Site icon Vistara News

UDR Case: ಕಟ್ಟಡ ಅಡಿಪಾಯದ ಗುಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

udr case

ಮೈಸೂರು: ಕಟ್ಟಡಕ್ಕಾಗಿ ತೋಡಲಾದ ತಳಪಾಯದ ಗುಂಡಿಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕ್ರಿಸ್ಟೋ ಚೆರಿಯನ್ (34) ಸಾವಿಗೀಡಾದ ವ್ಯಕ್ತಿ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಇವರಾಗಿದ್ದಾರೆ.

ವಿಜಯನಗರ ಮೊದಲ ಹಂತದ ನಿವಾಸಿಯಾದ ಇವರು ವಿಜಯನಗರ ಮೊದಲ ಹಂತದ ಟ್ಯಾಂಕ್ ಬಳಿ ತೋಡಲಾಗಿದ್ದ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಮದುವೆಯಾಗಿದ್ದ ಕ್ರಿಸ್ಟೋ ಮಾನಸಿಕವಾಗಿ ಖಿನ್ನರಾಗಿದ್ದರು ಎನ್ನಲಾಗಿದೆ. ವಿಜಯನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಹಲವು ಕೋನಗಳಲ್ಲಿ ನಡೆಯುತ್ತಿದೆ.

ಯುವಕರು ಕೆರೆಯಲ್ಲಿ ಮುಳುಗಿ ಸಾವು

ಬೆಂಗಳೂರು: ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೋಗಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ (Youths Drowned) ಘಟನೆ ದೇವನಹಳ್ಳಿ ತಾಲೂಕಿನ ಕೊಯಿರಾ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ. ಬೈಕ್​ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಜರುಗಿದೆ.

ಆರ್​.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು. ಯುವಕರು ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್‌ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್‌ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suicide Case: ಬಲೂನ್‌ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮೂರ್ತೆದಾರರ ಮುಖಂಡ

Exit mobile version