Site icon Vistara News

Mysuru Dasara | ಮೈಸೂರಿನಲ್ಲಿ ಟ್ರಿನ್‌ ಟ್ರಿನ್‌ ಸೌಂಡ್‌, ಮುದ ನೀಡಿದ ಪಾರಂಪರಿಕ ಸೈಕಲ್ ಸವಾರಿ

mysore cycle

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಗುರುವಾರ ಬೆಳಗ್ಗೆ ಚಾಲನೆ ನೀಡಲಾಯಿತು

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು,ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Mysuru Dasara | ಅಪ್ಪು ನಮನದ ಹೆಸರಿನ ಯುವ ದಸರಾಗೆ ಚಾಲನೆ, ಅಭಿಮಾನಿಗಳ ಸಂಭ್ರಮ

Exit mobile version