Site icon Vistara News

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Self Harming

ಮೈಸೂರು: ಸಾಲಬಾಧೆಗೆ ಹೆದರಿದ ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದೆ. ಯತೀಕ್ (25) ಮೃತ ದುರ್ದೈವಿ.

ಕೆಆರ್‌ ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ನಿವಾಸಿಯಾದ ಯತೀಕ್‌ ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಮನೆಯಲ್ಲಿ ಹಣಕಾಸಿನ ಸಮಸ್ಯೆ ಎಂದು ಕ್ರೆಡಿಟ್ ಕಾರ್ಡ್ ಜತೆಗೆ ಸಾಲ ಪಡೆದಿದ್ದ.

ಸಾಲ ತೀರಿಸಲು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯತೀಕ್‌, ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಷೇರು ಮಾರ್ಕೆಟ್‌ನಲ್ಲೂ ಹಣ ಹೂಡಿಕೆ ಮಾಡಿದ್ದ. ಆದರೆ ಮಾಡಿದ್ದ ಸಾಲಕ್ಕೆ ಇಎಂಐ ಕಟ್ಟಲು ಸಾಧ್ಯವಾಗದೆ ಮನನೊಂದಿದ್ದ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

ಇತ್ತ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ತಂದೆ ಎಚ್ ಟಿ ರಮೇಶ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version