ಮಂಡ್ಯ: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ಸರ್ಕಾರ ಬದ್ಧವಾಗಿದೆ. ಶೀಘ್ರವೇ ಎಥೆನಾಲ್ ಘಟಕವನ್ನು ಫ್ಯಾಕ್ಟರಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM basavaraj bommai) ಅವರು ಹೇಳಿದರು.
ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ವಿಶ್ವೇಶ್ವರಯ್ಯ ನಾಲೆಯ ಕೊನೆಯ ಭಾಗದಲ್ಲಿರುವ ರೈತರ ಸಂಕಷ್ಟಗಳನ್ನು ದೂರ ಮಾಡಲಾಗುವುದು. ಈ ಬಗ್ಗೆ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.
ಗೆಜ್ಜಲಗೆರೆಯಲ್ಲಿ ಆರಂಭವಾಗುತ್ತಿರುವ ಈ ಮೆಗಾ ಡೈರಿಯು ಒಂದು ಲಕ್ಷಾಂತರ ಲೀಟರ್ ಹಾಲು ಸಂಸ್ಕರಣೆಯ ಸಾಮರ್ಥ್ಯವನ್ನು ಹೊಂದಿದೆ. ಈ ಭಾಗದ ರೈತರಿಗೆ ಇದರಿಂದ ಹೆಚ್ಚು ಉಪಯೋಗವಾಗಲಿದೆ. ನಮ್ಮ ಸರ್ಕಾರ 5 ರೂ. ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ | Sugar Factory | ಮಂಡ್ಯ ಜನರ ಕನಸು ನನಸು; ಮೈಶುಗರ್ ಕಾರ್ಖಾನೆಗೆ ಕಾಯಕಲ್ಪ