Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು - Vistara News

ಮೈಸೂರು

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು.

VISTARANEWS.COM


on

Bangalore Rural Lok Sabha Constituency Congress candidate DK Suresh fans prayed in sri Chamundeshwari hill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ. ಬ್ರದರ್ಸ್ ಅಭಿಮಾನಿ ಬಳಗದ ಸುಮಾರು 300 ಸದಸ್ಯರು ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಶ್ರೀ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆ ಮೂಲಕ ಡಿ.ಕೆ ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು, ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾದಯಾತ್ರಿಗಳು. ಡಿ.ಕೆ. ಸುರೇಶ್ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಬೇಕು ಎಂದು ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಎಲ್ಲರೂ ಹರಕೆ ಹೊತ್ತು ಬಂದಿದ್ದೇವೆ. ನಮ್ಮಂತಹ ಗದ್ದೆ, ಹೊಲ ಇಲ್ಲದವರಿಗೆ ಪ್ರತಿ ತಿಂಗಳು ಕಾಂಗ್ರೆಸ್ ಸರ್ಕಾರ 2 ಸಾವಿರ ರೂ. ನೀಡುತ್ತಿದೆ. ಜತೆಗೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ನೀಡುತ್ತಿದ್ದಾರೆ. ಇದರಿಂದ ನಮ್ಮ ಸಂಸಾರವನ್ನು ನಡೆಸಲು ಸಹಾಯವಾಗುತ್ತಿದೆ. ಸರ್ಕಾರದ ಈ ಯೋಜನೆಗಳು ನಮಗೆ ಅನುಕೂಲವಾಗಿವೆ. ಈ ಯೋಜನೆಗಳಿಂದ ರಾಜ್ಯಕ್ಕೆ ಯಾವುದೇ ತೊಂದರೆ ಇಲ್ಲ. ಬಿಜೆಪಿ ನಮ್ಮಂತಹ ಬಡವರಿಗಾಗಿ ಏನು ಮಾಡಿದೆ?

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಶಕ್ತಿ ತುಂಬುವಂತಹ ಕಾರ್ಯಕ್ರಮವನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಉಚಿತ ಬಸ್ ವ್ಯವಸ್ಥೆ, 2 ಸಾವಿರ ಹಣ, ಉಚಿತ ವಿದ್ಯುತ್ ಸೌಕರ್ಯ, ಅನ್ನಭಾಗ್ಯ ಯೋಜನೆ ಎಲ್ಲವನ್ನು ಜಾರಿ ಮಾಡಿದ್ದಾರೆ. ಆ ಮೂಲಕ ನುಡಿದಂತೆ ನಡೆದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Weather: ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

Karnataka Weather: ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

Continue Reading

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading

ಕರ್ನಾಟಕ

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Srinivasa Prasada Passes Away: ನಾಳೆ ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

VISTARANEWS.COM


on

srinivasa prasad sutturu sri
ಸುತ್ತೂರು ಶ್ರೀಗಳಿಂದ ಶ್ರೀನಿವಾಸ ಪ್ರಸಾದ್‌ ಅಂತಿಮ ದರ್ಶನ
Koo

ಮೈಸೂರು: ಬಿಜೆಪಿಯ ಹಿರಿಯ (BJP leader) ನಾಯಕ, ದಲಿತ ಮುಖಂಡ, ಚಾಮರಾಜನಗರ ಸಂಸದ (Chamarajanagar MP) ಶ್ರೀನಿವಾಸ ಪ್ರಸಾದ್‌ ಅವರ ಪಾರ್ಥಿವ ಶರೀರದ (Srinivasa Prasada Passes Away) ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 1.00 ಗಂಟೆಯಿಂದ ಅಶೋಕಪುರಂನಲ್ಲಿರುವ ಎಂಟಿಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಪ್ರಸಾದ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಳೆ ಅಂತ್ಯಕ್ರಿಯೆ

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಮನೆಗೆ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ತರಲಾಗಿದ್ದು, ಅಲ್ಲಿಂದ ಎಂಟಿಎಂ ಶಾಲೆಗೆ ತರಲಾಗುತ್ತಿದೆ. 1 ಗಂಟೆ ತನಕ ಮನೆಯಲ್ಲಿ ಶ್ರೀನಿವಾಸ ಪ್ರಸಾದ್ ದರ್ಶನಕ್ಕೆ ಅವಕಾಶ. 1 ಗಂಟೆಯ ನಂತರ ಅಶೋಕ ಪುರಂ ನ ಎಂ.ಟಿ.ಎಂ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ. ನಾಳೆ ಅಶೋಕಪುರಂನಲ್ಲಿ ಮೆರವಣಿಗೆ ನಡೆಯಲಿದೆ. ಸಿಲ್ಕ್ ಫ್ಯಾಕ್ಟರಿ ಬಳಿ ಅಂಬೇಡ್ಕರ್ ಎಜುಕೇಶಲ್ ಅಂಡ್ ಕಲ್ಚರಲ್ ಟ್ರಸ್ಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಹಾಗಾಗಿ ಬೌದ್ಧ ಧರ್ಮದ ಪ್ರಕಾರ ಅಂತಿಮ ವಿಧಿ ವಿಧಾನ ನಡೆಯಲಿವೆ ಎಂದು ಶ್ರೀನಿವಾಸ್ ಪ್ರಸಾದ್ ಮಗಳು ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀನಿವಾಸ ಪ್ರಸಾದ್‌, ಮೊನ್ನೆ ತುಸು ಚೇತರಿಕೆ ಅನುಭವಿಸಿದ್ದರು. ಆಗಮಿಸಿದ ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದ ಅವರಿಗೆ ನಿನ್ನೆಯಿಂದ ಮಾತನಾಡಲು ಸಾಧ್ಯ ಆಗಿರಲಿಲ್ಲ. ಈ ವೇಳೆ ಬರೆದು ಸೂಚಿಸಲು ಕುಟುಂಬಸ್ಥರು ಪೆನ್ನು ಪೇಪರ್ ಕೊಟ್ಟಿದ್ದರು. ಆಗ ಪೇಪರ್‌ನಲ್ಲಿ ʼcoffeeʼ ಅಂತ ಬರೆದಿದ್ದ ಸಂಸದ ಶ್ರೀನಿವಾಸ್ ಪ್ರಸಾದ್, ಕಾಫಿ ತರಿಸಿಕೊಂಡು ಎರಡು ಗುಟುಕು ಕಾಫಿ ಕುಡಿದಿದ್ದರು ಎಂದು ತಿಳಿದುಬಂದಿದೆ.

ದಮನಿತರ ದನಿ: ಸಿಎಂ ಸಿದ್ದರಾಮಯ್ಯ

“ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪರ ದನಿ: ಡಿಕೆ ಶಿವಕುಮಾರ್‌

“ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ. ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರದ ಗಮನ ಸೆಳೆದ ನಾಯಕ: ಬಿಎಸ್‌ವೈ

“15 ದಿನಗಳ ಹಿಂದಷ್ಟೆ ಅವರನ್ನು ನಾನು ಭೇಟಿ ಮಾಡಿದ್ದೆ. ರಾಜ್ಯಾದ್ಯಂತ ಪ್ರವಾಕ್ಕೆ ಬರಬೇಕು ಎಂದು ಹೇಳಿದ್ದೆ. ಅವರೊಂದಿಗೆ ಮಾತುಕತೆಯನ್ನೂ ಸಹ ನಡೆಸಿದ್ದೆ. ಅಷ್ಟರೊಳಗೆ ಅವರು ಅಕಾಲಿಕವಾಗಿ ಸಾವನ್ನಪ್ಪಿರೋದು ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಕುಟುಂಬದವರಿಗೆ ನೋವು ಸಹಿಸುವ ಶಕ್ತಿ ನೀಡಲಿ. ಶ್ರೀನಿವಾಸ್ ಪ್ರಸಾದ್ ಕೇವಲ ದಲಿತ ನಾಯಕ ಅಲ್ಲ ಅವರು ರಾಷ್ಟ್ರದ ಗಮನ ಸೆಳೆದ ನಾಯಕ. ಪ್ರತಿ ವಿಚಾರದ ಬಗ್ಗೆಯೂ ಬಹಳ ಆಳವಾದ ಜ್ಞಾನ ಹೊಂದಿದ್ದರು” ಎಂದು ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ನೆನೆದಿದ್ದಾರೆ.

ಅಪರೂಪದ ಜನನಾಯಕ: ಎಚ್‌ಡಿಕೆ

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬದ್ಧತೆಗೆ ಸಾಕ್ಷಿ: ವಿಜಯೇಂದ್ರ

“ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ವಿ. ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ರಾಜ್ಯದ ಹಿತ ಕಾಯುವಲ್ಲಿ ಯಶಸ್ವಿ ಆಗಿದ್ದಾರೆ. ವಿಶೇಷವಾಗಿ ದಲಿತ ಸಮುದಾಯದಿಂದ ಬಂದು ದಲಿತರ ದನಿಯಾಗಿ ಕೆಲಸ ಮಾಡಿದ್ದಾರೆ. ಕಂದಾಯ ಸಚಿವ ಆಗಿಯೂ ಸಾಕಷ್ಟು ಕೆಲಸ ಮಾಡಿದ್ದರು. ನನಗೆ ಬಹಳಷ್ಟು ನೋವಾಗಿದೆ. ಅವರ ಕುಟುಂಬ ವರ್ಗಕ್ಕೆ ನಷ್ಟ ಭರಿಸುವ ಶಕ್ತಿ ದೊರೆಯಲಿ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸಾಹಿತಿ ದೇವನೂರು ಮಹಾದೇವ, ಶಾಸಕ ಜಿಟಿ ದೇವೇಗೌಡ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮುಂತಾದವರು ಮೃತರ ನಿವಾಸಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿದ್ದಾರೆ. “ಶ್ರೀನಿವಾಸ ಪ್ರಸಾದ್ ಶೋಷಿತ ವರ್ಗದ ಧ್ವನಿಯಾಗಿ ಶಕ್ತಿ ತುಂಬಿದ್ದರು. ಮಂತ್ರಿಯಾಗಿ ಅನೇಕ ಒಳ್ಳೆಯ ಕಾರ್ಯಕ್ರಮ ಕೊಟ್ಟವರು” ಎಂದು ಜಿಟಿ ದೇವೇಗೌಡ ನುಡಿದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hassan Pen Drive Case POCSO case registered against Prajwal Revanna
ಕ್ರೈಂ16 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Ambedkar Statue MP Umesh Jadhav Unwell
ಕಲಬುರಗಿ17 mins ago

Ambedkar Statue: ತಲೆ ತಿರುಗಿ ಬಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್

Manvita Kamath marriage with arun Pics are here
ಸ್ಯಾಂಡಲ್ ವುಡ್27 mins ago

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Mallikarjuna Kharge
ರಾಜಕೀಯ34 mins ago

Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Job Alert
ಉದ್ಯೋಗ42 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

bomb threat delhi ncr schools
ಪ್ರಮುಖ ಸುದ್ದಿ42 mins ago

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

prajwal revanna actress swara bhasker angry government silence on prajwal revanna
ರಾಜಕೀಯ47 mins ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ49 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ54 mins ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ1 hour ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌