Site icon Vistara News

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Use nandini ghee compulsorily in temple prasadam Order of the Department of Religious Endowments

ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ (Nandini ghee) ಬಳಸುವಂತೆ ಆದೇಶ ಹೊರಡಿಸಲಾಗಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ‌ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Exit mobile version