Site icon Vistara News

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

I will become CM if Siddaramaiah gives permission RV Deshpande

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಮುಡಾ (MUDA Case) ವಿಚಾರವಾಗಿ ತಪ್ಪೇ ಮಾಡಿಲ್ಲ ಅಂತ ಹೇಳುತ್ತಲೇ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ (RV Deshpande) ಪರೋಕ್ಷವಾಗಿ ಸಿಎಂಗೆ ಟಾಂಗ್ ನೀಡಿದ್ರಾ ಎಂಬ ಗುಮಾನಿ ಎದ್ದಿದೆ. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂದಿದ್ದಾರೆ. ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ ಎಂದು ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ರಾಮಕೃಷ್ಣ ಹೆಗೆಡೆ ಮತ್ತು ವಿವೇಕಾನಂದರ ಬಗ್ಗೆ ಹೊಗಳುತ್ತಾಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ವ್ಯಂಗ್ಯ ಮಾಡಿದ್ದಂತೆ ಇತ್ತು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟರು.

ಇದನ್ನೂ ಓದಿ: Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

ಸಿಎಂ ಆಗುವ ಆಸೆ ಬಗ್ಗೆ ದೇಶಪಾಂಡೆ ಹೇಳಿದ್ದೇನು?

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರು, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ

ಇದೇ ವೇಳೆ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ತೊಂದರೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಂದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂ. ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version