ಬೆಂಗಳೂರು: ಆಗಸ್ಟ್ 6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಡೆಸಿದ್ದು, ಈ ಹಿಂದಿನ ರೈಡರ್‌ಶಿಪ್ ದಾಖಲೆಗಳನ್ನು ಮುರಿದಂತಾಗಿದೆ. ನಮ್ಮ ಮೆಟ್ರೋದಲ್ಲಿ ಮಂಗಳವಾರ 8.26 ಲಕ್ಷ ಮಂದಿ ಪ್ರಯಾಣಿಸಿದ್ದು, ಈ ಸಾಧನೆಗೆ ಕಾರಣರಾದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಧನ್ಯವಾದ ಹೇಳಿದೆ.
ಆ.6ರಂದು ಒಟ್ಟಾರೆ 8,26,883 ಪ್ರಯಾಣಿಕರಿಂದ ಮೆಟ್ರೋ ಬಳಕೆಯಾಗಿದೆ. ನಮ್ಮ ಮೆಟ್ರೋವನ್ನು ತಮ್ಮ ಪ್ರಯಾಣದ ಪಾಲುದಾರರನ್ನಾಗಿ ಮಾಡಿಕೊಂಡಿದ್ದಕ್ಕಾಗಿ ಮತ್ತು ವಾತಾವರ್ಣದ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವನ್ನು ಬೆಂಬಲಿಸುತ್ತಿರುವುದಕ್ಕೆ ಪ್ರಯಾಣಿಕರಿಗೆ ಧನ್ಯವಾದಗಳು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
— ನಮ್ಮ ಮೆಟ್ರೋ (@OfficialBMRCL) August 7, 2024
ಇದನ್ನೂ ಓದಿ | Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು
ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್
ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ (Bangalore Hotels) ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.
ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್ ಎನ್.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್ 4, ಸಿಎಲ್ 6, ಸಿಎಲ್ 7, ಸಿಎಲ್ 7D ಲೈಸೆನ್ಸ್ ಪಡೆದ ಹೋಟೆಲ್, ಕ್ಲಬ್, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.
ಇದನ್ನೂ ಓದಿ | Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?
2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.