ಹಳೇ ದ್ವೇಷದಿಂದ ಇರಿತ, ಒಬ್ಬ ಸಾವು, ಮತ್ತೊಬ್ಬ ಗಂಭೀರ - Vistara News

ಕ್ರೈಂ

ಹಳೇ ದ್ವೇಷದಿಂದ ಇರಿತ, ಒಬ್ಬ ಸಾವು, ಮತ್ತೊಬ್ಬ ಗಂಭೀರ

ಹಳೆ ದ್ವೇಷದಿಂದ ಮಾತಿಗೆ ಮಾತು ಬೆಳೆದು ಒಬ್ಬ ವ್ಯಕ್ತಿಯನ್ನು ಇರಿದು ಹತ್ಯೆ ಮಾಡಿದ ಘಟನೆ ಮೈಸೂರಿನ ಉದಯಗಿರಿಯಲ್ಲಿ ನಡೆದಿದೆ. ಇನ್ನೊಬ್ಬ ಗಾಯಗೊಂಡಿದ್ದಾನೆ.

VISTARANEWS.COM


on

ಹತ್ಯೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಂ.ಹಳ್ಳಿಯಲ್ಲಿ ಘಟನೆ ನಡೆದಿದ್ದು, ವೆಂಕಟೇಶ್ ಅಲಿಯಾಸ್ ಕರಿಯ ಮೃತಪಟ್ಟಿದ್ದಾರೆ. ನವೀನ್ ಎಂಬವರ ಸ್ಥಿತಿ ಗಂಭೀರವಾಗಿದೆ.

ಚಾಕುವಿನಿಂದ ಇರಿದ ಆರೋಪಿಗಳಾದ ಚಂದ್ರು ಅಲಿಯಾಸ್ ಚಿಕನ್ ಚಂದ್ರು ಮತ್ತು ಶೆಟ್ಟಿ ಪರಾರಿಯಾಗಿದ್ದಾರೆ. ಕೆ.ಎಂ.ಹಳ್ಳಿ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ ರಾತ್ರಿ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಚಂದ್ರು ಹಾಗೂ ಶೆಟ್ಟಿ ಮಾತಿಗೆ ಮಾತು ಬೆಳೆಸಿದ್ದಾರೆ. ಈ ವೇಳೆ ಶೆಟ್ಟಿ ಎಂಬಾತ ವೆಂಕಟೇಶ್‌ಗೆ ಚಾಕುವಿನಿಂದ ಇರಿದಿದ್ದಾನೆ. ವೆಂಕಟೇಶ್ ಸಹಾಯಕ್ಕೆ ಬಂದ ನವೀನ್‌ಗೂ ಚಾಕುವಿನಿಂದ ಇರಿಯಲಾಗಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಮೃತಪಟ್ಟಿದ್ದಾರೆ. ನವೀನ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case | ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಬರ್ಬರ ಕೊಲೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಯಾದಗಿರಿ

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef Smuggling : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದುಪರ ಕಾರ್ಯಕರ್ತರು ವಾಹನಕ್ಕೆ ಕಲ್ಲು ತೂರಾಟ ಮಾಡಿದ್ದಾರೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಕಾಲ್ಕಿತ್ತಿದ್ದಾರೆ. ಮತ್ತೊಂದು ಕಡೆ ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

By

Beef smuggling suspected Hindu activists pelt stones at vehicle
Koo

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾ ವಶ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯಗಳನ್ನು ವಶ ಪಡೆಯಲಾಗಿದೆ. 93 ಲಕ್ಷದ 68 ಸಾವಿರ ರೂ. ಮೌಲ್ಯದ 2 ಕೆ.ಜಿ ಗಾಂಜಾ ವಶ ಪಡೆಯಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ಆಹಾರ ಪದಾರ್ಥದ ಬಾಕ್ಸ್‌‌ನಲ್ಲಿ ಹಾಕಿಕೊಂಡು ಬಂದಿದ್ದ. ಸ್ಕ್ಯಾನಿಂಗ್ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

Prajwal Revanna Case: ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಲು ಎಸ್‌ಐಟಿ ಟೀಮ್ ಮುಂದಾಗಿದೆ. ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರನ್ನು ಸಂಪರ್ಕ ಮಾಡುವಂತೆ ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಸಿಜಿ ಬಳಿಕ ಅಲ್ಲಿನ ತಜ್ಞ ವೈದ್ಯರ ಸಲಹೆಯನ್ನು ಪಡೆಯಲು ಸೂಚನೆ ನೀಡಲಾಗಿದೆ.

VISTARANEWS.COM


on

Prajwal Revanna Case HD Revanna may be shifted to Parappana Agrahara SIT custody is doubtful
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರಿಗೆ ಇಂದು (ಭಾನುವಾರ – ಮೇ 05) ಬಹುತೇಕ ಜೈಲು ಫಿಕ್ಸ್‌ ಆಗುವ ಸಾಧ್ಯತೆ ಇದೆ. ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದು, ಕಸ್ಟಡಿಗೆ ಕೇಳಲಿದ್ದಾರೆ. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕಸ್ಟಡಿಗೆ ಕೊಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕೋರ್ಟ್‌ಗೆ ರಜೆ ಇದೆ. ಈ ಕಾರಣಕ್ಕಾಗಿ ಮಾಜಿ ಸಚಿವ, ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ನ್ಯಾಯಾಧೀಶರ ಮುಂದೆ ಪ್ರಕರಣದ ತೀವ್ರತೆಯನ್ನು ವಿವರಿಸುವ ಎಸ್‌ಐಟಿ ಪರ ವಕೀಲರು ಕಸ್ಟಡಿಗೆ ಕೇಳಲಿದ್ದಾರೆ. ಕಸ್ಟಡಿಗೆ ಕೇಳುವುದಾದರೆ ಸೋಮವಾರ (ಮೇ 6) ರೆಗ್ಯುಲರ್ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿ ಎಂದು ನ್ಯಾಯಾಧೀಶರು ಹೇಳುವ ಸಾಧ್ಯತೆ ಇರಲಿದೆ. ಹೀಗಾಗಿ ರೇವಣ್ಣ ಅವರಿಗೆ ಬಹುತೇಕ ಜೇಲು ಫಿಕ್ಸ್‌ ಆಗಲಿದೆ. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ ಹೆಚ್ಚಿದೆ.

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್?

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಲು ಎಸ್‌ಐಟಿ ಟೀಮ್ ಮುಂದಾಗಿದೆ. ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರನ್ನು ಸಂಪರ್ಕ ಮಾಡುವಂತೆ ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಸಿಜಿ ಬಳಿಕ ಅಲ್ಲಿನ ತಜ್ಞ ವೈದ್ಯರ ಸಲಹೆಯನ್ನು ಪಡೆಯಲು ಸೂಚನೆ ನೀಡಲಾಗಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ದೇಶ

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Police Officer: ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ.

VISTARANEWS.COM


on

Police Officer
Koo

ಭೋಪಾಲ್:‌ ಮರಳು ಮಾಫಿಯಾ, ಗಣಿ ಮಾಫಿಯಾಗೆ ಆಗಾಗ ಪೊಲೀಸರು, ಅಧಿಕಾರಿಗಳು ದೇಶದಲ್ಲಿ ಬಲಿಯಾಗುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ ಮರಳು ಮಾಫಿಯಾ ತಡೆಯಲು ಹೋದ ಅಸಿಸ್ಟಂಟ್‌ ಸಬ್‌-ಇನ್ಸ್‌ಪೆಕ್ಟರ್‌ (ASI) ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಮೃತ ಪೊಲೀಸ್‌ ಅಧಿಕಾರಿಯನ್ನು (Police Officer) ಮಹೇಂದ್ರ ಬಾಗ್ರಿ (Mahendra Bagri) ಎಂಬುದಾಗಿ ಗುರುತಿಸಲಾಗಿದೆ.

ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ. ಇದಾದ ಕೂಡಲೇ ಅವರನ್ನು ರಕ್ಷಿಸಲು ಇಬ್ಬರು ಪೇದೆಗಳು ತೆರಳಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಎಎಸ್‌ಐ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಪೊಲೀಸ್‌ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್‌ ಹರಿಸಿದ ಚಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟಾದರೂ, ಮರಳು ದಂಧೆ ನಡೆಸುತ್ತಿರುವ ಪ್ರಮುಖ ಆರೋಪಿಯು ತಪ್ಪಿಸಿಕೊಂಡು ಹೋಗಿದ್ದಾನೆ. “ನೌಧಿಯಾ ಗ್ರಾಮದ ಸುತ್ತಮುತ್ತ ಮರಳು ಮಾಫಿಯಾ ನಡೆಯುತ್ತಿರುವ ಕುರಿತು ನಿಖರ ಮಾಹಿತಿ ಪಡೆದ ಎಎಸ್‌ಐ ನೇತೃತ್ವದ ತಂಡವು ದಾಳಿ ನಡೆಸಿತ್ತು. ಅರೆಸ್ಟ್‌ ವಾರಂಟ್‌ ಜತೆಗೆ ಪೊಲೀಸರು ತೆರಳಿದ್ದರು. ಇದೇ ವೇಳೆ, ದುಷ್ಕರ್ಮಿಗಳು ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆಗೈದಿದ್ದಾರೆ” ಎಂದು ಶಾಹ್‌ದೋಲ್‌ ಎಡಿಜಿಪಿ ಡಿ.ಸಿ.ಸಾಗರ್‌ ಮಾಹಿತಿ ನೀಡಿದ್ದಾರೆ.

ಎಎಸ್‌ಐ ಹತ್ಯೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. “ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರ, ಮಾಫಿಯಾ, ಅಕ್ರಮ ದಂಧೆಗಳು ಮಿತಿಮೀರಿವೆ. ಸರಾಸರಿ 1.7 ದಿನಕ್ಕೆ ಒಂದರಂತೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಮರಳು ಮಾಫಿಯಾ ಮಿತಿಮೀರಿ ಹೋಗಿದೆ. ಇಷ್ಟಾದರೂ ಆಳುವ ಸರ್ಕಾರವು ಕಣ್ಣುಮುಚ್ಚಿಕೊಂಡು ಕೂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

Continue Reading

ರಾಜಕೀಯ

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Prajwal Revanna Case: ಎಚ್‌.ಡಿ. ರೇವಣ್ಣ ಅವರ ಬಂಧನ ಕ್ರಮ ಸರಿಯಾಗಿಯೇ ಇದೆ. ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ರೇವಣ್ಣ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಈಗಾಗಲೇ ಈ ಬಗ್ಗೆ ಮಾಜಿ ಸಿಎಂ, ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಇದು ತಮ್ಮ ಕುಟುಂಬ ಹಾಗೂ ಜೆಡಿಎಸ್‌ ಪಕ್ಷದ ವಿಚಾರವಾಗಿದೆ. ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಅಂತ ಹೇಳಿದ್ದಾರೆ ಎಂದು ಆರ್‌. ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Prajwal Revanna Case HD Revanna arrest is correct says R Ashok
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರ ಬಂಧನ ಕ್ರಮ ಸರಿ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ರೇವಣ್ಣ ಅವರ ಬಂಧನ ಕ್ರಮ ಸರಿಯಾಗಿಯೇ ಇದೆ. ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ರೇವಣ್ಣ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಈಗಾಗಲೇ ಈ ಬಗ್ಗೆ ಮಾಜಿ ಸಿಎಂ, ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಇದು ತಮ್ಮ ಕುಟುಂಬ ಹಾಗೂ ಜೆಡಿಎಸ್‌ ಪಕ್ಷದ ವಿಚಾರವಾಗಿದೆ. ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಅಂತ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಪ್ರಜ್ವಲ್‌ ರೇವಣ್ಣ ಪಾತಾಳದಲ್ಲಿದ್ದರೂ ಹುಡುಕಿಕೊಂಡು ತರುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ್‌ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಪ್ರಜ್ವಲ್‌ ರೇವಣ್ಣ ಭೂಮಿ ಮೇಲೆ ಇದ್ದಾಗಲೇ ವಿದೇಶಕ್ಕೆ ಹೋಗಲು ಇವರು ಬಿಟ್ಟಿದ್ದಾರೆ. ಇನ್ನು ಪಾತಾಳಕ್ಕೆ ಹೋಗಬೇಕಾದರೆ ಸಬ್ ಮೆರಿನ್‌ನಲ್ಲಿ ಹೋಗಬೇಕು ಎಂದು ವ್ಯಂಗ್ಯವಾಡಿದರು.

ರಾಜ್ಯ ಇಂಟೆಲಿಜೆನ್ಸ್‌ ವಿಫಲ

ಪ್ರಜ್ವಲ್‌ ರೇವಣ್ಣ ಅವರು ಡಿಪ್ಲೊಮ್ಯಾಟಿಕ್ ವೀಸಾ ಮೇಲೆ ವಿದೇಶಕ್ಕೆ ಹೋಗಿದ್ದಾರೆ. ಆದರೆ, ಈಗ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ನವರು ಬೊಟ್ಟು ಮಾಡುತ್ತಿದ್ದಾರೆ. ಡಿಪ್ಲೊಮ್ಯಾಟಿಕ್ ವೀಸಾವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊಡುವುದಿಲ್ಲ. ಇನ್ನು ನಮ್ಮ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ಈ ಪ್ರಕರಣದಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಇಲ್ಲಿಂದ ವರದಿ ನೀಡಿದ್ದರೆ ಏರ್‌ಪೋರ್ಟ್‌ನಲ್ಲಿಯೇ ತಡೆಯುತ್ತಿದ್ದರು ಎಂದು ರಾಜ್ಯ ಸರ್ಕಾರದ ವಿರುದ್ಧ ಆರ್.‌ ಅಶೋಕ್‌ ಗುಡುಗಿದರು. ‌

ಅಮಿತ್‌ ಶಾ – ಎಚ್‌ಡಿಕೆ ಮಧ್ಯೆ ಮಾತುಕತೆ

ಬಿಜೆಪಿ – ಜೆಡಿಎಸ್‌ ಮೈತ್ರಿಯು ಹೈಕಮಾಂಡ್ ಮಟ್ಟದಲ್ಲಿ ಹೊಂದಾಣಿಕೆ ಆಗಿದೆ. ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಅವರ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ (ಶನಿವಾರ – ಮೇ 4) ರಾತ್ರಿ ಮಾತನಾಡಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ ಎಂದು ಆರ್.‌ ಅಶೋಕ್ ಹೇಳಿದರು.

ಕಪಾಳಕ್ಕೆ ಹೊಡೆಯುವುದು ಡಿಕೆಶಿ ಸ್ಟೈಲ್

ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಕಪಾಳಮೋಕ್ಷ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಅದು ಅವರ ಸ್ಟೈಲ್. ಇದು ಮೊದಲ ಬಾರಿ ಏನಲ್ಲ. ಅನೇಕ ಬಾರಿ ಕಾರ್ಯಕರ್ತರಿಗೆ ಹೀಗೆ ಹೊಡೆದಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಪ್ರಜ್ವಲ್‌ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚನೆ ಮಾಡಿದ್ದಾರೆ. ಅವರು ಅತ್ಯಾಚಾರಿ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಈಗ ಬಿಜೆಪಿ ತಿರುಗೇಟು ನೀಡಿದೆ. ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಬಗ್ಗೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದಾರೆ. ಈಗ ಇದಕ್ಕೆ ಸಿಎಂ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, 2019ರ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ಭಾಷಣದ ವಿಡಿಯೊವನ್ನು ಪ್ಲೇ ಮಾಡಿದ್ದಾರೆ. 2019ರ ಏಪ್ರಿಲ್ 17ರಂದು ಕಡೂರಿನ ಎಪಿಎಂಸಿಯಲ್ಲಿ ಸ್ವತಃ ಪ್ರಜ್ವಲ್ ರೇವಣ್ಣ ಅವರನ್ನು ಸಿದ್ದರಾಮಯ್ಯ ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದ್ದರು.

Prajwal Revanna Case Siddaramaiah tweets vote for Prajwal Full class from BJP

ಪ್ರಜ್ವಲ್‌ ರೇವಣ್ಣ ಯಂಗ್ ಸ್ಟಾರ್‌ ಇದ್ದಾನೆ. ಪ್ರತಿಭಾವಂತ ಇದ್ದಾನೆ. ಹಾಗಾಗಿ ನಮ್ಮ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಗೆಲ್ಲಿಸಿಕೊಡಿ. ಹಾಸನದ ಅಭಿವೃದ್ಧಿಗೆ ಕೆಲಸ‌ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್‌ ಪಕ್ಷಕ್ಕೆ ಶಕ್ತಿ ನೀಡಿ, ತೆನೆ ಹೊತ್ತ ಮಹಿಳೆಗೆ ಮತ ನೀಡಿ ಅಂತ ಮನವಿ ಮಾಡಿ (17-4-2019ರಲ್ಲಿ) ಟ್ವೀಟ್ ಮಾಡಿದ್ದರು. ನಾನು ಹೇಳಿದರೆ ಸುಳ್ಳು ಎಂದು ಹೇಳುತ್ತಾರೆ. ಇಲ್ಲಿ ನೋಡಿ ಅವರದ್ದೇ ಟ್ವೀಟ್ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರದರ್ಶನ ಮಾಡಿದರು.

ಈಗ ಹೇಳಿ ಸಿದ್ದರಾಮಯ್ಯ ಅವರೇ!

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಹಿಂದಿನ ಭಾಷಣವನ್ನು ಸಹ ಮಾಧ್ಯಮದವರ ಮುಂದೆ ಪ್ಲೇ ಮಾಡಿದರು. ಈಗ ದಾಖಲೆ ಬಿಡುಗಡೆ ಮಾಡಿದ್ದೇನೆ. ಈಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡಬೇಕು. ಯಂಗ್ ಮತ್ತು ವಿಷನ್ ಲೀಡರ್ ಅಂತ ಹೇಳಿದ್ದೀರಿ. ನಮ್ಮದು ಮುಂದಿನ ಐದು ವರ್ಷಗಳ ವಿಷನ್‌ ಇದೆ. ಪ್ರಜ್ವಲ್‌ ಗೆದ್ದರೆ ಅದನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಿರಲ್ಲವೇ? ಪ್ರಜ್ವಲ್‌ ಅವರನ್ನು ಜೆಡಿಎಸ್‌ನಿಂದ ಈಗಾಗಲೇ ಅಮಾನತು ಮಾಡಲಾಗಿದೆ. ಅವರು ಕಳೆದ ಬಾರಿ ನಮ್ಮ‌ ಹೊಂದಾಣಿಕೆಯಿಂದ ಗೆದ್ದಿಲ್ಲ. ನಿಮ್ಮ ಮೈತ್ರಿ ಅಭ್ಯರ್ಥಿಯಾಗಿ ಗೆದ್ದಿದ್ದಾರೆ ಎಂದು ಕಿಡಿಕಾರಿದರು.

ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಅಲ್ಲದೆ, ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತೆಯನ್ನು ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧವಾಗಲೀ ಅಥವಾ ಎಸ್‌ಐಟಿ ವಿರುದ್ಧವಾಗಲೀ ಯಾರೂ ಬೊಟ್ಟು ಮಾಡಬಾರದು ಎಂಬ ನಿಟ್ಟಿನಲ್ಲಿ ತನಿಖೆಯ ಜತೆ ಜತಗೆ ಸಾಕ್ಷ್ಯಗಳ ಸಂಗ್ರಹಕ್ಕೂ ಮುಂದಾಗಲಾಗಿದೆ.

ಈ ಸಂಬಂಧ ಈಗ ಎಸ್.ಐ.ಟಿ ಅಧಿಕಾರಿಗಳಿಂದ ಎಚ್.ಡಿ. ರೇವಣ್ಣ ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ರೇವಣ್ಣ ಅವರ ಮೊಬೈಲ್ ಸೀಜ್ ಮಾಡಿ ಡೇಟಾ ಪರಿಶೀಲನೆ ಮಾಡಲಾಗುತ್ತಿದೆ. ರೇವಣ್ಣ ಮೊಬೈಲ್ ಚಾಟಿಂಗ್, ಕಾಲ್ ಸಿಡಿಆರ್ ಪರಿಶೀಲನೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಈಗ ಎಚ್‌.ಡಿ. ರೇವಣ್ಣ ಅವರನ್ನು ಕಿಡ್ನ್ಯಾಪ್‌ ಕೇಸ್ ಅಡಿ ಬಂಧಿಸಿರುವುದರಿಂದ ಟೆಕ್ನಿಕಲ್ ಎವಿಡೆನ್ಸ್ ಅನ್ನು ಸಂಗ್ರಹ ಮಾಡಬೇಕಾಗುತ್ತದೆ. ಹೀಗಾಗಿ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಮೊಬೈಲ್‌ನಲ್ಲಿ ಡಿಲಿಟ್‌ ಆಗಿರುವ ಡೇಟಾಗಳನ್ನೂ ರಿಟ್ರೀವ್‌ ಮಾಡಿ ಅವುಗಳನ್ನು ಸಾಕ್ಷ್ಯವೆಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್‌ ಪರಿಶೀಲನೆಯಲ್ಲಿ ಈಗ ಎಸ್‌ಐಟಿ ತಂಡವಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading
Advertisement
Beef smuggling suspected Hindu activists pelt stones at vehicle
ಯಾದಗಿರಿ17 mins ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ17 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ42 mins ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ57 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್1 hour ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20241 hour ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest1 hour ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ2 hours ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ2 hours ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್2 hours ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Narendra Modi
ದೇಶ17 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌