Site icon Vistara News

ಮೈಸೂರನ್ನು ಪ್ಯಾರಿಸ್ ಮಾಡುತ್ತೇವೆ ಎಂದು ಮೋದಿ ಹೇಳಿಯೇ ಇಲ್ಲ ಎಂದ ಪ್ರತಾಪ್ ಸಿಂಹ

ಪ್ರತಾಪ ಸಿಂಹ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರನ್ನು ಪ್ಯಾರಿಸ್‌ ಮಾಡುತ್ತೇನೆ ಎಂದು ಎಲ್ಲಿ  ಹೇಳಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದ್ದಾರೆ.

ʼʼಮೈಸೂರಿಗೆ ಪ್ಯಾರಿಸ್‌ನಷ್ಟು ಪ್ರವಾಸಿಗರನ್ನು ಸೆಳೆಯುವ ಶಕ್ತಿ ಇದೆ. ಅದಕ್ಕೆ ಪೂರಕವಾದ ಸಂಪರ್ಕ ಸೌಲಭ್ಯವನ್ನು ಅವರು ನೀಡಿದ್ದಾರೆ. ಆದರೆ ಎಲ್ಲಿಯೂ ಪ್ಯಾರಿಸ್‌ ಮಾಡುತ್ತೇನೆ ಎಂದು ಹೇಳಿಲ್ಲ. ಪ್ಯಾರಿಸ್‌ಗೆ 400 ವರ್ಷಗಳ ಇತಿಹಾಸವಿದೆ. ಐಫೆಲ್ ಟವರ್, ಮ್ಯೂಸಿಯಂ, ಅರಮನೆ ಮಾಡಲು 400 ವರ್ಷ ಹಿಡಿದಿದೆ. ಪ್ಯಾರಿಸ್ 2014ರಲ್ಲಿ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಿತ್ತು. ಮೈಸೂರಿಗೂ ಆ ಶಕ್ತಿ ಇದೆ ಎಂದು ಮೋದಿ ಹೇಳಿದ್ದರುʼʼ ಎಂದು ಪ್ರತಾಪಸಿಂಹ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ | ಕೋಡಿಮಠ ಸ್ವಾಮೀಜಿ, ಕುಮಾರಸ್ವಾಮಿ, ಸಿದ್ದರಾಮಯ್ಯ ಎಲ್ಲ ಒಂದೆ: ಯಾರ ಮಾತೂ ಗಂಭೀರವಲ್ಲ ಎಂದ ಪ್ರತಾಪ್‌ ಸಿಂಹ

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರನ್ನು ಪ್ಯಾರೀಸ್‌ ಮಾಡುತ್ತೇನೆ ಎಂದಿದ್ದರು. ಆದರೆ ಮೈಸೂರು ಇನ್ನೂ ಮೂಲಸೌಕರ್ಯ ಕೊರತೆಯಿಂದ ಬಳಲುತ್ತಿದೆ ಎಂಬ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್‌ಸಿಂಹ ಈ ಹೇಳಿಕೆ ನೀಡಿದ್ದಾರೆ.

ಈ ನಡುವೆ, ʼʼಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯೋಗ ದಿನದ ಕಾರ್ಯಕ್ರಮದ ಕುರಿತು ಇನ್ನೂ ಸ್ಥಳ ನಿಗದಿಯಾಗಿಲ್ಲ. ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಸ್ಥಳದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆʼʼ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮೈಸೂರಿಗೆ ಬರುತ್ತಿದ್ದಾರೆ. ಬಂದ ನಂತರ ಸ್ಥಳ ನಿಗದಿ ಮಾಡಲಾಗುವುದು. ಪಕ್ಷಾತೀತವಾಗಿ ಜನಪ್ರತಿನಿಧಿಗಳು, ಯೋಗ ಸಂಸ್ಥೆಗಳ ಪ್ರಮುಖರನ್ನು ಒಳಗೊಂಡ ಸಮಿತಿಯಲ್ಲಿ ಚರ್ಚೆ ಮಾಡಿ ಸೂಕ್ತ ತೀರ್ಮಾನ‌ ತೆಗೆದುಕೊಳ್ಳುತ್ತೇವೆʼʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | ಮುಂದಿನ ದಸರಾದೊಳಗೆ ಬೆಂಗಳೂರು- ಮೈಸೂರು ದಶಪಥ ಪೂರ್ಣ: ಪ್ರತಾಪ್‌ಸಿಂಹ

Exit mobile version