Adhish R. Wali: ಲಂಡನ್‌ನಲ್ಲಿ ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿ ಆದಿಶ್ ವಾಲಿಗೆ ಕಸಾಪದಿಂದ ಗೌರವ: ಡಾ. ಮಹೇಶ ಜೋಶಿ - Vistara News

ಕ ಸಾ ಪ

Adhish R. Wali: ಲಂಡನ್‌ನಲ್ಲಿ ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿ ಆದಿಶ್ ವಾಲಿಗೆ ಕಸಾಪದಿಂದ ಗೌರವ: ಡಾ. ಮಹೇಶ ಜೋಶಿ

Adhish R. Wali: ಲಂಡನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂಎಸ್ ಪದವಿ ಸ್ವೀಕಾರದ ವೇಳೆ ಬೀದರ್‌ನ ವಿದ್ಯಾರ್ಥಿ ಆದಿಶ್ ಆರ್. ವಾಲಿ, ಕನ್ನಡ ಧ್ವಜ ಪ್ರದರ್ಶಿಸುವ ಮೂಲಕ ಕನ್ನಡ ಪ್ರೇಮವನ್ನು ಮೆರೆದಿದ್ದಾರೆ.

VISTARANEWS.COM


on

Mahesha Joshi says Adhish R. Wali, a student who hoisted the Kannada flag in London, was felicitated by the kannada Sahitya parishat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲಂಡನ್‌ನಲ್ಲಿ ನಡೆದ ಪ್ರತಿಷ್ಠಿತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂಎಸ್ ಪದವಿ ಸ್ವೀಕಾರದ ವೇಳೆ ಕನ್ನಡ ಧ್ವಜ ಎತ್ತಿ ಹಿಡಿಯುವ ಮೂಲಕ ಕನ್ನಡ ಪ್ರೇಮವನ್ನು ಮೆರೆದ ಯುವ ಕನ್ನಡಾಭಿಮಾನಿ, ಬೀದರ್ ಮೂಲದ ವಿದ್ಯಾರ್ಥಿ ಆದಿಶ್ ಆರ್. ವಾಲಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ಆದರಪೂರ್ವಕ ಗೌರವ ಸಲ್ಲಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಿಟಿ ಯೂನಿವರ್ಸಿಟಿ ಆಫ್ ಲಂಡನ್‌ನ ಬೇಯೆಸ್ ಬ್ಯುಸಿನೆಸ್ ಸ್ಕೂಲ್ (ಕ್ಯಾಸ್)ನ ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿ ಆದಿಶ್ ಆರ್. ವಾಲಿ ಎಂಬ ಯುವಕ ಎಂಎಸ್ ಪದವಿ ಪೂರೈಸಿದ್ದು, ಪದವಿ ಸ್ವೀಕರಿಸಲು ಬಂದಾಗ ಕನ್ನಡ ಧ್ವಜವನ್ನು ತೆಗೆದು ಎಲ್ಲರ ಎದುರು ಪ್ರದರ್ಶಿಸಿದ್ದಾರೆ. ಈ ವಿಡಿಯೊವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಆದಿಶ್ ಹಂಚಿಕೊಂಡಿದ್ದು, ಇದು ಕನ್ನಡಿಗರ ಅಭಿಮಾನಕ್ಕೆ ಕಾರಣವಾಗಿದೆ ಎಂದು ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

Adhish R. Wali in london

ʼʼಬ್ರಿಟನ್‌ನಲ್ಲಿ ನಡೆದ ಸಮಾರಂಭದಲ್ಲಿ ನಾನು ನಮ್ಮ ಕರ್ನಾಟಕ ರಾಜ್ಯದ ಧ್ವಜವನ್ನು ಹಾರಿಸಿದ ಹೆಮ್ಮೆಯ ಕ್ಷಣ” ಎಂದು ಬರೆದುಕೊಳ್ಳುವ ಮೂಲಕ ಕನ್ನಡದ ಹೆಮ್ಮೆಯನ್ನು ವಿದೇಶದಲ್ಲಿ‌ ಆದಿಶ್ ಆರ್. ವಾಲಿ ಮೆರೆದಿದ್ದಾರೆ. ಕುವೆಂಪು ಅವರು ಹೇಳಿದಂತೆ “ಎಲ್ಲಾದರೂ ಇರು ಎಂತಾದರೂ ಇರು ಎಂದೆದಿಗೂ ನೀ ಕನ್ನಡವಾಗಿರು” ಎನ್ನುವ ಮಾತನ್ನು ಆದಿಶ್‌ ವಾಲಿ ಅಕ್ಷರಶಃ ಪಾಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | ವಿಸ್ತಾರ ನ್ಯೂಸ್‌ನ ನಮ್ಮೂರ ಶಾಲೆ-ನಮ್ಮೆಲ್ಲರ ಶಾಲೆ ಅಭಿಯಾನ: ಶಿಕ್ಷಣ ಇಲಾಖೆ ಜತೆ ಮಹತ್ವದ ಒಡಂಬಡಿಕೆ

ಕನ್ನಡ ಧ್ವಜವನ್ನು ಹಾರಿಸುತ್ತ ಪದವಿ ಪ್ರಮಾಣ ಪತ್ರ ಪಡೆದಿರುವ ಆದಿಶ್ ಆರ್. ವಾಲಿಯವರ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಶ್ಲಾಘಿಸಿವೆ. ಈ ಕನ್ನಡಿಗನ ಚಿಂತನೆ ಕಂಡು ಇಂಡಿಯಾ ಟುಡೆ ಲಂಡನ್ ಬ್ಯುರೋ ನ್ಯೂಸ್ ಚಾನೆಲ್ ವಿಶೇಷ ಸಂದರ್ಶನಕ್ಕೆ ಆಹ್ವಾನಿಸಿದೆ. ಸದ್ಯ ಆದಿಶ್‌, ಬ್ರಿಟಿಷ್ ನಾಡಿನಲ್ಲಿ ಕನ್ನಡ ಡಿಂಡಿಮ ಬಾರಿಸುವ ಮೂಲಕ ಕನ್ನಡವನ್ನು ವಿಜೃಂಭಿಸಬೇಕೆಂಬ ಮಹದಾಸೆಯನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ತಾನು ಪಡೆದಿರುವ ಪದವಿಯನ್ನು ಸಮಸ್ತ ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅರ್ಪಿಸುವುದಾಗಿ ಹೇಳಿದ್ದು, ಅಚ್ಚ ಕನ್ನಡಿಗನ ಸ್ವಚ್ಛ ಮನಸ್ಸನ್ನು ಬಿಂಬಿಸುತ್ತದೆ. ಈ ಮೂಲಕ ಅವರು ಮೂಲಕ ಇಡೀ ಕನ್ನಡ ನಾಡಿಗೆ ಕಣ್ಮಣಿಯಾಗಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

ಆದಿಶ್ ಅವರು ಕನ್ನಡತನವನ್ನು ಮೈಗೂಡಿಸಿಕೊಳ್ಳುವಲ್ಲಿ ಪ್ರೇರಣೆಯಾಗಿದ್ದು ಅವರ ಅಜ್ಜ. ಅವರ ಮನೆತನದ ರಕ್ತದಲ್ಲಿ ಕನ್ನಡಾಭಿಮಾನ ಮನೆ ಮಾಡಿದೆ. ಬೀದರ್‌ನ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಹಾಗೂ ದಿ. ಶಕುಂತಲಾ ವಾಲಿ ಅವರ ಮೊಮ್ಮಗನಾಗಿರುವ ಇವರು ಹಿರಿಯರಂತೆ ನಾಡು ನುಡಿಯ ಅಭಿಮಾನವನ್ನು ಎತ್ತಿ ಹಿಡಿದಿದ್ದಾರೆ. ಅಲ್ಲದೆ, ಖ್ಯಾತ ಉದ್ಯಮಿ ಹಾಗೂ ಪತ್ರಕರ್ತ ಡಾ. ರಜನೀಶ ವಾಲಿ ಮತ್ತು ತಾಯಿ ಅಂಜನಾ ವಾಲಿ ಅವರ ಮಗನಾಗಿದ್ದು, ಈ ಕುಟುಂಬದ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್‌ಗೆ ಹೆಮ್ಮೆ ಇದೆ ಎಂದು ಜೋಶೀ ಹೇಳಿದ್ದಾರೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : ವಿರಾಲಿ ಮೋದಿಯ ಎರಡೂ ಕಾಲುಗಳಲ್ಲಿ ಬಲವಿಲ್ಲ, ಆದರೆ ಆಕೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತುತ್ತಾಳೆ!

ಸದ್ಯ ಆದಿಶ್‌ ಹಾಗೂ ಅವರ ಕುಟುಂಬ ಲಂಡನ್‌ನಲ್ಲಿ ಇದ್ದು,‌ ಅವರು ಭಾರತಕ್ಕೆ ಬಂದ ತಕ್ಷಣ ಅವರನ್ನು ಗೌರವಿಸುವ ಕಾರ್ಯವನ್ನು ಪರಿಷತ್ ಮಾಡಲಿದೆ. ವಿದೇಶಿ ನೆಲದಲ್ಲಿ ಕನ್ನಡ ನಾಡು ನುಡಿಯ ಅಸ್ಮಿತೆಯನ್ನು ಪ್ರದರ್ಶಿಸಿದ ಯುವ ಕನ್ನಡಿಗ ಎಲ್ಲರಿಗೂ ಮಾದರಿಯಾಗಿದ್ದಾರೆ. ಕನ್ನಡದವರು ಕನ್ನಡದಲ್ಲಿ ಮಾತನಾಡಲು ಹಿಂಜರಿಯುವ ಸಂದರ್ಭದಲ್ಲಿ ಆದಿಶ್‌ ಭಾಷಾ ಪ್ರೇಮ ಎಲ್ಲರಿಗೂ ಮಾದರಿ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Kodava Family Hockey Tournament Website Launched
ಕೊಡಗು2 ವಾರಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು2 ವಾರಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ2 ವಾರಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ2 ವಾರಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು2 ವಾರಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ವಾರಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ12 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್3 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌