Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಒಡೆಯರ್?‌ ಹೈಕಮಾಂಡ್‌ ಮಟ್ಟದಲ್ಲಿ ಭಾರಿ ಚರ್ಚೆ! - Vistara News

ಮೈಸೂರು

Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಒಡೆಯರ್?‌ ಹೈಕಮಾಂಡ್‌ ಮಟ್ಟದಲ್ಲಿ ಭಾರಿ ಚರ್ಚೆ!

Lok Sabha Election 2024: ಮೈಸೂರು ಕ್ಷೇತ್ರಕ್ಕೆ ಹೊಸ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಪ್ರತಾಪ್ ಸಿಂಹ ಹೆಸರಿನ ಜತೆಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಹೆಸರು ಮುಂಚೂಣಿಗೆ ಬಂದಿದೆ. ಅವರನ್ನು ರಾಜಕೀಯಕ್ಕೆ ಕರೆತರಲು ಬಿಜೆಪಿ ಆಲೋಚನೆ ಮಾಡುತ್ತಿದೆ.

VISTARANEWS.COM


on

Lok Sabha Elections 2024 Yaduveer Wodeyar likely to contest as BJP candidate from Mysuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಗಳು ನಡೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗ 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತಿದೆ. ಈ ಸಂಬಂಧ ಈಗ ರಾಜ್ಯ ಬಿಜೆಪಿ ನಾಯಕರ ಜತೆ ಹೈಕಮಾಂಡ್‌ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸುತ್ತಿದೆ. ಅಭ್ಯರ್ಥಿಗಳನ್ನು ಫೈನಲ್‌ ಮಾಡುವ ನಿಟ್ಟಿನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಇನ್ನು ಬಹು ಕುತೂಹಲಕಾರಿ ಕ್ಷೇತ್ರವಾಗಿರುವ ಕೊಡಗು – ಮೈಸೂರು ಲೋಕಸಭಾ ಕ್ಷೇತ್ರಕ್ಕೆ (Kodagu Mysore Lok Sabha constituency) ಪ್ರತಾಪ್‌ ಸಿಂಹ (Pratap Simha) ಜತೆಗೆ ಇನ್ನೊಂದು ಹೆಸರು ಕೇಳಿಬಂದಿದೆ. ಸಿಂಹ ಅವರ ಬದಲಾಗಿ ಯದುವೀರ್‌ ಒಡೆಯರ್‌ (Yaduveer Krishnadatta Chamaraja Wadiyar) ಅವರನ್ನು ಕಣಕ್ಕಿಳಿಸಿದರೆ ಹೇಗೆ? ಎಂಬ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಮೈಸೂರು ಕ್ಷೇತ್ರಕ್ಕೆ ಹೊಸ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಪ್ರತಾಪ್ ಸಿಂಹ ಹೆಸರಿನ ಜತೆಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಹೆಸರು ಮುಂಚೂಣಿಗೆ ಬಂದಿದೆ. ಅವರನ್ನು ರಾಜಕೀಯಕ್ಕೆ ಕರೆತರಲು ಬಿಜೆಪಿ ಆಲೋಚನೆ ಮಾಡುತ್ತಿದೆ.

ಸಭೆಯಲ್ಲಿ ಬುಧವಾರ ಚರ್ಚೆ

ಶತಾಯಗತಾಯ ಮೈಸೂರು ಕ್ಷೇತ್ರಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಲು ಕಸರತ್ತು ಮಾಡಲಾಗುತ್ತಿದೆ. ಈ ಮೂಲಕ ಹೊಸ ಮುಖವನ್ನು ಪರಿಚಯಿಸಿದಂತಾಗುತ್ತದೆ ಎಂಬ ನಿಟ್ಟಿನಲ್ಲಿ ಯಧುವೀರ್ ಹೆಸರು ಬುಧವಾರ ನಡೆದ ಸಭೆಯಲ್ಲಿ ಚರ್ಚೆಗೆ ಬಂದಿದೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಿಟ್ಟರೆ ಇವರೇ ಸೂಕ್ತ ಅಭ್ಯರ್ಥಿ ಎಂದು ಮಾತುಕತೆಯನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರತಾಪ್‌ ಸಿಂಹ ಬಗ್ಗೆ ಬಿಜೆಪಿಯಲ್ಲೇ ವಿರೋಧ?

ಪ್ರತಾಪ್ ಸಿಂಹಗೆ ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರ ವಿರೋಧ ಇದೆ ಎನ್ನಲಾಗುತ್ತಿದೆ. ಪಕ್ಷದಲ್ಲೇ ಪ್ರತಾಪ್‌ ಸಿಂಹ ಅವರಿಗೆ ಹೆಚ್ಚು ವಿರೋಧ ವ್ಯಕ್ತವಾಗಿದ್ದು, ಸಮುದಾಯ ಸಹ ನಿಲ್ಲುವುದು ಅನುಮಾನ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಯೋಗ ಮಾಡಬಹುದು ಎಂದ ಬಿಜೆಪಿ ನಾಯಕರು ಅಭಿಪ್ರಾಯಕ್ಕೆ ಬಂದಿದ್ದಾರೆ. ಅಲ್ಲದೆ, ಒಡೆಯರ್‌ಗೆ ಮೈಸೂರು ಟಿಕೆಟ್ ನೀಡಿದರೆ ಮಂಡ್ಯ, ಚಾಮರಾಜನಗರದಲ್ಲೂ ಬಿಜೆಪಿಗೆ ಲಾಭವಾಗಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಹೀಗಾಗಿ ಈ ನಿರ್ಧಾರವನ್ನು ಕೈಗೊಂಡರೆ ಹಳೇ ಮೈಸೂರು ಭಾಗದಲ್ಲೂ ಪ್ಲಸ್ ಎಂಬ ಲೆಕ್ಕಾಚಾರಕ್ಕೆ ಬಿಜೆಪಿ ಬಂದಿದೆ.

ಇದನ್ನೂ ಓದಿ: Vidhana Soudha: ವಿಧಾನಸೌಧದಲ್ಲಿನ್ನು ಪ್ರತಿಯೊಬ್ಬರ ಫೇಸ್‌ ರೀಡ್‌; ಸಂಸತ್‌ ಮಾದರಿ ಭದ್ರತೆ!

ಯುದುವೀರ್‌ ಒಡೆಯರ್‌ಗೆ ಗಾಳ ಹಾಕಲು ಸಿಎಂ ಯತ್ನ!

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಯತ್ನ ನಡೆಸಿ ಈ ಹಿಂದೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದೆ ಎನ್ನಲಾಗಿದೆ. ಆ ವೇಳೆ ಯದುವೀರ್‌ ಸಹ ರಾಜಕೀಯಕ್ಕೆ ಬರಲು ಉತ್ಸಾಹ ತೋರಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೇ ಪ್ಲಸ್‌ ಆಗಿ ಇಟ್ಟುಕೊಂಡಿರುವ ಸಿಎಂ ಸಿದ್ದರಾಮಯ್ಯ, ಅಗತ್ಯ ಬಿದ್ದರೆ ಅವರನ್ನು ಮೈಸೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದರೆ ಹೇಗೆ ಎಂಬ ಲೆಕ್ಕಾಚಾರವನ್ನು ಮಾಡಿದ್ದಾರೆ ಎನ್ನಲಾಗಿದೆ. ಅಗತ್ಯಬಿದ್ದರೆ ತಾವೇ ಯದುವೀರ್‌ ಅವರ ಜತೆಗೆ ಮಾತನಾಡುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಬಿಜೆಪಿ ತನ್ನ ರಾಜಕೀಯ ತಂತ್ರಗಾರಿಕೆಯನ್ನು ಶುರು ಮಾಡಿದ್ದು, ಯಾರಿಗೆ ಟಿಕೆಟ್‌ ಕೊಡಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest14 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest15 hours ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest16 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest16 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest17 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest17 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

Latest17 hours ago

ಕಾಂತಾರ ಚಾಪ್ಟರ್‌-1 ಮಿಮಿಕ್ರಿ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೇಲಿನ ಪ್ರಕರಣ ಇತ್ಯರ್ಥ; ಕೋರ್ಟ್‌ ಆದೇಶವೇನು?

Latest18 hours ago

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

Latest18 hours ago

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

Latest19 hours ago

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌