ಬೆಂಗಳೂರು ಗ್ರಾಮಾಂತರ: ರಾಜ್ಯ ಒಕ್ಕಲಿಗ ಜಾಗೃತಿ ಸಂಘದ ನಾಮಫಲಕದಲ್ಲಿದ್ದ ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ (Nadaprabhu Kempegowda) ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.
ರಾಜ್ಯ ಒಕ್ಕಲಿಗ ಜಾಗೃತಿ ಸಂಘದ ಬೋರ್ಡ್‌ನಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಚಿತ್ರಿಸಲಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಹೀಗಾಗಿ ಮಸಿ ಬಳಿದವರನ್ನು ಬಂಧಿಸುವಂತೆ ಆಗ್ರಹಿಸಿ ಕೆಂಪೇಗೌಡ ಹೋರಾಟ ಬಳಗದವರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: Self-harming : ಫ್ಯಾನ್‌ಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಕಾರಣವೇ?
ಪ್ರತಿಭಟನೆಯಲ್ಲಿ ಸಂಘದ ನೂರಾರು ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ತಡೆದರು. ಜತೆಗೆ ಮಾನವ ಸರಪಳಿ ರಚಿಸುವ ಮೂಲಕ ಮಸಿ ಬಳಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸಿದರು. ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಆಗಮಿಸಿದ ನೆಲಮಂಗಲ ನಗರ ಪೊಲೀಸರು ಪ್ರತಿಭಟನಾಕಾರರನ್ನು ಮನಹೊಲಿಸಿ, ಈ ಕೃತ್ಯವನ್ನು ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ