ಮೈಸೂರು
Vistara News Launch | ಕೆ.ಆರ್. ನಗರದಲ್ಲಿ ವಿಸ್ತಾರ ಕನ್ನಡ ಸಂಭ್ರಮ; ಗಣ್ಯರಿಂದ ವಿಸ್ತಾರ ಚಾನೆಲ್‌ಗೆ ಶುಭ ಹಾರೈಕೆ
ನಿಖರ- ಜನಪರ ಘೋಷವಾಕ್ಯದೊಂದಿಗೆ ಪ್ರಾರಂಭವಾಗಿರುವ ವಿಸ್ತಾರ ನ್ಯೂಸ್ ಚಾನೆಲ್‌ಗೆ ಮೈಸೂರು ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಗಣ್ಯರು ಶುಭ ಕೋರಿದರು.
ಮೈಸೂರು: ವಿಸ್ತಾರ ನ್ಯೂಸ್ ಚಾನೆಲ್ ವತಿಯಿಂದ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪತ್ರಕರ್ತರ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಸ್ತಾರ ಕನ್ನಡ ಸಂಭ್ರಮ (Vistara News Launch) ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ದೊಡ್ಡಸ್ವಾಮೇಗೌಡ ಉದ್ಘಾಟಿಸಿದರು.
ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾತನಾಡಿ, ವಿಸ್ತಾರ ನ್ಯೂಸ್ ಚಾನೆಲ್ ಇಡೀ ರಾಜ್ಯದಾದ್ಯಂತ ಉತ್ತಮವಾಗಿ ಮೂಡಿಬರುತ್ತಿದೆ. ಎಲ್ಲ ತಾಲೂಕುಗಳಲ್ಲಿ ಪಕ್ಷಾತೀತವಾಗಿ ವಾಹಿನಿ ಪ್ರಸಾರವಾಗುತ್ತಿದೆ. ಇಂದು ಕೆ.ಆರ್.ನಗರದಲ್ಲೂ ವಿಸ್ತಾರ ನ್ಯೂಸ್‌ಗೆ ಚಾಲನೆ ನೀಡಿದ್ದು, ವಿಸ್ತಾರ ಜನರಿಗೆ ಸತ್ಯ ಸಂಗತಿಗಳನ್ನು ಬೆಳಕಿಗೆ ತರುವ ಮೂಲಕ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ವಿಧಾನ ಪರಿಷತ್ತು ಬಿಜೆಪಿ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಮಾತನಾಡಿ, ನಾಡಿನ ಖ್ಯಾತ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಅವರ ನೇತೃತ್ವದಲ್ಲಿ ವಿಸ್ತಾರ ಚಾನೆಲ್ ಆರಂಭವಾಗಿರುವುದು ಬಹಳ ಸಂತಸದ ವಿಷಯ. ನುರಿತ, ಅಪಾರ ಅನುಭವ ಇರುವ ಪತ್ರಕರ್ತರು, ಯಾವುದೇ ಪಕ್ಷಪಾತವಿಲ್ಲದೆ, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗಿಸುವ ಮೂಲಕ ಸುದ್ದಿಗಳನ್ನು ಅತ್ಯಂತ ವ್ಯವಸ್ಥಿತವಾಗಿ, ವಾಸ್ತವಿಕತೆಯ ನೆಲೆಗಟ್ಟಿನಲ್ಲಿ ಪ್ರಸಾರ ಮಾಡಬೇಕು. ಜನರ ಸಮಸ್ಯೆಗಳ ಮೇಲೆ ವಿಸ್ತಾರ ಬೆಳಕು ಚೆಲ್ಲುವ ಮೂಲಕ ಚಾನೆಲ್ ಯಶಸ್ವಿಯಾಗಲಿ ಎಂದು ಆಶಿಸಿದರು.
ಪುರಸಭೆ ಅಧ್ಯಕ್ಷ ಪ್ರಕಾಶ್ ಅಲಿಯಾಸ್ ಕೋಳಿ ಪ್ರಕಾಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಿವರಾಮು ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ | Vistara News Launch | ವಿಸ್ತಾರ ನ್ಯೂಸ್ ಕಚೇರಿಗೆ ಶ್ರೀ ಮಧು ಪಂಡಿತ ದಾಸ ಭೇಟಿ, ಶುಭ ಹಾರೈಕೆ
ಕರ್ನಾಟಕ
BJP Protest: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತಕ್ಕೆ ಆಕ್ರೋಶ
BJP Protest: ಬಿಜೆಪಿಯಿಂದ ಮಂಗಳವಾರವೂ ವಿವಿಧೆಡೆ ಪ್ರತಿಭಟನೆ ಮುಂದುವರಿಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಸೇರಿ ಮೂರು ಜಿಲ್ಲಾ ಘಟಕಗಳಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ವಿದ್ಯುತ್ ದರ ಏರಿಕೆ, ಹಾಲಿನ ದರ ಕಡಿತ, ಗ್ಯಾರಂಟಿ ಯೋಜನೆಗಳಿಗೆ ಹಲವು ಷರತ್ತು ಅನ್ವಯ ಸೇರಿ ರಾಜ್ಯ ಸರ್ಕಾರ ವಿವಿಧ ನೀತಿ, ನಿರ್ಧಾರಗಳನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ವಿವಿಧೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ವಿವಿಧ ಷರತ್ತುಗಳ ಹೇರಿಕೆ ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಿಎಂ ಹಾಗೂ ಡಿಸಿಎಂ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಯಾವುದೇ ಷರತ್ತುಗಳ ಹಾಕದೇ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ ಒತ್ತಾಯಿಸಿದರು.
ಬಿಟ್ಟಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಏರಿರುವ @INCKarnatakaದ #ATMsarakara ಕ್ಕೆ ಬಿಜೆಪಿ ರಾಜ್ಯದಾದ್ಯಂತ ಇಂದು ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸಿದೆ.
— BJP Karnataka (@BJP4Karnataka) June 5, 2023
ಎಲ್ಲರಿಗೂ ಫ್ರೀ ಎನ್ನುತ್ತಲೇ ದಿಢೀರ್ ಬೆಲೆಗಳ ಏರಿಕೆ ಮಾಡುತ್ತಿರುವ, ಹಾಲಿನ ಪ್ರೋತ್ಸಾಹಧನ ಕಡಿತಗೊಳಿಸಿರುವ @siddaramaiah ನೇತೃತ್ವದ ಸರ್ಕಾರ ಜನರ ಹೊಟ್ಟೆ ಮೇಲೆ… pic.twitter.com/Y2hofA9pnG
ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಕಾರ್ಯಕರ್ತರು
ಮೈಸೂರು: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ನೀಡಿತ್ತು. ಈಗ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿದೆ. ರೈತರಿಗೆ ನೀಡುತ್ತಿದ್ದು ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿದೆ. ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಸಾರ್ವಜನಿಕರಿಗೆ ಬರೆ ಹಾಕುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವುದಾಗಿ ಹೇಳಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ತೊಲಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪರಾಜಿತ ಅಭ್ಯರ್ಥಿಗಳಾದ ಕವೀಶ್‌ಗೌಡ, ಸಂದೇಶ್ ಸ್ವಾಮಿ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಿಭಾಗೀಯ ಪ್ರಭಾರ ಮೈ.ವಿ.ರವಿಶಂಕರ್ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಗೋ ಭಕ್ಷಕ ಸಿದ್ದರಾಮಯ್ಯ ಎಂದು ಆಕ್ರೋಶ
ಕೋಲಾರ: ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗೋ ಭಕ್ಷಕ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಧಿಕ್ಕಾರ ಕೂಗಿದರು. ಇದೇ ವೇಳೆ ಬಸ್ ನಿಲ್ದಾಣ ವೃತ್ತದಲ್ಲಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ | Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಿರಿ
ವಿಜಯನಗರ: ವಿದ್ಯುತ್ ಬಿಲ್ ದರ ಏರಿಕೆ ವಿರೋಧಿಸಿ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಡಾ. ಪುನೀತ್ ರಾಜ್‍ಕುಮಾರ್ ವೃತ್ತದಿಂದ, ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು, ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕು ಎಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಮಂಗಳೂರು, ಚಾಮರಾಜನಗರ, ಬೀದರ್ ಸೇರಿ ವಿವಿಧೆಡೆ ಪ್ರತಿಭಟನೆ
ಹಾವೇರಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಹೋರಾಟ
ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕಿರುವುದಕ್ಕೆ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ವಿದ್ಯುತ್ ಬಿಲ್ ಏರಿಕೆಗೆ ಖಂಡನೆ ವ್ಯಕ್ತಪಡಿಸಿದರು.
ಕಾರಟಗಿಯಲ್ಲಿ ಪ್ರತಿಭಟನಾ ಮೆರವಣಿಗೆ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ಖಂಡಿಸಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಒಇ ಕಾರ್ಯಾಲಯದಿಂದ ಎಪಿಎಂಸಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಿದ್ಯುತ್ ಬೆಲೆ ಏರಿಕೆ, ಹಾಲಿನ ಖರೀದಿ ದರ ಇಳಿಕೆ ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಹಾಗೂ ಸೀಕಲ್ಲು ರಾಮಚಂದ್ರಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆಯ ದೃಶ್ಯ
ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ
ಧಾರವಾಡ: ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಅಳವಡಿಕೆ ಹಾಗೂ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | 200 ಯುನಿಟ್ ಫ್ರೀ ಕೊಡಿ ಅನ್ನುವವರಿಗೆ ವಿವೇಕ ಇದೆಯಾ? ಈಗೆಷ್ಟು ಬಳಸ್ತಿದ್ದಾರೋ ಅಷ್ಟೇ ಬಳಸಬೇಕೆಂದ ಸಿದ್ದರಾಮಯ್ಯ
ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಹೋರಾಟ
ಮಂಗಳೂರು: ನಗರದ ಮಿನಿ ವಿಧಾನಸೌಧ ಮುಂಭಾಗ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಕಾರ್ಯಕರ್ತರು ಧಿಕ್ಕಾರ ಘೋಷಣೆ ಕೂಗಿದರು.
ಕರ್ನಾಟಕ
World Environment Day : ಕೆರೆ ಉಳಿಸಿ ಮರ ಬೆಳೆಸಿ ಎಂದ ಸಾಲುಮರದ ತಿಮ್ಮಕ್ಕ; ವಿಸ್ತಾರ ಅಭಿಯಾನಕ್ಕೆ ಭಾರಿ ಸ್ಪಂದನೆ
World Environment Day: ಎಲ್ಲೆಡೆ ಪರಿಸರ ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಗಿಡ ನೆಡುವ ಕಾರ್ಯಕ್ರಮದ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ಕೂಡ ಸಾಥ್ ನೀಡಿದ್ದಾರೆ.
ಮೈಸೂರು: ಹಸಿರೇ ಉಸಿರಾಗಿದ್ದು, ಕಾಡು ಬೆಳೆದರಷ್ಟೇ ನಾಡು ಉಳಿಯಲು ಸಾಧ್ಯವಾಗಿದೆ. ಹೀಗಾಗಿ ಕೆರೆ ಉಳಿಸಿ, ಮರ ಬೆಳೆಸಿ. ಗಿಡ ನೆಟ್ಟರೆ ಮರವಾಗುತ್ತದೆ, ನನ್ನಂಥ ಇಳಿ ವಯಸ್ಸಿನವರಿಗೆ ನೆರಳಾಗುತ್ತದೆ ಎಂದು ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ (World Environment Day) ಹಿನ್ನೆಲೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಶಾಸಕ ಜಿ.ಡಿ.ಹರೀಶ್‌ಗೌಡ, ಶಿಕ್ಷಕರು, ಮುಖಂಡರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನನಗೆ ನನ್ನ ಪತಿಗೆ ಏನೂ ಇರಲಿಲ್ಲ. ಆಗ ಮರ ನೆಟ್ಟು ಬೆಳೆಸಿದೆವು. ಈಗ ಎಲ್ಲ ಸೌಲಭ್ಯ, ಸೌಕರ್ಯಗಳೂ ಇವೆ. ಆದಷ್ಟು ಕೆರೆ, ಕಲ್ಯಾಣಿ ಕಟ್ಟಿಸಿ, ಇದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತದೆ ಎಂದು ಸಲಹೆ ನೀಡಿದರು.
ಮೆಡಿಕಲ್ ವಿದ್ಯಾರ್ಥಿಗಳ ಪರಿಸರ ಕಾಳಜಿ
ರಾಯಚೂರಿನಲ್ಲಿ ವಿಸ್ತಾರ ನ್ಯೂಸ್ ಪರಿಸರ ಕಾಳಜಿಗೆ ರಿಮ್ಸ್ ಆಸ್ಪತ್ರೆಯ ಮೆಡಿಕಲ್ ವಿದ್ಯಾರ್ಥಿಗಳು ಸಾಥ್ ನೀಡಿದರು. ಕ್ಯಾಂಪೆಸ್‌ನಲ್ಲಿ ಸಸಿ ನೆಟ್ಟು, ಮೂರು ಜನ ವಿದ್ಯಾರ್ಥಿಗಳಿಗೆ ಒಂದು ಸಸಿ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಪರಿಸರ ದಿನದಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಗ್ರೀನ್ ರಾಯಚೂರು, ಶಿಲ್ಪಾ ಫೌಂಡೇಶನ್, ರಿಮ್ಸ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಯುಕ್ತಾಶಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಲೆಗಳಿಂದ ತಯಾರಾದ ಸೆಲ್ಫಿ ಬಾಕ್ಸ್
ಹಾವೇರಿಯಲ್ಲಿಯು ವಿಸ್ತಾರ ನ್ಯೂಸ್ ಹಾಗೂ ಎಂ ಆರ್ ಎಂ ಶಾಲೆ, ಎಂಆರ್ ಎಂ ಪಿಯು ಕಾಲೇಜು ಸಹಯೋಗದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ನಗರದ ಶಿವಾಜಿನಗರ ನಾಲ್ಕನೇ ಕ್ರಾಸ್‌ನಲ್ಲಿರುವ ಶಾಲೆಯ ಆವರಣದಲ್ಲಿ ಪುಟಾಣಿ ಮಕ್ಕಳು ಸಸಿ ನೆಟ್ಟರು. ಬಳಿಕ ಜಾಥಾ ನಡೆಸಿ ಜನರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಿದರು. ವಿಶೇಷ ಎಂದರೆ ಶಾಲಾ ಆವರಣದಲ್ಲಿ ಹಸಿರು ಎಲೆಯಿಂದ ತಯಾರಿಸಿದ್ದ ಸೆಲ್ಫಿ ಬಾಕ್ಸ್‌ನಲ್ಲಿ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಹಸಿರು ಎಲೆಗಳನ್ನು ಕಟ್ಟಿಕೊಳ್ಳುವ ಮೂಲಕ ಮಕ್ಕಳು ವಿಶಿಷ್ಟವಾಗಿ ಪರಿಸರ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು.
ಇತ್ತ ರಾಣೆಬೆನ್ನೂರಿನಲ್ಲಿ ನಗರದ ರೋಟರಿ ಪ್ರೌಢಶಾಲೆಯಲ್ಲಿ ಸಸಿ ನೆಡಲಾಯಿತು. ರೋಟರಿ ಕ್ಲಬ್, ರೋಟರಿ ಆಂಗ್ಲ ಮಾಧ್ಯಮ ಶಾಲೆ , ರೋಟರಿ ವಿಜ್ಞಾನ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು. ಶಿಗ್ಗಾವಿಯ ರಂಭಾಪುರಿ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸಂಭ್ರಮದಿಂದ ಪರಿಸರ ದಿನವನ್ನು ಆಚರಿಸಿದರು.
ಇದನ್ನೂ ಓದಿ: Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ಗಿಡ ನೆಟ್ಟರು ಸಚಿವ ಕೆ. ಎಚ್ ಮುನಿಯಪ್ಪ
ದೇವನಹಳ್ಳಿ ಪಟ್ಟಣದ ಚಿಕ್ಕಕೆರೆ ಬಳಿ ಪರಿಸರ ದಿನದ ಅಂಗವಾಗಿ ಗಿಡ ನೆಡಲಾಯಿತು. ಬಯೋಮಾ ಎನ್ವಿರಾಲ್ಮೆಂಟ್ ಟ್ರಸ್ಟ್ ಸಹಯೋಗದಿಂದ ನಿರ್ಮಾಣ ಮಾಡಿದ ವಾಟರ್ ಪಿಲ್ಟರ್ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು. ಸಿಎಸ್ಆರ್ ನಿಧಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ವಾಟರ್ ಪ್ಲಾಂಟ್ ಉದ್ಘಾಟನೆ ಮಾಡಿ, ಗಿಡ ನೆಟ್ಟು ನೀರೆರೆದರು. ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಒಂದೊಂದು ಗಿಡ ನೆಡುವಂತೆ ಮನವಿ ಮಾಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Attempt Murder Case: ಜೈ ಶ್ರೀ ರಾಮ್ ಅನ್ನಂಗಿಲ್ಲ, ಈಗಿರೋದು ನಮ್ಮ ಸರ್ಕಾರವೆಂದು ಚಾಕು ಇರಿದ ಗುಂಪು!
ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆಂಬ ಆರೋಪದ ಮೇರೆಗೆ ಅನ್ಯಕೋಮಿನ ಯುವಕರ ಗುಂಪು, ಯುವಕನಿಗೆ ಚಾಕು ಇರಿದು ಹಲ್ಲೆ (Attempt Murder Case) ನಡೆಸಿದ್ದಾರೆ.
ಮೈಸೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಧರ್ಮ ದಂಗಲ್ ಶುರುವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪದ ಬೆನ್ನಲ್ಲೇ ಕೋಮು ಸೌಹಾರ್ದತೆ ಕಾಪಾಡುವುದು ಸವಾಲಾಗಿ ಪರಿಣಮಿಸಿದೆ. ಈ ಹೊತ್ತಿನಲ್ಲಿ ಮೈಸೂರಿನ ನಂಜನಗೂಡಿನಲ್ಲಿ ಗಲಾಟೆ ನಡೆದಿದ್ದು, ಸೂಕ್ಷ್ಮ ಸ್ವರೂಪ ಪಡೆದುಕೊಳ್ಳುತ್ತಿದೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಅನ್ಯಕೋಮಿನ ಯುವಕರ ಗುಂಪು, ಹಿಂದು ಯುವಕನಿಗೆ ಚಾಕು ಇರಿದಿರುವ ಘಟನೆ ಭಾನುವಾರ ನಡೆದಿದೆ. ಪ್ರಸಾದ್ (22) ಚಾಕು ಇರಿತಕ್ಕೊಳಗಾದವರು. ಇಲ್ಲಿ ಜೈ ಶ್ರೀರಾಮ್ ಎಂಬ ಘೋಷಣೆ ಬಗ್ಗೆ ಅಪಸ್ವರ ಕೇಳಿಬಂದಿದೆ ಎನ್ನಲಾಗಿದ್ದು, ಅನ್ಯ ಕೋಮಿನ ಯುವಕರು ಈಗ ನಮ್ಮ ಸರ್ಕಾರ ಇದೆ. ನೀವು ಹೀಗೆ ಹೊರಗೆಲ್ಲ ಯಾವ ಆಚರಣೆಯನ್ನೂ ಮಾಡಕೂಡದು ಎಂದು ಅವಾಜ್ ಹಾಕಿರುವ ಆರೋಪವೂ ಕೇಳಿಬಂದಿದೆ.
ನೀಲಕಂಠನಗರದ ಯುವಕರ ಗುಂಪೊಂದು ಅಂಗಡಿ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಿಡಿಗೇಡಿಗಳ ಗುಂಪು, ಇದು ನಮ್ಮ ಸರ್ಕಾರ. ನೀವು ಹಿಂದುಗಳು ಏನೂ ಮಾಡಲು ಆಗುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಇನ್ಮುಂದೆ ನೀವೆಲ್ಲ ರೋಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸುವಂತಿಲ್ಲ. ಎಲ್ಲ ನಿಮ್ಮ ಮನೆಗಳಲ್ಲಿ ಆಚರಿಸಬೇಕು ಅಷ್ಟೇ ಎಂದು ಅವಾಜ್ ಹಾಕಿದ್ದಾರೆ. ಈ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಅಲ್ಲಿಗೆ ಬಜ್ಜಿ ತಿನ್ನಲು ಬಂದ ಪ್ರಸಾದ್‌ಗೆ, ಇಲ್ಲು ಅಲಿಯಾಸ್ ಇಸ್ಮಾಯಿಲ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ.
ಚಾಕು ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಸಾದ್ ಘಟನೆ ಸಂಬಂಧ ಮಾತನಾಡಿದ್ದು, ಭಾನುವಾರ ರಾತ್ರಿ ಯಾರದ್ದೋ ಹುಟ್ಟು ಹಬ್ಬದ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಏಳೆಂಟು ಜನರ ಗುಂಪು ಗಲಾಟೆ ಮಾಡುತ್ತಿತ್ತು. ಬಜ್ಜಿ ತಿನ್ನಲು ಹೋಗಿದ್ದ ನನ್ನನ್ನು ಎಳೆದುಕೊಂಡು ಹೊಡೆದರು. ಸಲ್ಮಾನ್ ಎಂಬಾತ ಕಬ್ಬಿಣದ ಹಿಡಿಯಿಂದ ಹಣೆಗೆ ಬಲವಾಗಿ ಹೊಡೆದ. ಇಸ್ಮಾಯಿಲ್ ಎಂಬಾತ ಚಾಕುವಿನಿಂದ ಇರಿದು ಬಿಟ್ಟ ಎಂದು ಘಟನೆಯನ್ನು ವಿವರಿಸಿದರು. ಗಲಾಟೆ ವೇಳೆ ಯಾರೋ ಭಾರತ್ ಮಾತಾಕಿ ಜೈ ಎಂದು ಕೂಗಿದರು, ಆದರೆ ನಾನು ಕೂಗಲಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಜೈ ಶ್ರೀರಾಮ್ ಘೋಷಣೆಯನ್ನೂ ಕೂಗಲಾಗಿದೆ ಎಂದು ಹೇಳಲಾಗುತ್ತಿದೆ.
ಚಾಕು ಇರಿತಕ್ಕೊಳಗಾದ ಪ್ರಸಾದ್‌ಗೆ ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ಧ ಎಫ್‌ಐಆರ್ ಹಾಕಲಾಗಿದೆ.
ಇದನ್ನೂ ಓದಿ: Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು
ಏರಿಯಾದಲ್ಲಿ ಹವಾ ಮೆಂಟೇನ್ ಗೀಳು
ನಂಜನಗೂಡು ಗಲಾಟೆ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದೆ. ಏರಿಯಾದಲ್ಲಿ ಹವಾ ಸೃಷ್ಟಿಸಲು ಆರೋಪಿಗಳು ಕತ್ತಿ, ತಲವಾರ್ ಹಿಡಿದು ಓಡಾಟ ನಡೆಸುತ್ತಿರುವುದು ತಿಳಿದು ಬಂದಿದೆ. ನೀಲಕಂಠನಗರ ಗಲಾಟೆ ಆರೋಪಿಗಳು ರೀಲ್ಸ್ ಮಾಡಿರುವ ವಿಡಿಯೊ ಕೂಡ ವೈರಲ್ ಆಗಿದೆ.
ಉಡುಪಿ
Weather report: 13 ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾನೆ ವರುಣ; ಇರಲಿದೆ ಗುಡುಗು, ಸಿಡಿಲು, ಬೀಸಲಿದೆ ಬಿರುಗಾಳಿ
Weather Update: ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದ್ದರೂ ವಾತಾವರಣದಲ್ಲಿ ತಾಪಮಾನ ಏರಿಕೆ ಆಗುತ್ತಿದೆ. ಜೂನ್ 5-6ರಂದು ಗುಡುಗು ಸಹಿತ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉಷ್ಣಾಂಶದ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ (Weather report) ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain alert) ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಲು ಇದ್ದರೆ, ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇನ್ನು ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಕೊಡಗು ಮತ್ತು ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಇರಲಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಿರುಗಾಳಿ, ಗುಡುಗು ಮುನ್ನೆಚ್ಚರಿಕೆ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಮಳೆ ನಡುವೆಯೂ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಯಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.
ಇದನ್ನೂ ಓದಿ: Hubballi News: ಅಮ್ಮನ ಸೀರೆಯಲ್ಲಿ ನೇಣಿಗೆ ಕೊರಳೊಡ್ಡಿದ ಸಹೋದರಿಯರು
ರಾಜ್ಯದಲ್ಲಿ ಶನಿವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಇತ್ತು. ಕೊಡಗಿನ ನಾಪೋಕ್ಲು 5 ಸೆಂ.ಮೀ, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅರಕಲಗೂಡು, ಮೂರ್ನಾಡಲ್ಲಿ ತಲಾ 2 ಸೆಂ.ಮೀ, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ ಕೆವಿಕೆ, ಮೈಸೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಜತೆಗೆ ಗರಿಷ್ಠ ಉಷ್ಣಾಂಶ 42.0 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ7 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ