Site icon Vistara News

Karnataka Election 2023: ಮಂಡ್ಯ ಉಸ್ತುವಾರಿ ನನಗೆ ಬೇಡ; ಯಾರನ್ನು ಬೇಕಾದರೂ ಮಾಡಿ ಎಂದು ಸಿಎಂ ವಿರುದ್ಧ ನಾರಾಯಣಗೌಡ ಗರಂ

KC Narayana Gowda

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಾರಂಭವಾಗಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಗೊಂದಲ ಇನ್ನೂ ಮುಂದುವರಿದಿರುವ ಬೆನ್ನಲ್ಲೇ ಸಚಿವ ನಾರಾಯಣಗೌಡ (Narayana Gowda) ಅಸಮಾಧಾನ ಹೊರಹಾಕಿದ್ದು, ನಾನು ಮಂಡ್ಯ ಉಸ್ತುವಾರಿಯನ್ನು ಪಡೆದುಕೊಳ್ಳುವುದಿಲ್ಲ. ಮೂರು ಮೂರು ತಿಂಗಳಿಗೆ ಬದಲಾವಣೆ ಮಾಡುತ್ತಿದ್ದರೆ ನಾನು ಉಸ್ತುವಾರಿ ಹೊಣೆ ಹೊತ್ತುಕೊಳ್ಳಲು ಆಗುತ್ತಾ ಎಂದು ಪ್ರಶ್ನೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನಡೆಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರಾದ ಆರ್. ಅಶೋಕ್, ಅಶ್ವತ್ಥ ನಾರಾಯಣ, ಕೆ.ಗೋಪಾಲಯ್ಯ ಅವರಲ್ಲಿಯೇ ಯಾರದರೂ ಒಬ್ಬರನ್ನು ಉಸ್ತುವಾರಿಯನ್ನಾಗಿ ಮಾಡಲಿ. ಅವರು ಚುನಾವಣೆಯನ್ನು ಗೆಲ್ಲಲು ಯಾವುದೇ ತೊಂದರೆ ಇಲ್ಲ. ಹೀಗಾಗಿ ಅವರಲ್ಲಿಯೇ ಒಬ್ಬರಿಗೆ ಹೊಣೆ ನೀಡಲಿ. ನಾನು ಅವರ ಜತೆ ಇರುತ್ತೇನೆ. ಗೋಪಾಲಯ್ಯಗೆ ಜವಾಬ್ದಾರಿ ಕೊಟ್ಟಾಗ ನಾನು ಅವರ ಜತೆ ನಿಂತು ಓಡಾಡಿದ್ದೇನೆ. ಮುಂದೆಯೂ ಉಸ್ತುವಾರಿಯಾದವರಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿದರು.

ನನಗೆ ಶಿವಮೊಗ್ಗದ ಉಸ್ತುವಾರಿ ಹೊಣೆ ಕೊಟ್ಟಿದ್ದಾರೆ. ನನಗೆ ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ‌ ಹೊಣೆ ಕೊಟ್ಟರೆ ಒಪ್ಪಿಕೊಳ್ಳಲಾರೆ. ನಾನು ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸವನ್ನು ಅರ್ಧಕ್ಕೆ ಬಿಟ್ಟು, ಇಲ್ಲಿ ಅರ್ಧಕ್ಕೆ ಬಿಟ್ಟು ಕೆಲಸ ಮಾಡುವುದು ಕಷ್ಟ ಎಂದು ಹೇಳಿದರು.

ಇದನ್ನೂ ಓದಿ: Cable TV Channel Price hike : 4.5 ಕೋಟಿ ಕೇಬಲ್‌ ಟಿ.ವಿ ಗ್ರಾಹಕರಿಗೆ ಜೀ, ಸ್ಟಾರ್‌, ಸೋನಿ ಪ್ರಸಾರ ಸ್ಥಗಿತ

ಮಂಡ್ಯ ಉಸ್ತುವಾರಿ ಪಡೆಯಲು ಯಾರು ಒಪ್ಪುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ನಾರಾಯಣ ಗೌಡ, ಮುಖ್ಯಮಂತ್ರಿಗಳು ಒಪ್ಪಿಸಬೇಕು. ಕೆ. ಗೋಪಾಲಯ್ಯ ಅವರಿಗೆ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ಗೋಪಾಲಯ್ಯ ಅವರಿಗೆ ಮಂಡ್ಯ ಉಸ್ತುವಾರಿ ಕೊಡಿಸಲು ನಾರಾಯಣಗೌಡ ಪ್ರಯತ್ನ ಮಾಡುತ್ತಿದ್ದಾರೆ.

Exit mobile version