Site icon Vistara News

Balarama elephant | ದಸರಾ ಅಂಬಾರಿ ಹೊರುವ ಬಲರಾಮನಿಗೆ ಗುಂಡೇಟು, ಆರೋಪಿ ಬಂಧನ

balarama elephant

ಮೈಸೂರು: ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿಯನ್ನು ಹೊರುವ ಆನೆ ಬಲರಾಮನಿಗೆ ಗುಂಡೇಟು ಹೊಡೆದ ಆರೋಪಿಯನ್ನು ಬಂಧಿಸಲಾಗಿದೆ.

ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಬಲರಾಮ ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲೀಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದ. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರದ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದರಿಂದ ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದ. ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು.

ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆತನನ್ನು ಬಂಧಿಸಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಅವರು ಬಲರಾಮನಿಗೆ ಚಿಕಿತ್ಸೆ ನೀಡಿದ್ದು, ಬಲರಾಮ‌ ಚೇತರಿಸಿಕೊಂಡಿದ್ದಾನೆ. ವನ್ಯ ಜೀವಿ ಕಾಯಿದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಬಂಧಿಸಿ,‌ ಸಿಂಗಲ್ ಬ್ಯಾರಲ್ ಬಂದೂಕು, ಕಾರ್ಟ್ರಿಜ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Exit mobile version