CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌ - Vistara News

ಮೈಸೂರು

CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌

CM Siddaramaiah: ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ಬಿಜೆಪಿ- ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಮೈಸೂರು (Mysore) ತಲುಪುವ ಒಂದು ದಿನ ಮೊದಲೇ ಭಾರಿ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ದೋಸ್ತಿಗಳಿಗೆ ಟಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಸಜ್ಜಾಗಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ನ (Congress) ʼಜನಾಂದೋಲನ ಸಮಾವೇಶʼಕ್ಕೆ ಸುಮಾರು 2 ಲಕ್ಷ ಜನ ಸೇರಿಸಲು ಕೈ ಪಡೆ ಚಿಂತಿಸಿದೆ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಸೂಚನೆ ಕೊಡಲಾಗಿದೆ. ಜೊತೆಗೆ ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಆಗಮಿಸಲಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಲಿದ್ದು, ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಭ್ರಷ್ಟಾಚಾರ ಪ್ರಕರಣಗಳ ಪ್ರಸ್ತಾಪ ಮಾಡಲಿದ್ದಾರೆ.

ಇದಕ್ಕೂ ಮೊದಲು ರಾಜ್ಯ ರಾಜಕೀಯ ಇತಿಹಾಸದಲ್ಲಿ ಬಿಎಸ್‌ವೈ- ಎಚ್‌ಡಿಕೆ ನಡುವೆ ನಡೆದ ಟಾಕ್ ಫೈಟ್ ವಿಡಿಯೋ ತುಣುಕುಗಳ ಪ್ರದರ್ಶನ ಏರ್ಪಡಿಸಲಾಗಿದ್ದು, ಬಿಜೆಪಿ ಆಡಳಿತ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಹೇಳಿಕೆಗಳನ್ನೂ ಪ್ರದರ್ಶಿಸಲಾಗುತ್ತದೆ.

ಹಿಂದೆ ಹೆಚ್‌ಡಿಕೆ ಕುಟುಂಬದ ವಿರುದ್ಧ ಬಿಎಸ್‌ವೈ ಮಾಡಿದ್ದ ಆರೋಪಗಳನ್ನು, ಹೆಚ್‌ಡಿಕೆ ಕುಟುಂಬಕ್ಕೆ ಸಂಬಂಧಿಸಿದ 42 ಸೈಟ್‌ಗಳ ಕುರಿತು ಬಿಜೆಪಿ ನೀಡಿದ್ದ ಜಾಹೀರಾತನ್ನು ಕೈ ಪಡೆ ದೊಡ್ಡ ದೊಡ್ಡ ಫ್ಲೆಕ್ಸ್ ಮಾಡಿ ಹಾಕಲಿದೆ ಎನ್ನಲಾಗಿದೆ. ನಾಳೆ ಮೈಸೂರು ನಗರದ ಉದ್ದಕ್ಕೂ ಬಿಜೆಪಿ ನೀಡಿದ್ದ ಜಾಹೀರಾತಿನ ಪ್ರತಿಯನ್ನು ಬ್ಯಾನರ್ಸ್ ಮಾಡಿ ಕಾಂಗ್ರೆಸ್‌ ಹಾಕಲಿದೆ ಎಂದು ತಿಳಿದುಬಂದಿದೆ. ಆ ಮೂಲಕ ಜೆಡಿಎಸ್- ಬಿಜೆಪಿ ನಾಯಕರಿಗೆ ಮುಜುಗರ ಸೃಷ್ಟಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

ಒಂದಾದ್ರಾ ಸಿದ್ದರಾಮಯ್ಯ- ಬಿಕೆ ಹರಿಪ್ರಸಾದ್?‌

ಪಕ್ಷದೊಳಗೆ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಭಿನ್ನಮತ ಹೊಂದಿದ್ದ ಮುಖಂಡ ಬಿಕೆ ಹರಿಪ್ರಸಾದ್‌ ನಿನ್ನೆ ರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಹಿಂದೆ ಅಸಮಾಧಾನಗೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಬಿಕೆಹೆಚ್ ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿಎಂ ಅವರನ್ನು ದಿಢೀರ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಸುದೀರ್ಘ ಒಂದುವರೆ ಗಂಟೆಗಳ ಕಾಲ ಸಿಎಂ ಹಾಗೂ ಹರಿಪ್ರಸಾದ್ ಮಾತುಕತೆ ನಡೆಸಿದರು. ಸಚಿವ ಮಹದೇವಪ್ಪ ಕರೆ ಮಾಡಿ ಬಿಕೆ ಹರಿಪ್ರಸಾದ್‌ಗೆ ಆಹ್ವಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಬಳಿಗೆ ಹರಿಪ್ರಸಾದ್ ಅವರನ್ನು ಆರ್.ಎಲ್ ಜಾಲಪ್ಪ ಅವರ ಅಳಿಯ ನಾಗರಾಜ್ ಕರೆದುಕೊಂಡು ಹೋದರು. ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬರುವಂತೆ ಬಿಕೆ ಹರಿಪ್ರಸಾದ್‌ಗೆ ಸಿದ್ದರಾಮಯ್ಯ ಖುದ್ದು ಆಹ್ವಾನಿಸಿದರು.

ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್‌ ಜೊತೆ ಸಿಎಂ ಹಂಚಿಕೊಂಡಿದ್ದಾರೆ. ಇದೀಗ ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬಿಕೆಎಚ್‌ ಹೋಗ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ. ಹೈಕಮಾಂಡ್ ನಾಯಕರ ನಡೆ ನೋಡಿ ಅವರು ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest10 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌