ಮೈಸೂರು: ಉದ್ಯಮಿ ಶರತ್ ಆತ್ಮಹತ್ಯೆ ಸಂಬಂಧಿಸಿದಂತೆ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್‌ನ ಅಧ್ಯಕ್ಷರಾಗಿರುವ ಅಪ್ಪಣ್ಣ ತಮ್ಮ ಸ್ಥಾನದಿಂದ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಉದ್ಯಮಿ ಶರತ್ ಅವರಿಂದ ₹8 ಲಕ್ಷ ಸಾಲ ಪಡೆದಿದ್ದರು. ಆದರೆ, ಸಾಲವನ್ನು ವಾಪಸ್ ಕೊಟ್ಟಿರಲಿಲ್ಲ. ಪ್ರವೀಣ್ ಎಂಬಾತ ಕೂಡ ಇವರಿಗೆ ಪಾಲುದಾರಿಕೆಯಲ್ಲಿ ವಂಚನೆ ಮಾಡಿದ್ದ. ಒಂದೆಡೆ ಪಾಲುದಾರಿಕೆಯಲ್ಲಿ ವಂಚನೆ ಮತ್ತೊಂದೆಡೆ ಸಾಲ ಪಡೆದ ಅಪ್ಪಣ್ಣನಿಂದಲೂ ವಂಚನೆ ಆರೋಪ ಕೇಳಿ ಬಂದಿತ್ತು. ಇದರಿಂದ ಬೇಸತ್ತು ಶರತ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶರತ್ ಕಚೇರಿಗೆ ಶಾಸಕ ಯತೀಂದ್ರ ಭೇಟಿ ಮಾಡಿ ಶರತ್ ಸಹೋದರಿ ಬಳಿ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ನಂತರ ಮಾತನಾಡಿ, ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್‌ನ ಅಧ್ಯಕ್ಷ ಅಪ್ಪಣ್ಣ ಬಂಧನಕ್ಕೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದರು.
ಇದನ್ನೂ ಓದಿ : ಮುಂದಿನ ದಸರಾದೊಳಗೆ ಬೆಂಗಳೂರು- ಮೈಸೂರು ದಶಪಥ ಪೂರ್ಣ: ಪ್ರತಾಪ್‌ಸಿಂಹ
ಘಟನೆಯ ಹಿನ್ನೆಲೆ :
ಪ್ರವೀಣ್ ನಡೆಸುತ್ತಿದ್ದ ಸ್ವದೇಶಿ ಎಂಬ ಸೋಲಾರ್ ಮತ್ತು ಯುಪಿಎಸ್ ಹಾಗೂ ಮನೆಯ ಇಂಟಿರಿಯರ್ಸ್ ಕಂಪನಿಯಲ್ಲಿ ಶರತ್ ಪಾಲುದಾರನಾಗಿದ್ದ. ಪ್ರವೀಣ್ 50% ಪಾಲುದಾರಿಕೆ ಮಾಡಿಕೊಂಡಿದ್ದ. ನಂತರ ಉದ್ಯಮದಲ್ಲಿ ಪಾರ್ಟನ್‌ಶಿಪ್‌ನಿಂದ ಶರತ್‌ನನ್ನು ತೆಗೆದು ಹಾಕಿ 50% ಹಣ ವಾಪಸ್ ನೀಡದೇ ವಂಚಿಸಿದ್ದ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದ ನೊಂದಿದ್ದ ಶರತ್ ಆಗಾಗ ಪತ್ನಿ ಕೃಪಾಲಿನಿ ಬಳಿ ತನ್ನ ನೋವನ್ನ ಹೇಳಿಕೊಳ್ಳುತ್ತಿದ್ದರು. ಏಪ್ರಿಲ್ 18ರಂದು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ನಲ್ಲಿ ಪ್ರವೀಣ್ ಹಾಗೂ ಅಪ್ಪಣ್ಣ ಹೆಸರನ್ನು ಅವರು ಉಲ್ಲೇಖಿಸಿದ್ದರು. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ , ಅಪ್ಪಣ್ಣ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಕೂಡಲೇ ಅವರನ್ನು ಬಂಧಿಸಬೇಕು. ಅಧ್ಯಕ್ಷ ಸ್ಥಾನಕ್ಕೆ ಅಪ್ಪಣ್ಣ ರಾಜೀನಾಮೆ ನೀಡಬೇಕು. ಅವರ ಕುಟುಂಬದ ಜತೆ ನಾವು ಇದ್ದೇವೆ ಎಂದು ಧೈರ್ಯ ತುಂಬಲು ಬಂದಿದ್ದೇವೆ. ಈ ಪ್ರಕರಣದಲ್ಲಿ ಅಪ್ಪಣ್ಣ ನವರ ಕೈವಾಡ ಇದೆ. ಮೃತರ ಪತ್ನಿ ಕೂಡ ಭಯಗೊಂಡು ಮನೆ ಖಾಲಿ ಮಾಡಿದ್ದಾರೆ. ಎಫ್‌ಐಆರ್ ಮಾರ್ಚ್‌ನಲ್ಲಿ ದಾಖಲಾಗಿತ್ತು. ಕೋರ್ಟ್ ಕೂಡ ಅವರ ನಿರೀಕ್ಷಾಣಾ ಜಮೀನು ವಜಾ ಮಾಡಿದೆ. ಈ ಕೂಡಲೇ ಅಪ್ಪಣ್ಣನ್ನು ಬಂಧಿಸಿ , ಪ್ರಾಮಾಣಿಕವಾಗಿ ಈ ಪ್ರಕರಣ ತನಿಖೆ ಆಗಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ : MURDER: ಬೆಳ್ಳಿಯ ಆಸೆಗೆ ಕೆಲಸ ಕೊಟ್ಟ ಸ್ನೇಹಿತನನ್ನೇ ಕೊಂದವನು ಅಂದರ್