ಕೊಡಗು: ಜಿಲ್ಲೆಯಲ್ಲಿ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲೂ ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಮೂರನೇ ಬಾರಿಗೆ ನಾಪೋಕ್ಲು-ಭಾಗಮಂಡಲ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮಳೆ ಹೆಚ್ಚಾದಲ್ಲಿ ಭಾಗಮಂಡಲ ಮಡಿಕೇರಿ ರಸ್ತೆ ಸಂಪರ್ಕ ಖಡಿತಗೊಳ್ಳುವ ಸಾಧ್ಯತೆಯಿದೆ. ಇನ್ನು ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಲವಡೆ ಮರಗಳು ಧರೆಗುರುಳುತ್ತಿವೆ. ತಲಕಾವೇರಿ ತೆರಳುವ ಮಾರ್ಗದಲ್ಲಿ ಬೃಹತ್ ಮರ ಬಿದ್ದು, ಭಾಗಮಂಡಲ-ತಲಕಾವೇರಿ ರಸ್ತೆ ಸಂಪೂರ್ಣ ಬಂದ್ ಆಗಿದೆ. ಗಾಳಿ ಮಳೆ ಹೆಚ್ಚಾಗಿದ್ದರಿಂದ ಸೋಮವಾರಪೇಟೆ ವ್ಯಾಪ್ತಿಯ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶ್ರೀಮತಿ ಡಿ.ಚೆನ್ನಮ್ಮ, ಗರಗಂದೂರಿನ ಶಾಲೆಗಳು ಹಾಗೂ ಸೋಮವಾರಪೇಟೆ ಸಂತಜೋಸೆಫ್ ಶಾಲೆಗಳಿಗೆ ರಜೆ ನೀಡಲಾಗಿದೆ.
ಜಿಲ್ಲೆಯ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಇದ್ದು, ಪ್ರಸ್ತುತ 2854.37 ಅಡಿಯಷ್ಟು ನೀರು ಸಂಗ್ರಹವಾಗಿದೆ. ಮಳೆ ಹೀಗೇ ಮುಂದುವರಿದರೆ ಜಲಾಶಯ ತುಂಬುವ ಸಾಧ್ಯತೆ ಇದೆ.
ಇದನ್ನೂ ಓದಿ | Rain News | ಮಳೆಗೆ ಕೊಚ್ಚಿ ಹೋದ ರಸ್ತೆ: ನೀರಲ್ಲಿ ಹೋಮವಾಯ್ತು ಸಾರ್ವಜನಿಕರ ತೆರಿಗೆ ಹಣ