Site icon Vistara News

Road Accident : ಗೂಡ್ಸ್‌ ವಾಹನ ಪಲ್ಟಿಯಾಗಿ ಒಬ್ಬ ಸಾವು, 10 ಮಂದಿಗೆ ತೀವ್ರ ಗಾಯ

GT Devegowda and others consoles people injured in accident

ಮೈಸೂರು: ಮೈಸೂರು ತಾಲೂಕಿನ (Mysore News) ಮೇಗಳಾಪುರ ಬಳಿ ಗೂಡ್ಸ್ ವಾಹನ ಪಲ್ಟಿಯಾದ (Goods vehicle overturns) ಪರಿಣಾಮ ಓರ್ವ ಸಾವಿಗೀಡಾಗಿ, ಹತ್ತು ಮಂದಿ ಗಾಯಗೊಂಡಿದ್ದಾರೆ. ಮೈಸೂರು- ತಿ.ನರಸೀಪುರ ಮುಖ್ಯರಸ್ತೆಯಲ್ಲಿ ಮೇಗಳಾಪುರ (Road accident) ಬರುತ್ತದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara hills) ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಸಂಭವಿಸಿದ್ದ ಅಪಘಾತದಲ್ಲಿ ದರ್ಶನ್ ಎಂಬ ಯುವಕ ಸಾವನ್ನಪ್ಪಿದ್ದ. ಉಳಿದ ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರೆಲ್ಲರೂ ಬಂಡಿಪಾಳ್ಯ ಗ್ರಾಮದ ಯುವಕರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ದರ್ಶನ್‌ ಮತ್ತು ಗೂಡ್ಸ್‌ ವಾಹನದಲ್ಲಿದ್ದ ಇತರರು

ಸ್ಥಳೀಯ ಶಾಸಕrad ಜಿ.ಟಿ. ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಯುವಕರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಜಿ‌ ಸಚಿವ ಸಾ.ರಾ. ಮಹೇಶ್, ಹುಣಸೂರು ಶಾಸಕ ಶಾಸಕ ಜಿ ಡಿ ಹರೀಶ್ ಗೌಡ, ಮಾಜಿ ಶಾಸಕರಾದ ಕೆ. ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಸ್ಸಿನ ಸ್ಟೇರಿಂಗ್‌ ಕಟ್‌; ಬೈಕ್‌ನಲ್ಲಿದ್ದ ತಂದೆ-ಮಗ ಮೃತ್ಯು

ರಾಮನಗರ/ತುಮಕೂರು: ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಕಟ್ ಆಗಿದ್ದು, ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೋಟಮಾರನಹಳ್ಳಿ ಗ್ರಾಮದ ತಂದೆ ಸಿದ್ದಯ್ಯ (65), ಮಗ ಅರುಣ್ (28) ಮೃತ ದುರ್ದೈವಿಗಳು.

ತಿಟ್ಟಮಾರನಹಳ್ಳಿಯ ರಾಮಮ್ಮನ ಕೆರೆ ಏರಿ ಮೇಲೆ ಬರುವಾಗ ಈ ಅಪಘಾತ ಸಂಭವಿಸಿದೆ. ತಡೆಗೋಡೆ ಇದ್ದ ಪರಿಣಾಮ 30 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Family Murder : ಒಂದೇ ಕುಟುಂಬದ ನಾಲ್ವರ ಕೊಲೆ; ಹಂತಕನ ಟಾರ್ಗೆಟ್‌ ಏರ್‌ ಹೋಸ್ಟೆಸ್‌?

ಬೈಕ್‌- ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಸವಾರ ಸಾವು

ಬೈಕ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಣವೇನಹಳ್ಳಿ ಬಳಿ ಅಪಘಾತ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಹಾಲಪ್ಪನಹಳ್ಳಿ ನಿವಾಸಿ ಮುನಿರಾಜು (26) ಮೃತ ದುರ್ದೈವಿ.

ಕ್ಯಾಂಟರ್‌ ವಾಹನವು ತುಮಕೂರು ಕಡೆಯಿಂದ ಮಧುಗಿರಿ ಪಟ್ಟಣದ ಕಡೆ ಹೋಗುತ್ತಿತ್ತು. ಮಧುಗಿರಿ ಕಡೆಯಿಂದ ಬೈಕ್‌ ಕೊರಟಗೆರೆ ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಹಿಂಬದಿ ಸವಾರನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version