Site icon Vistara News

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

banned plastic seized by corporation in Mysore

ಮೈಸೂರು: ನಗರದ ನಾನಾ ಕಡೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ (Mysore News) ವಿಧಿಸಿದ್ದಾರೆ.

ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸೂಕ್ತ ಮಾಹಿತಿಯ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್‌ ಎಂಬುವವರಿಗೆ ಸೇರಿದ ಧನ್ವಂತ್ರಿ ಎಂಟರ್‌ಪ್ರೈಸಸ್‌ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿ, ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.

ನಿಗದಿತ ಸ್ಥಳದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಿ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಮತ್ತು ತೆರವುಗೊಳಿಸುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗೆಂದು ಗುರುತಿಸಿದೆ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರೀ ಮೊತ್ತದ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Exit mobile version