Site icon Vistara News

Chamundi devi: ಗ್ಯಾರಂಟಿ ಜಾರಿ; ಚಾಮುಂಡಿ ದೇವಿ ಹರಕೆ ತೀರಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

CM and DCM at Chamundi hills

ಮೈಸೂರು: ವಿಧಾನಸಭಾ ಚುನಾವಣೆಯ (Assembly Elections 2023) ಮತದಾನದ ಮುನ್ನಾದಿನ (ಮೇ 9ರಂದು) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ (Chamundi Betta at Mysore) ಬಂದು ಕಾಂಗ್ರೆಸ್‌ ಸರ್ಕಾರ (Congress Government) ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು (Congress Guarantee) ಜಾರಿಗೊಳಿಸುವ ಪ್ರಮಾಣ ಮಾಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಆ. 29ರಂದು (ಮಂಗಳವಾರ) ಮತ್ತೆ ಜತೆಯಾಗಿ ದೇವಿಯ (Chamundi devi) ಸನ್ನಿಧಿಗೆ ಬಂದು ಹರಕೆ ತೀರಿಸಿದ್ದಾರೆ (Siddaramaiah, DK Shivakumar visits Chamundi Betta)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಮೇ 9ರಂದು ಕೂಡಾ ಸಾಥ್‌ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಂಗಳವಾರ ಒಂದೇ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಕಾಂಗ್ರೆಸ್‌ ಸರ್ಕಾರಕ್ಕೆ ನೂರು ದಿನ ಸಂದಿರುವ ಹಿನ್ನೆಲೆಯಲ್ಲಿ ಮತ್ತು ಆಗಸ್ಟ್‌ 30ರಂದು ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದೇಗುಲ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.

ಮೇ 9ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಗ್ಯಾರೆಂಟಿ ಕಾರ್ಡ್ ಗಳನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಸರ್ಕಾರ ನೂರು ದಿನ ಪೂರೈಸಿರುವ ಸಂದರ್ಭದಲ್ಲಿ ಅವರಿಬ್ಬರು ಜತೆಯಾಗಿ ದೇವಸ್ಥಾನಕ್ಕೆ ಆಗಮಿಸುವುದು ವಿಶೇಷವಾಗಿದೆ.

ದೇವರಿಗೆ ಕಾಣಿಕೆ ಅರ್ಪಿಸಲು ಪರ್ಸಿನಿಂದ ಹಣ ತೆಗೆಯುತ್ತಿರುವ ಸಿಎಂ ಸಿದ್ದರಾಮಯ್ಯ

ಆಗಸ್ಟ್‌ 30ರಂದು ಗೃಹಲಕ್ಷ್ಮಿ ಯೋಜನೆ ಮೈಸೂರಿನಲ್ಲಿ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ, ಲಕ್ಷ್ಮೀ ಹೆಬ್ಬಾಳ್ಕರ್‌ ಎಲ್ಲರೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದಾರೆ. ಮಂಗಳವಾರ ಈ ಮೂವರೂ ಜತೆಯಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಹಾಗೂ ಫಲ ತಾಂಬೂಲಗಳನ್ನು ದೇವರಿಗೆ ಸಮರ್ಪಿಸಲಾಯಿತು.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಮೇ 9ರಂದು ನಾನು ಮತ್ತು ಶಿವಕುಮಾರ್‌ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹರಕೆ ಹೊತ್ತಿದ್ದೆವು. ಆಗಸ್ಟ್‌ 27ಕ್ಕೆ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾಗಿವೆ. ನಾವು ಜನರಿಗೆ ಕೊಟ್ಟ ಭರವಸೆಗಳನ್ನು ಒಂದೊಂದಾಗಿ ಜಾರಿಗೆ ತಂದಿದ್ದೇವೆ. ನಾಳೆ ಗೃಹಲಕ್ಷ್ಮಿ ಯೋಜನೆ ಜಾರಿಯಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ನಾಡದೇವತೆ ಚಾಮುಂಡಿ ದೇವಿಗೆ ಹರಕೆ ತೀರಿಸಿದ್ದೇವೆ ಎಂದರು.

ಇದನ್ನೂ ಓದಿ; Mysore Dasara : ನಾದಬ್ರಹ್ಮ ಹಂಸಲೇಖ ಈ ಬಾರಿಯ ಮೈಸೂರು ದಸರಾ ಉದ್ಘಾಟಕ; ಸಿಎಂ ಸಿದ್ದರಾಮಯ್ಯ ಘೋಷಣೆ

ಹಂಸಲೇಖ ಅವರಿಂದ ದಸರಾ ಉದ್ಘಾಟನೆ

ಇದೇ ಸಂದರ್ಭದಲ್ಲಿ ಈ ಬಾರಿಯ ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

Exit mobile version