ಕರ್ನಾಟಕ
Siddheshwar Swamiji : ನಾಲತವಾಡ, ನಿಡಗುಂದಿ ಪಟ್ಟಣ ಬಂದ್; ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ
Siddheshwar Swamiji : ಸಿದ್ದೇಶ್ವರ ಸ್ವಾಮೀಜಿಯವರ ನಿಧನದಿಂಧ ವಿಜಯಪುರ ಜಿಲ್ಲೆಯ ಕಣ್ಣೀರಾಗಿದ್ದಾರೆ. ಸಾಗರೋಪಾದಿಯಲ್ಲಿ ಆಶ್ರಮಕ್ಕೆ ಭೇಟಿ ನೀಡುತ್ತಿದ್ದು, ಅಂತಿಮ ದರ್ಶನಕ್ಕೆ ಮುಂದಾಗಿದ್ದಾರೆ. ನಾಲತವಾಡ ಹಾಗೂ ನಿಡಗುಂದಿ ಮಾರುಕಟ್ಟೆಯನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲಾಗಿದೆ.
ವಿಜಯಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddheshwar Swamiji) ಅವರ ದೇಹಾಂತ್ಯದ ಸುದ್ದಿಯನ್ನು ಅರಗಿಸಿಕೊಳ್ಳಲು ಜಿಲ್ಲೆಯ ಜನರಿಗೆ ಈಗಲೂ ಆಗುತ್ತಿಲ್ಲ. ಪ್ರತಿ ಮನೆಯಿಂದಲೂ ಆಶ್ರಮದತ್ತ ಜನರು ದೌಡಾಯಿಸುತ್ತಿದ್ದಾರೆ, ಕಣ್ಣೀರಾಗುತ್ತಿದ್ದಾರೆ. ಈ ನಡುವೆ ವಿವಿಧೆಡೆ ಬಂದ್ ಮಾಡಿ ಶೋಕ ವ್ಯಕ್ತಪಡಿಸಲಾಗಿದೆ.
ಈ ನಡುವೆ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣ ಹಾಗೂ ಬಸವನಬಾಗೇವಾಡಿ ತಾಲೂಕಿನ ನಿಡಗುಂದಿ ಪಟ್ಟಣದ ಮಾರುಕಟ್ಟೆಯನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲಾಗಿದೆ.
ನಾಲತವಾಡ ಪಟ್ಟಣದ ಜನತೆ ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಿ ತೆರಳಿದ್ದಾರೆ. ನಿಡಗುಂದಿ ಪಟ್ಟಣದ ಮಾರುಕಟ್ಟೆಯೂ ಸಹ ಸ್ತಬ್ಧವಾಗಿದ್ದು, ಅಲ್ಲಿಂದಲೇ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.
ಇನ್ನು ತಾಂಬಾ ಗ್ರಾಮದ ಶ್ರೀ ಸಂಗನಬಸವ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ, ಅಂತಿಮ ನಮ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ | Siddheshwar Swamiji : ಕಾಣಿಸುವ ದೇವರೇ, ನೀನೂ ನಮಗೆ ಕಾಣದಂತಾದೆಯಾ?; ಕಣ್ಣೀರಿಟ್ಟ ಭಕ್ತೆ
ಕರ್ನಾಟಕ
Cauvery Protest: ಬೆಂಗಳೂರು ಬಂದ್ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ
Cauvery protest: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ (Cauvery protest) ರಾಜ್ಯ ಸರ್ಕಾರದ ವಿರುದ್ಧ ನಡೆದ ಮಂಡ್ಯ ಬಂದ್ (Mandya bandh), ಸೆ. 26ಕ್ಕೆ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore Bandh) ಸಂಬಂಧಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಣ್ಣಗಿನ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಬಂದ್ ಮೂಲಕ ಬೆಂಗಳೂರಿನ ಗೌರವಕ್ಕೆ ಮಸಿ ಬಳಿಯಬೇಡಿ, ಬಂದ್ ಬೇಡ ಎಂದು ಹೇಳಿದರೆ ಸಿದ್ದರಾಮಯ್ಯ ಅವರಂತೂ ಪ್ರತಿಭಟನೆಯ ಹಕ್ಕು ಎಲ್ಲರಿಗೂ ಇದೆ, ಅದನ್ನು ನಾವು ತಡೆಯುವುದಿಲ್ಲ ಎಂದಿದ್ದಾರೆ.
ರಾಜ್ಯದ ಹಿತ ಕಾಪಾಡಲು ನಾವೇ ಇದ್ದೇವೆ, ಬಂದ್ ಯಾಕೆ?
ʻʻಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಹೋರಾಟ ಮಾಡಬಹುದು. ಅವರವರ ಹೋರಾಟ ಅವರು ಮಾಡ್ತಾರೆ. ಆದರೆ, ಈ ಹೋರಾಟ ಯಾಕಾಗಿ, ಯಾರ ವಿರುದ್ಧ? ಸರ್ಕಾರವೇ ರೈತರ ಪರವಾಗಿ ನಿಂತಿದೆ. ನಾವೇ ಹೋರಾಡುತ್ತಿದ್ದೇವೆʼʼ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ʻʻಬೆಂಗಳೂರು ಬಂದ್ ಮಾಡೋದು ಬೇಡ. ಯಾವ ಲಾಭಕ್ಕಾಗಿ ಬಂದ್ ಮಾಡ್ತಾರೆ? ಸರ್ಕಾರವೇ ಹೋರಾಟಕ್ಕೆ ನಿಂತಿದೆ. ಬಂದ್ ಮಾಡೋದ್ರಿಂದ ಯಾವುದೇ ಅನುಕೂಲ ಇಲ್ಲ. ಬೆಂಗಳೂರು ಮರ್ಯಾದೆಯನ್ನ ಹಾಳುಗೆಡವಬೇಡಿ. ಬೆಂಗಳೂರಿನ ಮರ್ಯಾದೆ ಹಾಳು ಮಾಡಿದರೆ ನೀವೇ ಹೃದಯಕ್ಕೆ ಚುಚ್ಚಿಕೊಂಡ ಹಾಗೆ. ಬೆಂಗಳೂರಿನಲ್ಲಿ ಎಲ್ಲಾ ಭಾಷೆ, ಬೇರೆ ಬೇರೆ ರಾಜ್ಯದ ಜನ ವಾಸವಾಗಿದ್ದಾರೆʼʼ ಎಂದು ಹೇಳಿದರು.
ಕಾವೇರಿ ಕುರಿತು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತಿವೆ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್, ʻʻಒಳಗಡೆ ಬಂದಾಗ ರಾಜ್ಯದ ಹಿತ, ಹೊರಗಡೆ ಹೋದಾಗ ರಾಜಕಾರಣ ನಡೆಯುತ್ತದೆ. ಹೊಸ ಹುರುಪು ಪ್ರತಿಭಟನೆ ಮಾಡ್ತಾ ಇದ್ದಾರೆ ಮಾಡಲಿʼʼ ಎಂದು ಎಚ್.ಡಿ ಕುಮಾರಸ್ವಾಮಿ ಅವರ ಹೆಸರು ಹೇಳದೆಯೇ ಹೇಳಿದರು.
ʻʻನೀರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಅಂಕಿ ಅಂಶ ಹೇಳಿದರೆ ರಾಜ್ಯದ ಹಿತಕ್ಕೆ ಧಕ್ಕೆ ಆಗುತ್ತದೆ. ದೇವೇಗೌಡರು ಹಿರಿಯ ಮುಖಂಡರು. ಅವರು ಹಿಂದೆ ಕೊಟ್ಟ ಒಂದು ಇಂಟರ್ ವ್ಯೂ ತೆಗೆದು ನೋಡಲಿ ಗೊತ್ತಾಗುತ್ತದೆʼʼ ಎಂದು ಹೇಳಿದ ಶಿವಕುಮಾರ್, ʻʻಕುಮಾರಸ್ವಾಮಿ ಅವರೇನೋ ಮಾತಾಡಿದ್ದಾರೆ ಅಮಿತ್ ಷಾ ಜೊತೆ ಅಂದ್ರಲ್ವಾ? ಸೂಕ್ಷ್ಮ ವಾಗಿ ಮಾತಾಡಿದ್ದೇವೆ ಅಂತ ಹೇಳಿದ್ದಾರಲ್ವಾ? ಅದೇನೇನು ನುಡಿಮುತ್ತು ಆಡಿದಾರೆ ಏನು ಅಂತ ಹೇಳಲಿ. ನಾವು ಮೂರ್ಖರೇʼʼ ಎಂದು ಪ್ರಶ್ನಿಸಿದರು.
ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಲಿ ಅಂತ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿಟಿ ರವಿಯವರಿಗೆ ಸದ್ಯಕ್ಕೆ ಎಲ್ಲೂ ಜಾಗವಿಲ್ಲ ಹಾಗಾಗಿ ಮಂಡ್ಯಕ್ಕೆ ಹೋಗಿದ್ದಾರೆ ಎಂದು ಹೇಳಿದರು. ದೇವೇಗೌಡರೇ ಪ್ರಧಾನಿ ಮಧ್ಯಪ್ರವೇಶ ಮಾಡಲಿ ಎಂದು ಹೇಳಿದ್ದಾರೆ ಎಂದು ನೆನಪಿಸಿದರು.
ಇದನ್ನೂ ಓದಿ: Cauvery protest : ಸೆ. 26ರ ಬೆಂಗಳೂರು ಬಂದ್‌ಗೆ ಭಾರಿ ಬೆಂಬಲ; ಏನಿರುತ್ತೆ? ಏನಿರಲ್ಲ?; ಕರ್ನಾಟಕ ಬಂದ್‌ಗೂ ಪ್ಲ್ಯಾನಿಂಗ್
ಚಳುವಳಿಯನ್ನು ನಿಲ್ಲಿಸುವುದಿಲ್ಲ ಎಂದ ಸಿದ್ದರಾಮಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯತ್ತಿರುವುದನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಚಳುವಳಿ ಮಾಡಲು ಅವಕಾಶ ಇದೆ. ನಾವು ಅದನ್ನ ನಿಲ್ಲಿಸುವುದಿಲ್ಲ ಎಂದರು. ಮಂಗಳವಾರ ಬೆಂಗಳೂರು ಬಂದ್ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ
Ananth Namana: ಅನಂತ ಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ ಎಂದ ಡಿಕೆಶಿ
Ananth Namana: ರಾಜ್ಯದ ಹಿತಾಸಕ್ತಿಗೆ ಯಾವುದೇ ತೊಂದರೆ ತೆಗೆದುಕೊಳ್ಳಲು ಕೇಂದ್ರ ಮಾಜಿ ಸಚಿವ ಅನಂತ ಕುಮಾರ್ ಅವರು ಸದಾ ಸಿದ್ಧರಾಗಿರುತ್ತಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಕೇಂದ್ರ ಮಾಜಿ ಸಚಿವ ಅನಂತ ಕುಮಾರ್ (Ananth Namana) ಅಜಾತಶತ್ರು. ರಾಜ್ಯದ ಹಿತಾಸಕ್ತಿಗೆ ಯಾವುದೇ ತೊಂದರೆ ತೆಗೆದುಕೊಳ್ಳಲು ಅವರು ಸದಾ ಸಿದ್ಧರಾಗಿರುತ್ತಿದ್ದರು. ಅವರು ಈಗ ಇದ್ದಿದ್ದರೇ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ನಡೆದ ಅನಂತ ನಮನ -64 (Ananth Namana) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ಬಗ್ಗೆ ರಾತ್ರೋರಾತ್ರಿ ಅಫೀಡವಿಟ್ ಬದಲಾಯಿಸಿ ಕರ್ನಾಟಕದ ಪರವಾಗಿ ನಿಂತಿದ್ದರು ಎಂದು ಸ್ಮರಿಸಿದರು.
ತೇಜಸ್ವಿನಿ ರಾಜಕೀಯದಲ್ಲಿ ಮುನ್ನುಗ್ಗಬೇಕು
1985ರಲ್ಲಿ ನನಗೆ ಮೊದಲ ಬಾರಿಗೆ ವಿಧಾನಸಭೆ ಟಿಕೆಟ್ ಸಿಕ್ಕಿದಾಗ, ಅನಂತ್‌ಕುಮಾರ್ ರಹಸ್ಯವಾಗಿ 5 ಸಾವಿರ ರೂ. ಹಣ ನೀಡಿದ್ದರು. ರಾಜ್ಯದ ಪರವಾಗಿ ನಿಲ್ಲುತ್ತಿದ್ದ ಅವರನ್ನು ಸರ್ವಪಕ್ಷ ಸಭೆಯಲ್ಲಿ ಎಲ್ಲರೂ ನೆನಪಿಸಿಕೊಂಡರು. ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತ ಕುಮಾರ್ ಅವರ ಜತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ, ನೀವು ರಾಜಕೀಯಕ್ಕೆ ಬರಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ | CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!
ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ. ತೇಜಸ್ವಿನಿ ಅವರೇ ನೀವು ಮುನ್ನುಗ್ಗಬೇಕು, ಹೊಲವನ್ನು ಉಳುಮೆ ಮಾಡದಿದ್ದರೆ ಮಟ್ಟ ಆಗುವುದಿಲ್ಲ. ಶಿಲೆ ಶಿಲ್ಪಿ ಕೈಗೆ ಸಿಗದಿದ್ದರೆ ಕಲೆ ಅರಳುವುದಿಲ್ಲ, ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಕಾರಣಕ್ಕೆ ನೀವು ರಾಜಕಾರಣದಲ್ಲಿ ಇರಬೇಕು ಎಂದು ಸಲಹೆ ನೀಡುತ್ತೇನೆ ಎಂದರು.
ಮೆಟ್ರೋ ರೈಲು ಬರಲು ಅನಂತ ಕುಮಾರ್ ಕಾರಣ
ನಿಮ್ಮ ಇತಿಹಾಸವನ್ನು ಯಾರೂ ಬದಲಾವಣೆ ಮಾಡಲು, ಮುಚ್ಚಿಹಾಕಲು ಆಗುವುದಿಲ್ಲ. ಒಳ್ಳೆ ಕೆಲಸ ಮಾಡಿ ನಿಮ್ಮದೇ ಆದ ಛಾಪನ್ನು ಮೂಡಿಸಿಕೊಂಡಿದ್ದೀರಿ. ನಿಮ್ಮ ಜತೆ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಬಳಿ ಮೃದು ಹೃದಯವಿದೆ. ಅನಂತ ಕುಮಾರ್ ಅವರು ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ, ನೀವು ಹೆಜ್ಜೆ ಗುರುತು ಮೂಡಿಸಿ. ರಾಜ್ಯದಲ್ಲಿ ಮೆಟ್ರೋ ಬರಲು ಎಸ್.ಎಂ. ಕೃಷ್ಣ ಮತ್ತು ಅನಂತ ಕುಮಾರ್ ಅವರೇ ಕಾರಣ ಎಂದು ಹೇಳಿದರು.
ನಾನು ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದೆ. ಕೇಂದ್ರದಲ್ಲಿ ಅನಂತ ಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದರು. ಹಿಂದಿನ ಜೆ.ಎಚ್.ಪಟೇಲ್ ಸರ್ಕಾರ ಮೋನೊ ರೈಲಿಗೆ ಒಪ್ಪಿಗೆ ನೀಡಿತ್ತು. ಹುಡ್ಕೋ ಸಂಸ್ಥೆಯಿಂದ ನನ್ನನ್ನು ಹಾಗೂ ಇತರೇ ಸ್ನೇಹಿತರನ್ನು ವಿದೇಶಕ್ಕೆ ಮೆಟ್ರೊ ಕಾರ್ಯಾಚರಣೆ ಬಗ್ಗೆ ಅಧ್ಯಯನ ಮಾಡಲು ಪ್ರವಾಸ ಕಳುಹಿಸಿದ್ದರು. ಶ್ರೀಧರನ್ ಅವರು ಜತೆಯಲ್ಲಿ ಇದ್ದರು. ನಾವು ಮೆಟ್ರೋ ಇದ್ದರೆ ಅನುಕೂಲ ಎಂದು ಎಸ್.ಎಂ.ಕೃಷ್ಣ ಅವರಿಗೆ ವರದಿ ನೀಡಿದೆವು. ಅವರು ಅನಂತಕುಮಾರ್ ಅವರನ್ನು ಭೇಟಿಯಾಗಲು ಹೇಳಿದರು. ಕೇವಲ ಒಂದೇ ದಿನದಲ್ಲಿ ಪ್ರಧಾನಿಗಳಾದ ವಾಜಪೇಯಿ ಅವರನ್ನು ಭೇಟಿ ಮಾಡಿಸಿ, ನಿಮ್ಮ ಸಮಿತಿಯ ವರದಿ ಸರಿಯಾಗಿದೆ ಎಂದು ಹೇಳಿ, ಕೇಂದ್ರದಿಂದ ಒಪ್ಪಿಗೆ ಕೊಡಿಸಿದರು ಎಂದು ಸ್ಮರಿಸಿದರು.
ಯಾರು ಏನೇ ಹೇಳಿದರೂ ಬೆಂಗಳೂರು ಮೆಟ್ರೋ ಅನಂತ ಕುಮಾರ್ ಹಾಗೂ ಕೃಷ್ಣ ಅವರ ಕೊಡುಗೆ. ನಾನು ದೇವರು ಹಾಗೂ ಧರ್ಮದ ಬಗ್ಗೆ ನಂಬಿಕೆ ಇರುವವನು. ಬಿಟ್ಟು ಹೋಗುವುದಕ್ಕಿಂತ ಕೊಟ್ಟು ಹೋಗುವುದು ಲೇಸಯ್ಯ ಎನ್ನುವ ಪುರಂದರದಾಸರ ಮಾತಿನಂತೆ ಬದುಕಿದವರು ಅನಂತ್‌ಕುಮಾರ್. ಆದರೆ ಅವರ ವಿಚಾರದಲ್ಲಿ ದೇವರು ಕ್ರೂರಿಯಾಗಿಬಿಟ್ಟ. ಯಾವಾಗಲೂ ಅವರು ಎಲ್ಲರನ್ನೂ ನಗಿಸುತ್ತಾ ಇದ್ದವರು ಎಂದು ತಿಳಿಸಿದರು.
ಸ್ವಂತಕ್ಕೆ ಏನೂ ಮಾಡಿಕೊಂಡಿಲ್ಲ
ಡಿವಿಜಿ ಅವರ ನಗುವು ಸಹಜ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ಎಂಬ ಕಗ್ಗದಂತೆ ಬಾಳಿದವವರು ಅನಂತಕುಮಾರ್. ಪರೋಪಕಾರಾಯ ವಹಂತಿ ನದ್ಯಃ ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್. ಮರ- ಗಿಡಗಳು, ಹಸುಗಳು, ನದಿಗಳು ಸ್ವಂತಕ್ಕೆ ಏನನ್ನೂ ಕೇಳುವುದಿಲ್ಲ, ಇವುಗಳು ಇರುವುದೇ ಪ್ರಕೃತಿಯ ಸೇವೆಗೆ, ಅದೇ ರೀತಿ ಅನಂತಕುಮಾರ್ ಅವರು ಸ್ವಂತಕ್ಕೆ ಏನೂ ಮಾಡಿಕೊಂಡಿಲ್ಲ, ಅವರು ಸೇವೆ ಮಾಡಿರುವುದೇ ಸಮಾಜಕ್ಕೆ ಎಂದರು.
ಇದನ್ನೂ ಓದಿ | Pradeep Eshwar: ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
40 ವರ್ಷಗಳಲ್ಲಿ ನೂರಾರು ನಾಯಕರನ್ನು ತಯಾರು ಮಾಡಿ, ಅವರನ್ನು ಅನಾಥರನ್ನಾಗಿ ಮಾಡಿ ಹೋಗಿದ್ದಾರೆ. ಅವರು ಕೇವಲ ತೇಜಸ್ವಿನಿ ಅವರನ್ನು ಮಾತ್ರ ಬಿಟ್ಟು ಹೋಗಿಲ್ಲ. ನನಗೆ ವಿದ್ಯಾರ್ಥಿ ದೆಸೆಯಿಂದಲೂ ಅನಂತ್‌ಕುಮಾರ್ ಅವರು ತುಂಬಾ ಆತ್ಮೀಯರು. ಅವರು ಎಬಿವಿಪಿ ನಾಯಕರಾಗಿದ್ದರು, ಆಗಾಗ್ಗೆ ಜನರಲ್ ಹಾಸ್ಟೆಲ್‌ಗೆ ಬಂದು ಕಾಲ ಕಳೆಯುತ್ತಿದ್ದರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ, ಎಂಬ ಮಾತಿನಂತೆ ಇಂದು ನಾವೆಲ್ಲ ಅನಂತಪದುಮನಾಭ ಅವರನ್ನು ನೆನಪಿಸಿಕೊಂಡಿದ್ದೇವೆ. ಅವರ ಕನಸುಗಳನ್ನು ನನಸಾಗಿಸೋಣ ಎಂದು ಕರೆ ನೀಡಿದರು.
ಕರ್ನಾಟಕ
Cauvery Protest: ಮಂಡ್ಯದಲ್ಲಿ ಕಾವೇರಿ ಕಿಚ್ಚು; ರೈತರ ಬಂದ್ ಕರೆಗೆ ಸರ್ವವೂ ಸ್ತಬ್ಧ, ಹೋರಾಟಕ್ಕೆ ರಾಜ್ಯದೆಲ್ಲೆಡೆ ಬೆಂಬಲ
Cauvery protest : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ರೈತ ಸಂಘಟನೆಗಳ ಕರೆ ಮೇರೆಗೆ ನಡೆದ ಮಂಡ್ಯ ಬಂದ್ ಶನಿವಾರ ಯಶಸ್ವಿಯಾಗಿ ನಡೆಯಿತು. ಯಾವುದೇ ಅಹಿತಕರ ಘಟನೆಗಳಿಲ್ಲದೆ ಜನರು ತಮ್ಮ ಪ್ರತಿಭಟನೆ ದಾಖಲಿಸಿದರು.
ಮಂಡ್ಯ: ರಾಜ್ಯದಲ್ಲಿ ಮಳೆ ಇಲ್ಲದೆ ಸಂಕಷ್ಟ ಕಾಲ ಬಂದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ (Cauvery protest) ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ (Mandya bandh) ಯಶಸ್ವಿಯಾಯಿತು. ರೈತರು ನಗರ ಮತ್ತು ಜಿಲ್ಲೆಯ ನಾನಾ ಭಾಗಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯನ್ನು ಸಂಘಟಿಸಿದ್ದರೆ, ಜನರು ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟುಗಳನ್ನು ನಿಲ್ಲಿ ಸಿ ತಮ್ಮ ಬೆಂಬಲ ಸಾರಿದರು. ಕಾವೇರಿ ಹೋರಾಟಕ್ಕೆ ರಾಜ್ಯದ ಎಲ್ಲ ಕಡೆಗಳಲ್ಲೂ ಬೆಂಬಲ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ, ಜಾಥಾಗಳನ್ನು ನಡೆಸಿದವು.
ಆರಂಭದಲ್ಲಿ ಇದು ಮಂಡ್ಯ ನಗರಕ್ಕೆ ಸೀಮಿತವಾಗಿ ಘೋಷಣೆಯಾಗಿದ್ದರೂ ಮದ್ದೂರು, ಭಾರತಿ ನಗರ ಸೇರಿದಂತೆ ಹಲವು ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು (Shops Closed) ಮುಚ್ಚಿ ಜನರು ಬೆಂಬಲ ನೀಡಿದರು. ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳು, ಆಭರಣ ಮಳಿಗೆಗಳು, ಹೋಟೆಲ್‌ಗಳು, ಬೇಕರಿಗಳು, ಚಿತ್ರಮಂದಿರಗಳು, ಖಾಸಗಿ ಕಚೇರಿಗಳು ಮುಚ್ಚಿದ್ದವು.
ಹೆಚ್ಚಿನ ಖಾಸಗಿ ಶಾಲೆ-ಕಾಲೇಜುಗಳು ಮೊದಲೇ ರಜೆ ಘೋಷಿಸಿದ್ದರೆ ಕೆಲವು ಶಾಲೆಗಳು ಓಪನ್ ಇದ್ದವು. ಪ್ರತಿಭಟನಾಕಾರರು ಅವುಗಳನ್ನು ಮುಚ್ಚಿಸಿದ ಬಳಿಕ ವಿದ್ಯಾರ್ಥಿಗಳೂ ಪ್ರತಿಭಟನೆಗೆ ಇಳಿದರು. ನಗರ ವ್ಯಾಪ್ತಿಯಲ್ಲಿ ಬಸ್ ಸಂಚಾರ ಇರಲಿಲ್ಲ. ಆದರೆ, ಗ್ರಾಮೀಣ ಭಾಗದಲ್ಲಿ ಸರಕಾರಿ ಬಸ್ ಸೇವೆ ಎಂದಿನಂತೆ ಇತ್ತು. ನಗರದಲ್ಲಿ ಮಧ್ಯಾಹ್ನದವರೆಗೆ ಆಟೋಗಳ ಸೇವೆ ಬಂದ್ ಇತ್ತು.
ರಸ್ತೆತಡೆ, ಪ್ರತಿಭಟನಾ ಮೆರವಣಿಗೆ, ರಸ್ತೆಯಲ್ಲಿ ಉರುಳು ಸೇವೆ, ಬಾಯಿ ಬಡಿದುಕೊಳ್ಳುವುದು, ಮಕ್ಕಳಿಂದ ಖಾಲಿ ಕೊಡಗಳ ಪ್ರದರ್ಶನ, ಮಾನವ ಸರಪಳಿ ರಚನೆ, ಶ್ವಾನ ಪ್ರದರ್ಶನ, ಎಮ್ಮೆ ಮತ್ತು ಎಮ್ಮೆ ಕರುವಿನೊಂದಿಗೆ ಪ್ರತಿಭಟನೆ ಹೀಗಾಗಿ ಹತ್ತಾರು ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸ್ಥಳ ಜೆ.ಸಿ ವೃತ್ತದಲ್ಲಿ ಇಡೀ ದಿನ ಜನಸಾಗರ, ರಾಜಕಾರಣಿಗಳ ಬೆಂಬಲ
ಪ್ರತಿಭಟನೆಯ ಕೇಂದ್ರ ಸ್ಥಳ ಜೆ.ಸಿ.ವೃತ್ತದಲ್ಲಿ ಇಡಿ ದಿನ ಜನಸಾಗರ ನೆರೆದಿತ್ತು. ಮಾಜಿ ಸಚಿವ ಸಿ.ಟಿ.ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕರ‍್ಯಕರ್ತರು ನಗರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯೊಂದಿಗೆ ಧರಣಿಯಲ್ಲಿ ಭಾಗವಹಿಸಿದ್ದರು.
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಕೆಆರ್‌ಎಸ್‌ನಲ್ಲಿ ಪರಿಶೀಲನೆ ನಡೆಸಿ ರಸ್ತೆ ಮಾರ್ಗವಾಗಿ ಮಂಡ್ಯಕ್ಕೆ ಆಗಮಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿದರು. ಸಂಜೆ ಐದು ಗಂಟೆಯ ನಂತರ ಎಲ್ಲ ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದವು.
ಇದನ್ನೂ ಓದಿ: Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್
ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರ ಸುಗಮ
ಮಂಡ್ಯದಲ್ಲಿ ಬಂದ್ ನಡೆಯುತ್ತಿದ್ದರೂ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ಸಮಸ್ಯೆಯಿರಲಿಲ್ಲ. ಬೆಂಗಳೂರು-ಮೈಸೂರು ನಡುವೆ ಎಂದಿನಂತೆ ವಾಹನಗಳು ಸಂಚರಿಸುತ್ತಿದ್ದವು. ಮಂಡ್ಯ ನಗರಕ್ಕೆ ಬರುತ್ತಿದ್ದ ಬಸ್‌ಗಳು ಕೂಡ ಹೆದ್ದಾರಿಯಲ್ಲೇ ಸಂಚಾರ ನಡೆಸಿದವು.
ಕರ್ನಾಟಕ
Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಮತ್ತೆ ಅನುಮತಿ ನಿರಾಕರಿಸಿದ ಹೈಕೋರ್ಟ್
Vinay Kulkarni: ಬಿಜೆಪಿ ಮುಖಂಡ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಬಂಧನವಾಗಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಾಗಿ ಅವರಿಗೆ ಧಾರವಾಡ ಪ್ರವೇಶಕ್ಕೆ ಹೈ ಕೋರ್ಟ್ ನಿಷೇಧ ವಿಧಿಸಿದೆ.
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಆರೋಪಿಯಾದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ಅನುಮತಿ ನಿರಾಕರಿಸಿದೆ. ಧಾರವಾಡ ಪ್ರವೇಶಕ್ಕಿರುವ ನಿಷೇಧವನ್ನು ತೆರವು ಮಾಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿದೆ.
ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ವಿನಯ್ ಕುಲಕರ್ಣಿ ಕೋರಿದ್ದರು. ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿರಲಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಮತ್ತೊಮ್ಮೆ ಶಾಸಕರಿಗೆ ಹಿನ್ನಡೆಯಾಗಿದೆ.
ಯೋಗೀಶಗೌಡ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಮೇಲೆ ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪವಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು. ಹೀಗಾಗಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ | Cauvery Dispute: ಮೈಸೂರಿನಲ್ಲಿ ಸಚಿವ ಡಾ.ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ
ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡ ಅವರನ್ನು 2016ರ ಜೂನ್ 15ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿತ್ತು.
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ22 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ದೇಶ12 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
ಕರ್ನಾಟಕ7 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ಅಂಕಣ15 hours ago
ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
-
ದೇಶ24 hours ago
Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
-
ದೇಶ21 hours ago
‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
-
ಕ್ರಿಕೆಟ್23 hours ago
ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ