Site icon Vistara News

Voter Data | ಮತದಾರರ ಪಟ್ಟಿ ಅಕ್ರಮ ನಡೆದಿದ್ದರೆ ಅದಕ್ಕೆ ಸಿದ್ದರಾಮಯ್ಯ ಸರ್ಕಾರ ಕಾರಣ: ಎನ್‌.ರವಿಕುಮಾರ್

Criminal Politics

ಬೆಂಗಳೂರು: ಮತದಾರರ ಪಟ್ಟಿ ಹಗರಣ ಎನ್ನುವುದೇನಾದರೂ ಆಗಿದ್ದರೆ ಅದಕ್ಕೆ ಮೂಲಕಾರಣ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಕಾಂಗ್ರೆಸ್ ಅಧಿಕಾರ‌ದ ಅವಧಿಯಲ್ಲಿ ಚುನಾವಣೆಗೆ ಒಂದು ವರ್ಷವಿದ್ದಾಗ ಅಂದರೆ 201೭ರಲ್ಲಿ ಚಿಲುಮೆ ಸಂಸ್ಥೆಗೆ ಕಾನೂನು ಬಾಹಿರವಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಅನುಮತಿ ಕೊಡಲಾಗಿತ್ತು ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರ್ಕಾರದಲ್ಲಿ ಚುನಾವಣಾ ಪೂರ್ವದಲ್ಲಿ ಚಿಲುಮೆ ಸಂಸ್ಥೆಯನ್ನು ತಮ್ಮ ಅಕ್ರಮಗಳಿಗೆ ಬಳಸಿಕೊಂಡಿರುವ ಸಾಧ್ಯತೆಯಿದೆ. ಈಗಿನ ಸರ್ಕಾರ ಯಾವಾಗ ಚಿಲುಮೆ ಸಂಸ್ಥೆಯ ಅಕ್ರಮದ ವಿರುದ್ಧ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದ್ದರಿಂದ ಕಾಂಗ್ರೆಸ್ ನಾಯಕರು ತಮ್ಮ ಅಕ್ರಮ ಬಯಲಾಗುವ ಮುನ್ನ ತನಿಖೆಯನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಈ ರೀತಿ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರಿಗೆ ಎನ್‌.ರವಿಕುಮಾರ್‌ ಕೆಲ ಪ್ರಶ್ನೆ ಹಾಗೂ ಸವಾಲು

ಇದನ್ನೂ ಓದಿ | Voter Data | ಮತದಾರರ ಪಟ್ಟಿ ಅಕ್ರಮ; ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರಿಂದ ದೂರು

Exit mobile version