ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್ ಅಸೋಸಿಯೇಷನ್ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.
ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.
ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್ಪಿಯರ್ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು
ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.
ಬಿಡುಗಡೆಯಾಗಲಿರುವ ಕೃತಿಗಳು
- ಕಾಡು ಹೇಳಿದ ಕಥೆ: ವೈಲ್ಡ್ ಲೈಫ್ ರಿಪೋರ್ಟಿಂಗ್
- ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
- ಆನೆ: ಬದಲಾದ ವರ್ತನೆ
- ಅರ್ಜುನ ನಿನ್ನ ಮರೆಯಲೆಂತು ನಾ..!