ಮೈಸೂರು: ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಬಿಸಿಲ ತಾಪದಿಂದ (Temperature rising) ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ ಮೈಸೂರಿನಲ್ಲಿ ಬಿಸಿಲ ತಾಪಮಾನವು ಮೂವರ ಜೀವ ತೆಗೆದಿದೆ. ಸೆಕೆ ತಾಳಲಾರದೆ ಮೂವರು ಕೆರೆಯಲ್ಲಿ ಈಜಲು (Drowned in River) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಮಿಲನ್ (25), ಮೋಹನ್ (19), ತರುಣ್ (19) ಮೃತ ಕಾರ್ಮಿಕರು. ಈ ಮೂವರು ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಹೊರ ಬಂದ ಯುವಕರು ಬೇಸಿಗೆಯ ಸೆಖೆ ತಾಳಲಾರದೆ ಕಪಿಲಾ ನದಿಗೆ ಇಳಿದಿದ್ದಾರೆ. ಆದರೆ ಕಪಿಲಾ ನದಿಗೆ ಇಳಿದವರು ಸುಳಿಗೆ ಸಿಲುಕಿ ಹೊರಬರಲು ಆಗದೆ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಪಿಲಾ ನದಿಯಲ್ಲಿ ಕೊಚ್ಚಿ ಹೋದವರನ್ನು ಹುಡುಕುವ ಕಾರ್ಯಾಚರಣೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಮುಂದುವರಿಸಿದ್ದಾರೆ. ಮಿಲನ್‌ನ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ಇದನ್ನೂ ಓದಿ:Drowned in Pond : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು
ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು
ಉಡುಪಿ: ಮೀನು ಹಿಡಿಯಲು ಹೋದ ಇಬ್ಬರಿಬ್ಬರು ನೀರುಪಾಲಾದ (Drowned in River) ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ (Seeta river) ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು.
ಸೋಮವಾರ ಬೆಳಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದರು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೇ ವೇಳೆ ಅಲ್ಲಿದ್ದ ಸ್ಥಳೀಯರು ಮುಳುಗುತ್ತಿರುವವರ ರಕ್ಷಣೆಗೆ ಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ, ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: Parliament Flashback: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್ ಸಿದ್ದು!
ಈಜಲು ಹೋಗಿ ನೀರುಪಾಲಾದ ಯುವಕ
ಕೆರೆಯಲ್ಲಿ ಈಜಾಡಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಯಾದಗಿರಿ ತಾಲೂಕಿನ ಅರಕೇರಾ ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಲಿಂಗಪ್ಪ (18) ಮೃತ ದುರ್ದೈವಿ.
ಬೆಳಗ್ಗೆ ಸ್ನೇಹಿತರ ಜತೆ ಬಣ್ಣದೋಕಳಿ ಆಡಿ ನಂತರ ತಮ್ಮನೊಟ್ಟಿಗೆ ಕೆರೆಗೆ ಈಜಾಡಲು ತೆರಳಿದ್ದಾನೆ. ಆದರೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ