Site icon Vistara News

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Murder case in Mysuru

ಮೈಸೂರು: ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ವಿಕೋಪಕ್ಕೆ ತಿರುಗಿದ್ದು, ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ (Murder Case) ಮಾಡಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಿಂಗಣ್ಣ ಎಂಬುವವರ ಪತ್ನಿ ವಿನೋದಾ (45) ಕೊಲೆಯಾದವರು.

ನಿಂಗಣ್ಣ ಹಾಗೂ ಸ್ವಾಮಿ ಇಬ್ಬರು ಸಹೋದರರಾಗಿದ್ದು, ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮತ್ತದೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು. ಈ ಮಧ್ಯೆ ಜಗಳಕ್ಕೆ ಎಂಟ್ರಿ ಕೊಟ್ಟ ಸ್ವಾಮಿ ಅವರ ಪುತ್ರ ಅಭಿಷೇಕ್ ತನ್ನ ದೊಡ್ಡಮ್ಮನ ಮೇಲೆ ಹಲ್ಲೆ ಮಾಡಿ ಹೊಟ್ಟೆಗೆ ಒದ್ದಿದ್ದಾನೆ. ಕೆಳಗೆ ಬಿದ್ದವರಿಗೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ವಿನೋದಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇತ್ತ ದೊಡ್ಡಮ್ಮ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಅಭಿಷೇಕ್ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version