Site icon Vistara News

Road Accident : ಯಮಸ್ವರೂಪಿಯಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ; ರಸ್ತೆ ದಾಟುತ್ತಿದ್ದ ಯುವಕ ಸಾವು

Mubark

ಮೈಸೂರು: ಇಲ್ಲಿನ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗ ರಸ್ತೆ ದಾಟುತ್ತಿದ್ದ ಯುವಕನಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ ದುರ್ದೈವಿ.

ಮುಬಾರಕ್‌ ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ಈ ವೇಳೆ ವೇಗವಾಗಿ ಬಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್‌ ತೀವ್ರ ರಕ್ತಸ್ರಾವಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Nagabhushana: ನಾಗಭೂಷಣ ಕಾರು ಅಪಘಾತ; ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ!

ಬೈಕ್‌ ಸವಾರರಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಪರಾರಿ

ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಲಾರಿ ಗುದ್ದಿದ ರಭಸಕ್ಕೆ ಬೈಕ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣ (21), ಆಕಾಶ್‌ (19) ಮೃತರು.

ಕೃಷ್ಣ ಹಾಗೂ ಆಕಾಶ್‌ ಇಬ್ಬರು ಮಾತಾಮಾಣಿಕೇಶ್ವರಿ ನಗರದವರು ಎನ್ನಲಾಗಿದೆ. ಹೊಸಹಳ್ಳಿ ಕ್ರಾಸ್‌ ಬಳಿ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿ ಆಗಿದ್ದಾನೆ.

ಘಟನಾ ಸ್ಥಳಕ್ಕೆ ಯಾದಗಿರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version