Yathindra Siddaramaiah : ಟ್ರಾನ್ಸ್‌ಫರ್‌ ಆಗಿರುವ ವಿವೇಕಾನಂದ ಯಾರೆಂದೇ ಗೊತ್ತಿಲ್ಲ!; ಯತೀಂದ್ರ ಸ್ಪಷ್ಟನೆ Vistara News

ಕರ್ನಾಟಕ

Yathindra Siddaramaiah : ಟ್ರಾನ್ಸ್‌ಫರ್‌ ಆಗಿರುವ ವಿವೇಕಾನಂದ ಯಾರೆಂದೇ ಗೊತ್ತಿಲ್ಲ!; ಯತೀಂದ್ರ ಸ್ಪಷ್ಟನೆ

yathindra Siddaramaiah : ಪೊಲೀಸ್‌ ಇನ್ಸ್‌ಪೆಕ್ಟರ್‌ ವಿವೇಕಾನಂದ ಟ್ರಾನ್ಸ್‌ ಫರ್‌ ಗೂ ನನಗೂ ಸಂಬಂಧವಿಲ್ಲ. ನಾನು ಹೇಳಿದ ವಿವೇಕಾನಂ ಅವರೇ ಬೇರೆ ಎಂದಿದ್ದಾರೆ ಯತೀಂದ್ರ ಸಿದ್ದರಾಮಯ್ಯ.

VISTARANEWS.COM


on

yathindra Siddaramaiah vivekananda inspector
ಇನ್ಸ್‌ ಪೆಕ್ಟರ್‌ ವಿವೇಕಾನಂದ ಯತೀಂದ್ರ ಸಿದ್ದರಾಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಕೆಲವು ದಿನಗಳ ಹಿಂದೆ ಜನತಾ ದರ್ಶನ ಕಾರ್ಯಕ್ರಮದ ನಡುವೆ ಸಿಎಂ ಸಿದ್ದರಾಮಯ್ಯ (CM siddaramaiah) ಅವರ ಜತೆ ಫೋನ್‌ನಲ್ಲಿ ಮಾತನಾಡುವ ವೇಳೆ ʻವಿವೇಕಾನಂದ ಎಲ್ಲಿಗೆʼ (Vivekananda row) ಎಂದು ಸ್ಪಷ್ಟವಾಗಿ ಹೇಳಿರುವ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಅವರು ಈಗ ʻನನಗೆ ವಿವೇಕಾನಂದ ಯಾರೆಂದೇ ಗೊತ್ತಿಲ್ಲʼ ಎಂದು ಹೇಳಿದ್ದಾರೆ. ನಾನು ಹೇಳಿದ ವಿವೇಕಾನಂದ ಬೇರೆ, ಟ್ರಾನ್ಸ್‌ ಫರ್‌ ಆದ ವಿವೇಕಾನಂದ ಅವರಿಗೂ ಸಂಬಂಧವೇ ಇಲ್ಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಜತೆ ಮಾತನಾಡುವ ವೇಳೆ ʻವಿವೇಕಾನಂದ ಹೆಸರು ಹೇಗೆ ಬಂತು, ನಾನು ಕೊಟ್ಟ ಪಟ್ಟಿಯಲ್ಲಿ ಇರಲಿಲ್ಲ. ಯಾರು ತಿದ್ದಿದ್ದುʼ ಎಂದೆಲ್ಲ ಚೀರಾಡಿದ್ದ ಯತೀಂದ್ರ, ವಿಶೇಷಾಧಿಕಾರಿ ಮಹದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ನಾನು ಕೊಟ್ಟ ಲೀಸ್ಟನ್ನೇ ಫೈನಲ್‌ ಮಾಡಬೇಕು ಎಂದು ಸಿದ್ದರಾಮಯ್ಯ ಅವರಿಗೂ ಆಗ್ರಹಿಸಿದ್ದರು.

ಈ ನಡುವೆ, ನವೆಂಬರ್‌ 17ರಂದು 21 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ನಾಲ್ಕನೇ ಹೆಸರಾಗಿ ವಿವೇಕಾನಂದ ಅವರ ಹೆಸರು ಇರುವುದು ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ವಿವೇಕಾನಂದ ಅವರನ್ನು ಇಂಟೆಲಿಜೆನ್ಸ್‌ ವಿಭಾಗದಿಂದ ಮೈಸೂರಿನ ವಿವಿ ಪುರಂ ಠಾಣೆಗೆ ವರ್ಗ ಮಾಡಲಾಗಿದೆ. ಈ ವಿಚಾರವನ್ನು ಇಟ್ಟುಕೊಂಡು ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ಇದೇ ವಿವೇಕಾನಂದ ಅವರ ಬಗ್ಗೆ ಯತೀಂದ್ರ ಪ್ರಸ್ತಾಪ ಮಾಡಿದ್ದು ಎಂದಿದ್ದಾರೆ. ಈ ಮೂಲಕ ಇದೊಂದು ವರ್ಗಾವಣೆ ದಂಧೆ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ನಾನು ಹೇಳಿದ ವಿವೇಕಾನಂದ ಅವರೇ ಬೇರೆ ಎಂದ ವಿಜಯೇಂದ್ರ

ವಿಡಿಯೊ ವೈರಲ್‌ ಬಳಿಕ ಮೊದಲ ಬಾರಿಗೆ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ʻʻನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಈಗ ಅದರ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ಯಾಕೆ ತೆಗೆದುಕೊಂಡು ಹೋಗುತ್ತಾರೆ. ಇವರ ಅವಧಿಯಲ್ಲಿ ಲಿಸ್ಟ್ ಅಂದರೇ ವರ್ಗಾವಣೆ ಅಂದರೇ ಅದು ದಂಧೆಯಾಗಿತ್ತಾ?ʼʼ ಎಂದು ಪ್ರಶ್ನೆ ಮಾಡಿದ್ದಾರೆ.

ʻʻಇವರ (ಎಚ್.‌ಡಿ ಕುಮಾರಸ್ವಾಮಿ) ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ?ʼʼ ಎಂದು ಕೇಳಿರುವ ಅವರು, ʻʻನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರು ಅದರಲ್ಲಿ ತಪ್ಪೇನಿದೆ.. ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೇ ಇವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ವಾʼʼ ಎಂದಿದ್ದಾರೆ.

ʻʻಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೆ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಎಲ್ಲಾ ವಿಚಾರವಾಗಿ ನನ್ನ ಹೆಸರನ್ನು ಡ್ರ್ಯಾಗ್ ಮಾಡಬೇಡಿʼʼ ಎಮದು ಮೈಸೂರಿನಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : Yathindra Siddaramaiah: ಯತೀಂದ್ರ ಮಾತಿಗೆ ತಾಳೆಯಾದ ವಿವೇಕಾನಂದ ವರ್ಗ, ʼಸಾಕ್ಷಿ ಇಲ್ಲಿದೆ ನೋಡಿʼ ಎಂದ ಎಚ್‌ಡಿಕೆ

ವಿವೇಕಾನಂದ ಯಾರು ಎನ್ನುವುದು ನನಗೆ ಗೊತ್ತಿಲ್ಲ

ನೀವು ಹೇಳುತ್ತಿರುವ ವಿವೇಕಾನಂದ ಯಾರು ಎನ್ನುವುದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಟ್ರಾನ್ಸ್‌ಫರ್ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು.? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನು ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧʼʼ ಎಂದು ಕೇಳಿರುವ ಅವರು, ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ‌. ಇವತ್ತಿನ ವರ್ಗಾವಣೆ ಹೆಸರು ನನಗೆ ಗೊತ್ತಿಲ್ಲ. ಅವರಿಗೆ ಸಂಬಂಧಿಸಿದಂತೆ ಸಿಎಸ್‌ಆರ್‌ ಫಂಡ್‌ ವಿಚಾರ ನಾನು ಮಾತನಾಡಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾರೆ.

ʻʻಆಧಾರವಿಲ್ಲದೆ ಆರೋಪ ಮಾಡುವುದು ನೀಚ ರಾಜಕಾರಣʼʼ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ʻʻಕುಮಾರಸ್ವಾಮಿ ಅವರಿಗೆ ತಂದೆಯವರ ವಿಚಾರದಲ್ಲಿ ಏನೂ ಆರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ಕುಟುಂಬದವರನ್ನು ಬಳಸಿಕೊಂಡು ಅವರನ್ನು ಹಣಿಯುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದರಲ್ಲಾದರೂ ಸಿಎಂ ಕುಟುಂಬವನ್ನು ಸಿಲುಕಿಸುವ ಯತ್ನ ನಡೆಯುತ್ತಿದೆ. ಹಿಂದೆ ವೈಎಸ್‌ಟಿ ಅಂತ ಆರೋಪ ಕೇಳಿಬಂದಿತ್ತು. ಆ ಆರೋಪ ಮಾಡಿವದವರು ಅವರದ್ದೇ ಪಕ್ಷದವರುʼʼ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Video viral : ಬಸ್ಸಿಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದೆ. ಬಸ್‌ ಚಾಲಕ ಪ್ರಯಾಣಿಕರನ್ನು ರಕ್ಷಿಸಿದ್ದು ಮಾತ್ರವಲ್ಲ ಕಾರಿಗೆ ಅಂಟಿಕೊಂಡ ಬಸ್ಸನ್ನು ಬೇರ್ಪಡಿಸಲು ಮಾಡಿದ ಪ್ರಯತ್ನ ಮತ್ತು ಅದರಲ್ಲಿ ಯಶಸ್ವಿಯಾದ ಕಥೆ ಇಲ್ಲಿದೆ.

VISTARANEWS.COM


on

Car catches fire after hitting bus
Koo

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

Car catches fire after hitting bus
ತಡೆಗೋಎಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

Car catches fire after hitting bus
ರಸ್ತೆ ವಿಭಜಕವನ್ನು ಹಾಯಿಸಿ ಕಾರು ಬೇರ್ಪಡಿಸಿದ ಬಗೆ

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಒಟ್ಟಾರೆ ಘಟನೆಯ ಫುಲ್‌ ವಿಡಿಯೊ ಇಲ್ಲಿದೆ.

Continue Reading

ಕರ್ನಾಟಕ

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ತಮಿಳುನಾಡಿನಲ್ಲಿ ಮೈಚಾಂಗ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಮಳೆ ಸಂಬಂಧಿತ ಅವಘಡದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ಗಾಯಗೊಂಡಿದ್ದು, ಇನ್ನೂ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Michaung Cyclone
Koo

ಚೆನ್ನೈ: ಮೈಚಾಂಗ್‌ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ (Tamil Nadu) ಭಾರಿ ಮಳೆಯಾಗಿದ್ದು, ಚೆನ್ನೈ ಜಲಾವೃತಗೊಂಡಿದೆ. ಅದರಲ್ಲೂ, ಚನ್ನೈನ ಕಣತೂರ್‌ನಲ್ಲಿ ಭಾರಿ ಮಳೆಗೆ ಇತ್ತೀಚೆಗಷ್ಟೇ ಕಟ್ಟಿದ ಗೋಡೆ ಕುಸಿದು ಇಬ್ಬರು ಮೃತಪಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಇಬ್ಬರೂ ಜಾರ್ಖಂಡ್‌ನವರು ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಮೈಚಾಂಗ್‌ ಚಂಡಮಾರುತದ (Maichaung Cyclone) ಅಬ್ಬರ ಜೋರಾಗಿರುವುದರಿಂದ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್‌ ಚಂಡಮಾರುತ ರೂಪುಗೊಂಡಿರುವ ಕಾರಣ ತಮಿಳುನಾಡಿನ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರ್ನಾಟಕದ ನೆರೆಯ ರಾಜ್ಯಗಳಾಗಿರುವ ಕಾರಣ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ.

ಕೆರೆಯಂತಾದ ಚೆನ್ನೈ ಏರ್‌ಪೋರ್ಟ್‌

ನಿರಂತರವಾಗಿ ಸುರಿದ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು ಜಲಾವೃತಗೊಂಡಿದೆ. ವಿಮಾನ ನಿಲ್ದಾಣದ ರನ್‌ವೇ, ಪಾರ್ಕಿಂಗ್‌ ಜಾಗವು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮತ್ತೊಂದೆಡೆ, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ 11 ವಿಮಾನಗಳನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಮಾನಗಳ ಹಾರಾಟ ಕಷ್ಟ ಸಾಧ್ಯ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

ವರ್ಕ್‌ ಫ್ರಂ ಹೋಮ್‌ಗೆ ಸೂಚನೆ

ತಮಿಳುನಾಡಿನಲ್ಲಿ ಗಂಟೆಗೆ 90-100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಳೆಯೂ ಅಷ್ಟೇ ಜೋರಾಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜತೆಗೆ ಚೆನ್ನೈ, ತಿರುವಳ್ಳೂರ್‌, ಕಾಂಚಿಪುರಂ ಹಾಗೂ ಚೆಂಗಲ್‌ಪಟ್ಟು ನಗರಗಳಲ್ಲಿ ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ (ವರ್ಕ್‌ ಫ್ರಂ ಹೋಮ್)‌ ಮಾಡುವಂತೆ ಸೂಚಿಸಿವೆ. ಭಾರಿ ಮಳೆಯಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Belagavi Winter Session: ಕಳೆದ ಕೆಲವು ಸಚಿವ ಸಂಪುಟದಲ್ಲಿ ಹಲವು ವಿಧೇಯಕ ಸಂಬಂಧ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದ್ದು, ಈಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

VISTARANEWS.COM


on

18 bills likely to be introduced in Belagavi Winter Session
Koo

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ (Belagavi Winter Session) ಆರಂಭವಾಗಿದೆ. ಹಲವಾರು ವಿಚಾರಗಳಿಂದ ಪ್ರಮುಖವಾಗಿರುವ ಈ ಅಧಿವೇಶನದಲ್ಲಿ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ 18 ಬಿಲ್‌ಗಳು ಮಂಡನೆಯಾಗುವ ಸಾಧ್ಯತೆ (18 bills likely to be introduced) ಇದೆ. ಈಗಾಗಲೇ ಕೆಲವು ವಿಧೇಯಕ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ.

ಕಳೆದ ಕೆಲವು ಸಚಿವ ಸಂಪುಟದಲ್ಲಿ ಹಲವು ವಿಧೇಯಕ ಸಂಬಂಧ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದ್ದು, ಈಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿ ಗ್ರಾಮೀಣ ಭಾಗಕ್ಕೆ ಸೇವೆಗೆ ಹಲವು ಯುವ ವೈದ್ಯರು ತೆರಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯು ಗಣನೀಯ ಪ್ರಮಾಣದಲ್ಲಿದೆ. ಹೀಗಾಗಿ ಈ ಬಾರಿ ಪ್ರಮುಖವಾಗಿ ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇದೂ ಅಲ್ಲದೆ, ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ ಸೇರಿದಂತೆ ಹಲವು ಬಿಲ್‌ಗಳನ್ನು ಮಂಡಿಸಿ ಪಾಸ್‌ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಈ 18 ಬಿಲ್‌ ಮಂಡನೆ ಸಾಧ್ಯತೆ

1) ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021
2) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023
3) ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ
4) ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ
5) ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ
6) ಗದಗ ಬೆಟ್ಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ವಿಧೇಯಕ
7) ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರತಿ ಮಸೂದೆ
8) ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
9) ಶ್ರೀ ರೇಣುಕಾ ಎಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ
10) ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ
11) ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ
12) ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ
13) ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ
14) ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ
15) ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ
16) ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ
17) ಕರ್ನಾಟಕ ವೃತ್ತಿ ಪರ ಸಿವಿಲ್ ಎಂಜಿನಿಯರ್‌ಗಳ ಪರಿಷತ್ ಮಸೂದೆ
18) ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆ

Continue Reading

ಕರ್ನಾಟಕ

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Belagavi Winter Session : ಮೊದಲ ದಿನದ ಅಧಿವೇಶನಕ್ಕೆ ಹಲವಾರು ಸಚಿವರು ಹಾಗೂ ಶಾಸಕರು ಗೈರಾಗಿದ್ದಾರೆ. ಇದರಿಂದ ಸದನ ನಡೆಸುವುದು ಹೇಗೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Shortage of MLAs for Belagavi Winter Session
Koo

ಬೆಳಗಾವಿ: ಈ ಬಾರಿಯ ವಿಧಾನ ಮಂಡಲ ಅಧಿವೇಶನದ (Belagavi Winter Session) ಬಗ್ಗೆ ಭಾರಿ ನಿರೀಕ್ಷೆ ಹಾಗೂ ಕುತೂಹಲವನ್ನು ಇಟ್ಟುಕೊಳ್ಳಲಾಗಿದೆ. ಮೊದಲನೆಯದಾಗಿ ಉತ್ತರ ಕರ್ನಾಟಕ (Uttara Karnataka) ಭಾಗದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಾಕಷ್ಟು ಒತ್ತಾಯಗಳು ಕೇಳಿಬಂದಿವೆ. ಆದರೆ, ಈ ನಡುವೆ ಪ್ರಮುಖವಾಗಿ ಕೆಲವು ಸಚಿವರು ಹಾಗೂ ಶಾಸಕರೇ ಗೈರಾಗಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ (Deputy CM DK Shivakumar) ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmed Khan) ತೆಲಂಗಾಣದಲ್ಲಿದ್ದಾರೆ. ಹೀಗಾಗಿ ಈ ಚಳಿಗಾಲದ ಮೊದಲ ಅಧಿವೇಶನಕ್ಕೆ ಶಾಸಕರ ಕೊರತೆ ಕಾಡುತ್ತಿದೆ.

ಆಡಳಿತ ಪಕ್ಷದಿಂದ -80, ಬಿಜೆಪಿಯಿಂದ 45, ಜೆಡಿಎಸ್‌ನಿಂದ 10 ಸದಸ್ಯರು ಹಾಜರಾಗಿದ್ದಾರೆ. ವಿಪಕ್ಷ ಸ್ಥಾನ ಆಸನದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಕುಳಿತಕೊಂಡಿದ್ದಾರೆ. ಅದೇ ಸಾಲಿನಲ್ಲಿ ಬಿಜೆಪಿ ಅತೃಪ್ತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಕುಳಿತುಕೊಂಡಿದ್ದಾರೆ.

ಇದನ್ನೂ ಓದಿ: Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಸದನದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಗೃಹ ಸಚಿವ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವರು‌ ಭಾಗಿಯಾಗಿದ್ದಾರೆ. ಆದರೆ, ತೆಲಂಗಾಣದಲ್ಲಿ ಸರ್ಕಾರ ರಚಿಸುವ ಬ್ಯುಸಿಯಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಜಮದ್ ಖಾನ್‌ ಸದನಕ್ಕೆ ಗೈರಾಗಿದ್ದಾರೆ.

ಆರು ಸಚಿವರಿಂದ ಗೈರು ಪತ್ರ; ಹೊರಟ್ಟಿ ಅಸಮಾಧಾನ

ಮೊದಲ ದಿನದ ಸದನಕ್ಕೆ ಬರಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರು ಮಂದಿ ಸಚಿವರು ಪತ್ರ ಬರೆದಿದ್ದಾರೆ. ಇದಕ್ಕೆ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸದನಕ್ಕೆ ಬರಲು ಆಗುವುದಿಲ್ಲ ಎಂದು ಆರು ಸಚಿವರು ಪತ್ರ ಕೊಟ್ಟಿದ್ದಾರೆ. ಹೀಗಾದರೆ ಸದನ ನಡೆಸುವುದು ಹೇಗೆ? ಎಂದು ಪ್ರಶ್ನೆ ಮಾಡಿದರು. ಅಲ್ಲದೆ, ಸಭಾನಾಯಕ ಬೋಸರಾಜು ಮೇಲೆ ಸಭಾಪತಿ ಹೊರಟ್ಟಿ ಸಿಟ್ಟಾಗಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪರಿಷತ್‌ ಸಭಾನಾಯಕ ಬೋಸರಾಜು, ಎಲ್ಲರೂ ಬರುತ್ತಿದ್ದಾರೆ. ಆನ್ ದಿ ವೇ ಎಂದು ಸಮಜಾಯಿಷಿ ಕೊಟ್ಟರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಸವರಾಜ ಹೊರಟ್ಟಿ, ಸದನ ಹನ್ನೊಂದು ಗಂಟೆಗೆ ಎಂದು ಸಮಯ ನಿಗದಿ ಆಗಿದೆ. ಆದರೂ ಇನ್ನೂ ಬರುತ್ತಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು. ಮುಂದೆ ಈ ರೀತಿ ಆದರೆ ನಾನು ಒಪ್ಪಲ್ಲ ಎಂದು ಖಡಕ್‌ ಸೂಚನೆ ಕೊಟ್ಟರು.

ತೆಲಂಗಾಣದಲ್ಲಿ ಸಭೆ ಮಾಡುತ್ತಿರುವ ಡಿ.ಕೆ. ಶಿವಕುಮಾರ್‌

ಪಂಚರಾಜ್ಯಗಳ ಚುನಾವಣೆ ಮುಗಿದು ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರವನ್ನು ಹಿಡಿದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಅಧಿಕೃತವಾಗಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಸಂಬಂಧ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಹೈದ್ರಾಬಾದ್‌ನಲ್ಲಿ ತೆಲಂಗಾಣ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯುತ್ತಲಿದ್ದು, ಬಹುತೇಕ ಇಂದೇ ಸಿಎಂ ಯಾರು ಎಂದು ಘೋಷಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ , ನೂತನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಅಧಿಕೃತವಾಗಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡನೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಡಿ.ಕೆ. ಶಿವಕುಮಾರ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ತೆಲಂಗಾಣದಲ್ಲಿ ಮೊಕ್ಕಾಂ ಹೂಡಿದ್ದಾರೆ.

Continue Reading
Advertisement
Car catches fire after hitting bus
ಕರ್ನಾಟಕ3 mins ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ20 mins ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema35 mins ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ42 mins ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ1 hour ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ1 hour ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ1 hour ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ2 hours ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ2 hours ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್2 hours ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ9 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌