ್ನು ಕಬ್ಬಿಣದ ರಾಡಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ಬೃಂದಾವನ ಬಡಾವಣೆಯ 1ನೇ ಹಂತದಲ್ಲಿ ನಡೆದಿದೆ.

ರಿಯಲ್ ಎಸ್ಟೇಟ್‌ ಉದ್ಯಮಿಯಾಗಿದ್ದ ಸಂಪತ್ ಕುಮಾರ್ (63) ಹತ್ಯೆಯಾದವರು. ಸೋಮವಾರ ಅವರು ಮನೆಯಲ್ಲಿರುವಾಗ ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಸಂಪತ್‌ಕುಮಾರ್‌ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೃತನ ಪುತ್ರ ನೀಡಿದ ದೂರಿನ ಮೇರೆಗೆ ಮೇಟಗಳ್ಳಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ | ಬೆಂಗಳೂರಿನಲ್ಲಿ ವೈದ್ಯೆ ಮತ್ತು ಮಗಳ ನಿಗೂಢ ಸಾವು, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Exit mobile version