ಮೈಸೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಇತ್ತೀಚೆಗೆ ಯಡಿಯೂರಪ್ಪ ಹಾಗೂ ನೂತನ ಸಂಸದ ವಿ.ಸೋಮಣ್ಣ ಮೈಸೂರಿಗೆ ಬಂದು ಅವರ ಆರೋಗ್ಯ ವಿಚಾರಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.
ಇಂದು ಬಾಗಲಕೋಟೆ, ಬೀದರ್, ಕರಾವಳಿ ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತಾಪಮಾನದ ಮುನ್ಸೂಚನೆ
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.
ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!
ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ
ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Muslim Women: ಟಕಾ ಟಕ್ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!