Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌ - Vistara News

ಮೈಸೂರು

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

Theft case : ರಾತ್ರೋರಾತ್ರಿ ಪೊಲೀಸ್‌ವೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದಿದ್ದಾರೆ. ಕಳ್ಳರು ಇರುವಾಗಲೇ ಮನೆ ಮಾಲೀಕರು ಬಂದಾಗ ಚಾಕು ಚೂರಿ ತೋರಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

theft case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಚಳ್ಳಕೆರೆ ಪೊಲೀಸರ ವಿರುದ್ಧವೇ ದೂರು ಕೊಟ್ಟ ಯುವಕ

ಯುವಕನೊಬ್ಬ ಚಳ್ಳಕೆರೆ ಪೊಲೀಸರ ವಿರುದ್ಧ ದೂರು ಕೊಟ್ಟಿದ್ದಾನೆ. ಚಿತ್ರದುರ್ಗದ ಚಳ್ಳಕೆರೆ ಡಿವೈಎಸ್‌ಪಿ ರಾಜಣ್ಣ ಅವರಿಗೆ ಪೃಥ್ವಿ ಎಂಬಾತ ದೂರು ನೀಡಿದ್ದಾನೆ. ದೂರಿನ ಪ್ರಕಾರ ಪೃಥ್ವಿ ಪ್ರವಾಸಕೆಂದು ಹೋದಾಗ ಆತನ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ಇದರಿಂದ ಗಾಬರಿಗೊಂಡ ಪೃಥ್ವಿ ತಾಯಿಈ ಸಂಬಂಧ ದೂರು ನೀಡಲು ಹೋದಾಗ ಚಳ್ಳೇಕರೆ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳಿಸಿದ್ದಾರೆ.

ಇತ್ತ ಪೃಥ್ವಿ ಪ್ರವಾಸದಿಂದ ವಾಪಸ್‌ ಬಂದಾಗ ಠಾಣೆಯಲ್ಲಿ ನಡೆದದ್ದನ್ನು ಹೇಳಿದ್ದಾರೆ. ಹೀಗಾಗಿ ಪೃಥ್ವಿ ತನ್ನ ತಾಯಿ ಜತೆಗೆ ವಾಪಸ್‌ ಚಳ್ಳಕೆರೆ ಠಾಣೆಗೆ ತೆರಳಿ, ದೂರು ಸ್ವೀಕರಿಸದ ಸಂಬಂಧ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಪೃಥ್ವಿ ಮೇಲೆ ಹಲ್ಲೆ ನಡೆಸಿದ್ದಲ್ಲದೇ ತಾಯಿ ಮುಂದೆಯೇ ಅವಾಚ್ಯವಾಗಿ ನಿಂದಿಸಿದ್ದಾರೆ. ಪೊಲೀಸರ ನಡೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಕ್ಕೆ ಮೊಬೈಲ್ ಕಸಿದು, ವಿಡಿಯೋ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಕಸಿದು ಸಾಕ್ಷ್ಯವನ್ನು ನಾಶ ಮಾಡಿದವರ‌ ಮೇಲೆ‌ ಕ್ರಮ ಕೈಗೊಳ್ಳಿ ಎಂದು ಡಿವೈಎಸ್‌ಪಿ ಪೃಥ್ವಿ ದೂರು ನೀಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest1 hour ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest3 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 days ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌