Site icon Vistara News

Vishnuvardhan : ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ಸ್ಪಂದನೆ

Vishnuvardhan Memorial in mysuru

#image_title

ಮೈಸೂರು: ಸಾಹಸಸಿಂಹ ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಮೈಸೂರಿನ ಎಚ್. ಡಿ. ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ಡಾ. ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿರ್ಮಿಸಿರುವ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕಾರ್ಯಕ್ರಮದಲ್ಲಿ ಅನೇಕ ಅಭಿಮಾನಿಗಳು ಆಗ್ರಹಿಸಿದರು. ಭಿತ್ತಿಪತ್ರಗಳನ್ನು ಹಿಡಿದು ಅನೇಕ ಹೊತ್ತು ಪ್ರದರ್ಶಿಸಿದರು. ಈ ಕುರಿತು ಭಾಷಣದಲ್ಲಿ ಬೊಮ್ಮಾಯಿ ಮಾತನಾಡಿದರು.

ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ಚಿತ್ರ: ಡಾ. ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ನೀಡುವಂತೆ ಆಗ್ರಹಿಸಿದ ಅಭಿಮಾನಿಗಳು.

ನಾಗರಹಾವು ಸಿನೆಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಡಾ ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ,ಶಕ್ತಿ ಯಾಗಿ ನಿಂತಿದ್ದ ಪದ್ಮಶ್ರೀ ಭಾರತಿ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಂದು ಹಂಬಲಿಸಿ ,ಪರಿಶ್ರಮ ವಹಿಸಿ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ . ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ ಸಾರ್ವಜನಿಕರು ಹಾಗೂ ಚಿತ್ರ ರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರುವ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವರ ಚಿತ್ರ ಬಂದಿತ್ತು. ಮೊದಲ ಸಲ ನೋಡಿದವರು ಖಂಡಿತವಾಗಿ ವಿಷ್ಣುವರ್ಧನ್ ಅಭಿಮಾನಿ ಆಗುತ್ತಿದ್ದರು. ಇಂದಿಗೂ ಕೂಡ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ವಿಷ್ಣುವರ್ಧನ್ ಭಾವ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಸ್ಮಾರಕ ನಿರ್ಮಾಣಕ್ಕೆ ಯಡಿಯೂರಪ್ಪ ನವರು 11 ಕೋಟಿ ಬಿಡುಗಡೆ ಮಾಡಿಸಿದ್ದರು. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ : Vishnuvardhan: ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯ ಫೋಟೊಗಳು ಇಲ್ಲಿವೆ

ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ಅನಿರುದ್ ಜತಕರ್, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ನಾಗೇಂದ್ರ , ಜಿ.ಟಿ ದೇವೇಗೌಡ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ವಿವಿಧ ಜನ ಪ್ರತಿನಿಧಿಗಳು ಹಾಜರಿದ್ದರು.

Exit mobile version