ವಿಸ್ತಾರ Special | ಕನ್ನಡಿಗ ಅರುಣ್‌ ಯೋಗಿರಾಜ್‌ ನಿರ್ಮಿಸಿದ ನೇತಾಜಿ ಪ್ರತಿಮೆ ತನ್ನದು ಎಂದ ರಾಜಸ್ಥಾನಿ ಶಿಲ್ಪಿ ! - Vistara News

ಕಲೆ/ಸಾಹಿತ್ಯ

ವಿಸ್ತಾರ Special | ಕನ್ನಡಿಗ ಅರುಣ್‌ ಯೋಗಿರಾಜ್‌ ನಿರ್ಮಿಸಿದ ನೇತಾಜಿ ಪ್ರತಿಮೆ ತನ್ನದು ಎಂದ ರಾಜಸ್ಥಾನಿ ಶಿಲ್ಪಿ !

ನವದೆಹಲಿಯ ಕರ್ತವ್ಯಪಥದಲ್ಲಿ ಸ್ಥಾಪಿಸಲಾಗಿರುವ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಪ್ರತಿಮೆಯನ್ನು ಮೈಸೂರಿನ ಅರುಣ್‌ ಯೋಗಿರಾಜ್‌ ನಿರ್ಮಿಸಿದ್ದು ಎಂದು ಸರ್ಕಾರದ ಪ್ರಕಟಣೆಯಲ್ಲೇ ತಿಳಿಸಲಾಗಿದೆ. ಆದರೆ ಇದೀಗ ನರೇಶ್‌ ಕುಮಾವತ್‌, ಇದು ತಮ್ಮ ವಿನ್ಯಾಸ ಎಂದಿದ್ದಾರೆ.

VISTARANEWS.COM


on

netaji statue 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ವಿಸ್ತಾರ ವಿಶೇಷ

ಬೆಂಗಳೂರು: ನವದೆಹಲಿಯ ಕರ್ತವ್ಯಪಥದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದು ಎಲ್ಲರಿಗೂ ತಿಳಿದೇ ಇದೆ.

ಇದೇ ವರ್ಷದ ಸೆಪ್ಟೆಂಬರ್‌ 8 ರಂದು ಲೋಕಾರ್ಪಣೆಗೊಂಡ ಪ್ರತಿಮೆಯನ್ನು ಕನ್ನಡಿಗ, ಮೈಸೂರಿನ ಯುವ ಶಿಲ್ಪಿ ಅರುಣ್‌ ಯೋಗಿರಾಜ್‌ ನಿರ್ಮಾಣ ಮಾಡಿದ್ದು ಎನ್ನುವುದೂ ಪ್ರಚಾರವಾಗಿದೆ. ಕಳೆದ ವರ್ಷ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಸುಂದರ ಪ್ರತಿಮೆಯನ್ನು ನಿರ್ಮಿಸಿದವರು ಅರುಣ್‌ ಯೋಗಿರಾಜ್‌. ಈ ಪ್ರತಿಮೆಯನ್ನೂ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದರು.

ಆದರೆ, ನೇತಾಜಿ ಪ್ರತಿಮೆಯನ್ನು ತಾನೇ ನಿರ್ಮಿಸಿದ್ದು ಎಂದು ರಾಜಸ್ಥಾನ ಮೂಲದ ಶಿಲ್ಪಿ ಹೇಳಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಸ್ವತಃ ಅರುಣ್‌ ಯೋಗಿರಾಜ್‌ ವ್ಯಗ್ರರಾಗಿದ್ದಾರೆ.

ನವದೆಹಲಿಯ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಾಜಪಥವನ್ನು ಇತ್ತೀಚೆಗೆ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲಾಯಿತು. ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ 125ನೇ ಜನ್ಮದಿನವಾದ ಜನವರಿ 23ರಂದು ಥ್ರೀಡಿ ಹೋಲೋಗ್ರಾಂ ಪ್ರತಿಮೆಯನ್ನು ಪ್ರಧಾನಿ ಲೋಕಾರ್ಪಣೆ ಮಾಡಿದ್ದರು. ಇದೇ ಸ್ಥಳದಲ್ಲಿ ಕಲ್ಲಿನ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದರು.

ಅದರಂತೆ ಕನ್ನಡಿಗ ಶಿಲ್ಪಿ ಅರುಣ್‌ ಯೋಗಿರಾಜ್‌ ನೇತೃತ್ವದ ಶಿಲ್ಪಿಗಳ ತಂಡ ಪ್ರತಿಮೆಯನ್ನು ನಿರ್ಮಿಸಿತ್ತು, ಸೆಪ್ಟೆಂಬರ್‌ 8ರಂದು ಲೋಕಾರ್ಪಣೆಯೂ ಆಗಿತ್ತು. ಆದರೆ ಇದೀಗ ಹೊಸ ವಿವಾದ ಸೃಷ್ಟಿಯಾಗಿದೆ.

ತಾನೇ ಶಿಲ್ಪಿ ಎಂದ ಕುಮಾವತ್‌

ಆಂಗ್ಲ ದೈನಿಕವೊಂದಕ್ಕೆ ರಾಜಸ್ಥಾನ ಮೂಲದ ಶಿಲ್ಪಿ ನರೇಶ್‌ ಕುಮಾವತ್‌ ಸಂದರ್ಶನ ನೀಡಿದ್ದಾರೆ. ʼChiselling a new era’ (ಹೊಸ ಯುಗದ ಕೆತ್ತನೆಯಲ್ಲಿ) ಎಂಬ ಶೀರ್ಷಿಕೆ ನೀಡಲಾಗಿರುವ ಸಂದರ್ಶನದ ಪ್ರಾರಂಭದಲ್ಲಿ ಸಂದರ್ಶಕರು “28 ಅಡಿ ಎತ್ತರದ ಪ್ರತಿಮೆಯನ್ನು ನರೇಶ್‌ ಕುಮಾವತ್‌ ವಿನ್ಯಾಸ ಮಾಡಿದರು. ಅವರ ತಂಡವು ಕಲ್ಲಿನಿಂದ ಶಿಲ್ಪ ರಚನೆ ಮಾಡಿತು” ಎಂದು ತಿಳಿಸಿದ್ದಾರೆ.

ಸಂದರ್ಶನದ ಮುಂದುವರಿದ ಭಾಗದಲ್ಲಿ ಈ ಕುರಿತು ಸ್ವತಃ ನರೇಶ್‌ ಕುಮಾವತ್‌ ಮಾತನಾಡಿದ್ದು, “ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿ (ಎನ್‌ಜಿಎಂಎ) ವತಿಯಿಂದ ನನಗೆ ಆಹ್ವಾನ ನೀಡಲಾಗಿತ್ತು. ನೇತಾಜಿ ಅವರ ಪ್ರತಿಮೆ ನಿರ್ಮಾಣಕ್ಕೆ ಕೆಲವೊಂದು ವಿನ್ಯಾಸಗಳನ್ನು ಅವರು ನನ್ನಿಂದ ಬಯಸಿದ್ದರು. ನಾವು ಆರು ತಿಂಗಳು ಈ ಕಾರ್ಯದಲ್ಲಿ ತೊಡಗಿದೆವು. ನೇತಾಜಿ ಅವರ ಕುಟುಂಬವನ್ನೂ ಸಂಪರ್ಕಿಸಿ ವಿನ್ಯಾಸ ಮಾಡಿದೆವು. ಅಂತಿಮವಾಗಿ, ನೇತಾಜಿ ಅವರು ಸಲ್ಯೂಟ್‌ ಮಾಡುತ್ತಿರುವ ವಿನ್ಯಾಸವನ್ನು ಸರ್ಕಾರ ಆಯ್ಕೆ ಮಾಡಿತು. ತೆಲಂಗಾಣದ ಖಮ್ಮಂನಿಂದ ಕಪ್ಪು ಶಿಲೆಯನ್ನು ಆಯ್ಕೆ ಮಾಡಿ, 50 ಕುಶಲಕರ್ಮಿಗಳು ಶ್ರಮವಹಿಸಿ ಈ ಪ್ರತಿಮೆ ನಿರ್ಮಿಸಿದರು” ಎಂದು ಹೇಳಿಕೊಂಡಿದ್ದಾರೆ.

ಅರುಣ್‌ ಯೋಗಿರಾಜ್‌ ಬೇಸರ
ಪತ್ರಿಕೆಯಲ್ಲಿ ಪ್ರಕಟವಾಗಿರುವ ಸಂದರ್ಶನವನ್ನು ಉಲ್ಲೇಖಿಸಿ ಅರುಣ್‌ ಯೋಗಿರಾಜ್‌ ಟ್ವೀಟ್‌ ಮಾಡಿದ್ದಾರೆ. ಈ ಪತ್ರಿಕೆಯಿಂದ ಸುಳ್ಳು ಸುದ್ದಿ ಪ್ರಕಟಿಸಲಾಗಿದೆ. ಇಂಡಿಯಾ ಗೇಟ್‌ನಲ್ಲಿರುವ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಪ್ರತಿಮೆಯನ್ನು ರೂಪಿಸಿದ್ದು ನಾನೇ ಹೊರತು ಇಲ್ಲಿ ತಿಳಿಸಿದಂತೆ ಬೇರೆಯವರಲ್ಲ. ಬೇರೆಯವರ ಸಾಧನೆಯನ್ನು ಬೇರೆ ಯಾರೂ ತಮ್ಮದೆಂದು ಹೇಳಿಕೊಳ್ಳಬಾರದು. ನರೇಶ್‌ ಕುಮಾವತ್‌ ಅವರ ವಿನ್ಯಾಸವನ್ನು ನಾನು ಎಂದಿಗೂ ನೋಡಿಯೇ ಇಲ್ಲ. ಈ ಲೇಖನವನ್ನು ನೋಡಲು ನೋವು ಹಾಗೂ ಬೇಸರವಾಗುತ್ತದೆ ಎಂದಿದ್ದಾರೆ. ಹಾಗಾದರೆ ಇಲ್ಲಿ ಸುಳ್ಳು ಹೇಳುತ್ತಿರುವವರು ಯಾರು? ಎಂಬ ಒಬ್ಬರ ಪ್ರಶ್ನೆಗೆ ʼಇಬ್ಬರೂʼ ಎಂದು ಅರುಣ್‌ ಯೋಗಿರಾಜ್‌ ಉತ್ತರಿಸಿದ್ದಾರೆ.

ನೇತಾಜಿ ಪ್ರತಿಮೆ ಮಾದರಿಯನ್ನು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ ಅರುಣ್‌ ಯೋಗಿರಾಜ್‌ ಹಾಗೂ ಇದೀಗ ಆಂಗ್ಲ ಪತ್ರಿಕೆಯಲ್ಲಿ ಪ್ರಕಟವಾಗಿರುವ ಸಂದರ್ಶನ

ಅರುಣ್‌ ಯೋಗಿರಾಜ್‌ ಮಾತ್ರ ಉಲ್ಲೇಖ
ನೇತಾಜಿ ಪ್ರತಿಮೆ ಲೋಕಾರ್ಪಣೆ ನಂತರದಲ್ಲಿ ಸ್ವತಃ ಮೋದಿ ಅವರನ್ನು ಭೇಟಿ ಮಾಡಿದ್ದ ಅರುಣ್‌ ಯೋಗಿರಾಜ್‌, ನೇತಾಜಿ ಅವರ ಸಣ್ಣ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ದರು. ಈ ಕುರಿತು ಕೇಂದ್ರ ಪ್ರಸಾರ ಸಚಿವಾಲಯ ಹೊರಡಿಸಿರುವ ಪತ್ರಿಕಾ ಹೇಳಿಕೆಯಲ್ಲಿ ಕೇವಲ ಅರುಣ್‌ ಯೋಗಿರಾಜ್‌ ಹೆಸರು ಇದೆ.

ಶಿಲ್ಪಿ ನರೇಶ್‌ ಕುಮಾವತ್‌

ಕೇಂದ್ರ ಸಂಸ್ಕೃತಿ ಸಚಿವಾಲಯ ಬಿಡುಗಡೆ ಮಾಡಿರುವ ವಿಡಿಯೋದಲ್ಲಿಯೂ ಅರುಣ್‌ ಯೋಗಿರಾಜ್‌ ಅವರಿಗೆ ಮಾತ್ರವೇ ಶ್ರೇಯವನ್ನು ನೀಡಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಡಿರುವ ಟ್ವೀಟ್‌ನಲ್ಲಿ “ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ನೇತೃತ್ವದ ತಂಡ ಅತ್ಯಂತ ಸುಂದರವಾಗಿ ಕೆತ್ತನೆ ಮಾಡಿ ನಿರ್ಮಿಸಿದ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯ ನಿರ್ಮಾಣ ಕಾರ್ಯದ ಒಂದು ಸಣ್ಣ ಝಲಕ್” ಎಂದಿದ್ದಾರೆ.

ಅರುಣ್‌ ಯೋಗಿರಾಜ್‌ ಮಾಡಿರುವ ಟ್ವೀಟ್‌
ಅರುಣ್‌ ಯೋಗಿರಾಜ್‌ ಅವರಿಗೆ ಶ್ರೇಯವನ್ನು ನೀಡಿರುವ ಸಂಸ್ಕೃತಿ ಸಚಿವಾಲಯದ ಟ್ವೀಟ್‌
ಅರುಣ್‌ ಯೋಗಿರಾಜ್‌ ಅವರನ್ನು ಶ್ಲಾಘಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಡಿರುವ ಟ್ವೀಟ್‌
ಕೇಂದ್ರ ಪ್ರಸಾರ ಸಚಿವಾಲಯದ ಪ್ರಕಟಣೆಯಲ್ಲಿ ಕೇವಲ ಅರುಣ್‌ ಯೋಗಿರಾಜ್‌ ಹೆಸರು ಮಾತ್ರವೇ ಉಲ್ಲೇಖವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
IPL 2024
ಪ್ರಮುಖ ಸುದ್ದಿ14 mins ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ16 mins ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು20 mins ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್21 mins ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Cotton Saree Fashion Roopa Malali, Chandrayaan - 3 ISRO Deputy Project Director
ಫ್ಯಾಷನ್31 mins ago

Cotton Saree Fashion: ಕಾಟನ್ ಸೀರೆ ಫ್ಯಾಷನ್ ಕುರಿತು ಚಂದ್ರಯಾನ 3 ಖ್ಯಾತಿಯ ಇಸ್ರೋ ರೂಪಾ ವ್ಯಾಖ್ಯಾನ ಹೀಗಿದೆ!

Job Alert
ಉದ್ಯೋಗ37 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ45 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ46 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ48 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ50 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202456 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌