ಮೈಸೂರು: ಬೆಂಗಳೂರು ಹಾಗೂ ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು (Express Way) ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಶೀರ್ಘ ಭೂಮಿ ಪೂಜೆ ನೆರವೇರುತ್ತದೆ. ವಿಮಾನ ನಿಲ್ದಾಣಕ್ಕಾಗಿ 150 ಕೋಟಿ ರೂ. ಮೊದಲ ಹಂತದ ಅನುದಾನ ಬಿಡುಗಡೆ ಆಗಿದೆ. ಒಟ್ಟು 160 ಎಕರೆ ಜಾಗ ಬೇಕು. 47 ಎಕರೆ ನೋಟಿಫಿಕೇಷನ್ ಆಗಿದೆ. ಶೀರ್ಘದಲ್ಲೇ ಭೂಮಿ ಪೂಜೆ ಮಾಡುತ್ತೇವೆ. ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು ಎಂದರು.
ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಮಾರ್ಚ್ 11ರಂದು ಉದ್ಘಾಟನೆ ಆಗಲಿದೆ. ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ಹೆದ್ದಾರಿಗೂ ಗುದ್ದಲಿ ಪೂಜೆ ಆಗಲಿದೆ. ಮಂಡ್ಯ ಜಿಲ್ಲೆಯವರು ನಮ್ಮ ಜನಪ್ರತಿನಿಧಿಗಳನ್ನು ಗೆಲ್ಲಿಸಿಲ್ಲ. ಆದರೂ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯಕ್ಕೂ ಪೂರಕವಾದ ಅಭಿವೃದ್ಧಿ ಮಾಡುತ್ತಿದ್ದೇವೆ. ಕಾವೇರಿ ಎಕ್ಸ್‌ಪ್ರೆಸ್ ಹೈವೇ ಹೆಸರಿಸಲು ಎಲ್ಲರ ಸಹಕಾರ ಕೇಳುತ್ತೇನೆ ಎಂದರು.
ನಾನು 2029 ರವರೆಗೆ ಮಾತ್ರ ರಾಜಕೀಯ ಯೋಚನೆ ಮಾಡುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೈ ಕೆಳಗೆ ಕೆಲಸ ಮಾಡಲು ನನಗೆ ಇಷ್ಟ. ಮೋದಿ ಅವರು ನನ್ನ ಪಾಲಿನ ದೇವರು. 15 ವರ್ಷದಲ್ಲಿ ಒಬ್ಬ ಸಂಸದನಾಗಿ ಎಷ್ಟು ಕೆಲಸ ಮಾಡಬಹುದು ಅದನ್ನು ಮಾಡುತ್ತೇನೆ. ನಾನು ಲಾಂಗ್ ಟರ್ಮ್ ಪಾಲಿಟೆಕ್ಸ್ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ರಾಜಕಾರಣದಲ್ಲಿ ಇರಬೇಕಾ ಬೇಡ್ವ ಅಂತ ಯೋಚನೆ ಮಾಡುತ್ತೇನೆ ಎಂದರು.
ಇದನ್ನೂ ಓದಿ: Bangalore-Mysore Highway: ವಾಹನ ಸಂಚಾರಕ್ಕೆ ಮುಕ್ತವಾಯ್ತು ಮಂಡ್ಯ ಬೈಪಾಸ್; ದಶಪಥ ಎಕ್ಸ್‌ಪ್ರೆಸ್ ಮಾರ್ಚ್‌ನಲ್ಲಿ ಉದ್ಘಾಟನೆ
ತಾಲಿಬಾನ್ ಸರ್ಕಾರ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಹೌದು, ನಾನು ಕಾಂಗ್ರೆಸ್ ಕುರಿತು ಹೇಳಿಕೆ ನೀಡಿದ್ದೇನೆ. ಸಿದ್ದರಾಮಯ್ಯ ಕೆಎಫ್‌ಡಿ, ಪಿಎಫ್‌ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಅದರ ಪರಿಣಾಮವಾಗಿ 175 ಕೇಸ್‌ಗಳನ್ನು ವಾಪಸ್ ತೆಗೆದುಕೊಂಡರು. ಇದರ ಪರಿಣಾಮವಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಕೊಲೆಯಾದವು. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡರು.
ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪ ಇರುತ್ತಾರೆ. ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲ ಮುಗಿಸುತ್ತಾರೆ. ನಂತರ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ. ಅವರು ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ ಎಂದರು.