Dr K Bhujang Shetty: ಅಂಧರ ಬಾಳಿಗೆ ಬೆಳಕಾಗಿದ್ದ ನಾರಾಯಣ ನೇತ್ರಾಲಯದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಇನ್ನಿಲ್ಲ - Vistara News

ಕರ್ನಾಟಕ

Dr K Bhujang Shetty: ಅಂಧರ ಬಾಳಿಗೆ ಬೆಳಕಾಗಿದ್ದ ನಾರಾಯಣ ನೇತ್ರಾಲಯದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಇನ್ನಿಲ್ಲ

Dr K Bhujang Shetty: ಹೃದಯಾಘಾತವಾಗಿದ್ದರಿಂದ ಡಾ. ಕೆ. ಭುಜಂಗ ಶೆಟ್ಟಿ ಅವರನ್ನು ಬೆಂಗಳೂರಿನ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

VISTARANEWS.COM


on

Bhujang Shetty passes away in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾರಾಯಣ ನೇತ್ರಾಲಯದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ, ಪ್ರಖ್ಯಾತ ನೇತ್ರ ತಜ್ಞ ಡಾ. ಕೆ. ಭುಜಂಗ ಶೆಟ್ಟಿ (69) (Dr K Bhujang Shetty) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಆಸ್ಪತ್ರೆಗೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿ, ಮನೆಗೆ ತೆರಳಿದ ಬಳಿಕ ಸಂಜೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಮಣಿಪಾಲ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಫಿರೋಜ್ ಅಹ್ಮದ್ ಪ್ರತಿಕ್ರಿಯಿಸಿ, ಸಂಜೆ 7.30ರಲ್ಲಿ ಮನೆಯಲ್ಲಿ ವ್ಯಾಯಾಮ ಮಾಡುವಾಗ ಡಾ. ಕೆ. ಭುಜಂಗ ಶೆಟ್ಟಿ ಅವರಿಗೆ ತೀವ್ರ ಸ್ವರೂಪದ ಹೃದಯಾಘಾತವಾಗಿದೆ. ಕೂಡಲೆ ನಮ್ಮ ಆಸ್ಪತ್ರೆಗೆ ಅವರನ್ನು ಕರೆತರಲಾಯಿತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡಿದೆವು. ಆಸ್ಪತ್ರೆಗೆ ಕರೆತರುವ ವೇಳೆಯೇ ಅವರ ನಾಡಿ ಬಡಿತ ನಿಂತಿತ್ತು. ಎಲ್ಲಾ ರೀತಿಯ ಪ್ರಯತ್ನ ಪಟ್ಟೆವು, ಆದರೆ, ಅವರು ರಾತ್ರಿ 9.40ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮಾಹಿತಿ ನೀಡಿದರು.

ಶನಿವಾರ ಮಧ್ಯಾಹ್ನ ಹರಿಶ್ಚಂದ್ರ ಘಾಟ್‌ನಲ್ಲಿ‌ ಅಂತ್ಯ ಸಂಸ್ಕಾರ

ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಡಾ. ಕೆ. ಭುಜಂಗ ಶೆಟ್ಟಿ ಅವರ ಅಂತಿಮ ದರ್ಶನಕ್ಕೆ ಶನಿವಾರ ವ್ಯವಸ್ಥೆ ಮಾಡಲಾಗುತ್ತದೆ. ಬೆಳಗ್ಗೆ 10 ಗಂಟೆಯ ನಂತರ ಮಣಿಪಾಲ ಆಸ್ಪತ್ರೆಯ ಶವಗಾರದಿಂದ ನಾರಾಯಣ ಆಸ್ಪತ್ರೆಗೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಗುತ್ತದೆ. 11 ಗಂಟೆಯಿಂದ 2 ಗಂಟೆಯವರಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ಬಳಿಕ ಹರಿಶ್ಚಂದ್ರ ಘಾಟ್‌ನಲ್ಲಿ‌ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ದೊರೆತಿದೆ.

ಡಾ. ಭುಜಂಗ ಶೆಟ್ಟಿ ಹಿನ್ನೆಲೆ

1953ರಲ್ಲಿ ಕುಂದಾಪುರದಲ್ಲಿ ಡಾ.ಭುಜಂಗ ಶೆಟ್ಟಿ ಅವರು ಜನಿಸಿದರು. 1978ರಲ್ಲಿ ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಿದರು. 1982ರಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಆರಂಂಭಿಸಿದ ಅವರಿಗೆ 2010ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಇವರು ಪುತ್ರಿ ನಯನಾ ಶೆಟ್ಟಿ, ಪುತ್ರ ನರೇನ್‌ ಶೆಟ್ಟಿ ಅವರನ್ನು ಅಗಲಿದ್ದಾರೆ.

ಯಾವುದೇ ಔಷಧ ಇಲ್ಲದೆ ಕೇವಲ ಆಹಾರ ಪದ್ಧತಿ ಬದಲಾವಣೆ ಮೂಲಕ ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ಗೆಲ್ಲಬಹುದು ಎಂದು ರಿವರ್ಸ್‌ ಡಯಾಬಿಟಿಸ್‌ ಎಂಬ ಸರಳ ಸೂತ್ರದ ಮೂಲಕ ಭುಜಂಗ ಶೆಟ್ಟಿ ಅವರು ಮಧುಮೇಹವನ್ನು ಗೆದ್ದಿದ್ದರು.

ಇದನ್ನೂ ಓದಿ | Mono Diet: ಏಕಾಹಾರ ಪದ್ಧತಿಯೆಂಬ ಶಾರ್ಟ್‌ಕಟ್:‌ ದಿಢೀರ್‌ ತೂಕ ಇಳಿಕೆ ಒಳ್ಳೆಯದೇ?

ಡಾ. ರಾಜ್‌ ಕುಮಾರ್ ಕುಟುಂಬದ ವೈದ್ಯರಾಗಿ ಸೇವೆ

ಡಾ.ಭುಜಂಗ ಶೆಟ್ಟಿ ಅವರ ಸಮ್ಮುಖದಲ್ಲಿ ನೇತ್ರದಾನ ಪ್ರತಿಜ್ಞೆ ಮಾಡಿದ್ದ ಡಾ. ರಾಜ್ ಕುಮಾರ್‌

ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಭುಜಂಗ ಶೆಟ್ಟಿ ಅವರು, ಡಾ. ರಾಜ್ ಕುಮಾರ್ ಕುಟುಂಬದ ವೈದ್ಯರಾಗಿದ್ದರು. ಅಲ್ಲದೆ ನಾರಾಯಣ ನೇತ್ರಾಲಯದಲ್ಲಿ ಡಾ. ರಾಜ್ ಕುಮಾರ್ ನೇತ್ರದಾನ ಕೇಂದ್ರವನ್ನು ಸ್ಥಾಪಿಸಿ, ಬಹುದೊಡ್ಡ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

1994ರಲ್ಲಿ ನಾರಾಯಣ ನೇತ್ರಾಲಯ ಉದ್ಘಾಟನೆ ವೇಳೆ ಡಾ. ರಾಜ್‌ ಕುಮಾರ್‌ ಅವರು ತಮ್ಮ ಕುಟುಂಬ ಸದಸ್ಯರೆಲ್ಲರ ಕಣ್ಣುಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ನಂತರ 2006ರಲ್ಲಿ ಅವರು ನಿಧನರಾದ ಬಳಿಕ ಅವರ ಕಣ್ಣುಗಳನ್ನು ದಾನ ಮಾಡಲಾಯಿತು. ಇನ್ನು ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದಾಗ ಅವರು ಕಣ್ಣುಗಳನ್ನು ದಾನ ಮಾಡಲಾಗಿತ್ತು. ಭುಜಂಗ ಶೆಟ್ಟಿ ಮಾರ್ಗದರ್ಶನದಲ್ಲಿ ಎರಡು ಕಣ್ಣುಗಳನ್ನು ಬಳಸಿಕೊಂಡು ನಾಲ್ವರಿಗೆ ದೃಷ್ಟಿ ನೀಡಲಾಗಿತ್ತು.

ಭುಜಂಗ ಶೆಟ್ಟಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ

ಖ್ಯಾತ ನೇತ್ರ ತಜ್ಞರಾದ ಡಾ. ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ತಿಳಿದು ಅತ್ಯಂತ‌ ದುಃಖವಾಗಿದೆ‌. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಸಂತಾಪ

ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು. ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ | Mobile Addiction: ಅತಿಯಾಗಿ ಮೊಬೈಲ್ ಬಳಸ್ತೀರಾ? ನಿಮ್ಮ ಹೃದಯಕ್ಕಿದುವೇ ಡೇಂಜರ್!

ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Education News : ಶಿಕ್ಷಣ ಇಲಾಖೆ ವಿರುದ್ಧ ಕ್ಯಾಮ್ಸ್‌ ಸಂಘಟನೆ ಆಕ್ರೋಶ ಹೊರಹಾಕಿದೆ. ಗುಣಮಟ್ಟ ಶಿಕ್ಷಣ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ (SSLC Result)ಕುಸಿತ ಉಂಟಾಗಿದೆ. ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದರೆ ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದೆ.

VISTARANEWS.COM


on

By

sslc result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣ ಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಗುಣಮಟ್ಟ ಹೆಚ್ಚಿಸುವಲ್ಲಿ ಯಾವುದೇ ಹೆಚ್ಚು ಪರಿಣಾಮಕಾರಿಯಾಗಿ ರೂಪುರೇಷಗಳನ್ನು ಮಾಡುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಶಿಕುಮಾರ್‌ ಆಕ್ರೋಶ ಹೊರಹಾಕಿದರು.

SSLC result Kams shashikumar
ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌

ಸುಖಾಸುಮ್ಮನೆ ಕಿರುಕುಳ, ದಬ್ಬಾಳಿಕೆ ಹಾಗೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಂಡು ಕೆಳ ಹಂತದ ಅಧಿಕಾರಿಗಳು ಲಾಭ ಪಡೆಯುತ್ತಿದ್ದಾರೆ. ಬಿಇಒ (BEO) ಹಾಗೂ ಡಿಡಿಪಿಐ (DDPI) ಹಂತದ ಎಲ್ಲ ಅಧಿಕಾರಿಗಳು ಕೇವಲ ಆಡಳಿತಾತ್ಮಕ ವ್ಯವಹಾರಗಳನ್ನು ಮಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಯಾವುದೇ ಗುಣಮಟ್ಟದ ಬಗ್ಗೆ ಕ್ರಮ ವಹಿಸದೇ ಇರುವುದೇ ಫಲಿತಾಂಶ ಕುಸಿಯಲು ಕಾರಣ ಎಂದು ಕಿಡಿಕಾರಿದರು.

ಸೋಮವಾರ ಸುದ್ಧಿಗೋಷ್ಠಿ ನಡೆಸಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ.

ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎಂದಿದ್ದರು. ಹತ್ತಾರು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲು ಆಗದ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸರ್ಕಾರವೇ ಕಾರಣ. ಇದಕ್ಕೆ ಪರಿಹಾರ ಹುಡುಕುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

ಗುಣಮಟ್ಟದ ಪಠ್ಯ ಪುಸ್ತಕ ಇಲ್ಲದೆ CBSE-ICSE ಕಡೆ ವಲಸೆ

ಅಹಿಂದ ಸೇರಿ ಎಲ್ಲಾ ವರ್ಗದ ಜನರ ಪರ ಇರುವ ಸಿಎಂ ಸಿದ್ದರಾಮಯ್ಯರಿಗೆ ಕ್ಯಾಮ್ಸ್‌ನಿಂದ ಮನವಿ ಮಾಡುತ್ತೇವೆ. ಪ್ರತಿ ಮಗುವಿಗೂ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸಬೇಕು. ಪ್ರತಿ ಬಾರಿ ಪಠ್ಯಕ್ರಮವು ರಾಜಕೀಯವಾಗಿ ಪರಿಷ್ಕರಣೆ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮ ಮುಂದೆ ಅನುಭವಿಸಬೇಕಾಗುತ್ತೆ.

ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ಶಿಕ್ಷಣ ಇಲಾಖೆಯು ಗುಣಮಟ್ಟ ಶಿಕ್ಷಣ ಕಾಪಾಡದಿರುವ ಪರಿಣಾಮ, ಇದನ್ನು ತಕ್ಷಣ ಸರಿ ಪಡಿಸಬೇಕು.ಈ ಮೂಲಕ ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯದ ಪಠ್ಯಕ್ಕೆ ಪೂರಕವಾಗಿ ರಾಷ್ಟ್ರಮಟ್ಟದ ಶಿಕ್ಷಣದ ಪೈಪೋಟಿಗೆ ಸಿದ್ದ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿಯಾಗಿದೆ ಎಂದರು.

ಶಿಕ್ಷಣ ಸಚಿವರು ಯಾರು ಎಂಬುದೇ ಗೊಂದಲ

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿಯಲ್ಲಿ ಇದೆ. ಇದಕ್ಕೆ ಇಲಾಖೆಯ ಮೇಲಾಧಿಕಾರಿಗಳು, ರಾಜಕೀಯ ಮುಖಂಡರು, ಸರ್ಕಾರ ಎಲ್ಲರೂ ಹೊಣೆಯಾಗಿದ್ದಾರೆ. ಶಿಕ್ಷಣ ಮಂತ್ರಿಗಳು ನಮಗೆ ಲಭ್ಯವೇ ಇರುವುದಿಲ್ಲ. ಸಚಿವರ ಪಿಎ ಅವರೇ ಮಂತ್ರಿಗಳ ರೀತಿ ವರ್ತನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ಸಚಿವರು ಯಾರು ಎಂಬ ಅನುಮಾನ ಮೂಡುತ್ತೆ. ಕಾರಣ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಅವರೇ ಸಚಿವರಾಗಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಉತ್ತರ ನೀಡುತ್ತಾರೆ ಇದು ನಿಜಕ್ಕೂ ಅತ್ಯಂತ ದುರಾದೃಷ್ಟಕರ ಎಂದು ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Prajwal Revanna Case: ಹಾಸನದಲ್ಲಿ ಬಹಳ ಜನರ ಬಳಿ ವಿಡಿಯೊ ಹರಿದಾಡುತ್ತಿದೆ. ವಿಡಿಯೊ ಇದ್ದವರನ್ನೆಲ್ಲ ಬಂಧನ ಮಾಡಕ್ಕಾಗುತ್ತಾ? ಚೇತನ್ ಗೌಡ ಬೇರೆ, ಚೇತನ್ ಬೇರೆ, ನಮ್ಮ ಕಚೇರಿಯಲ್ಲಿ 24 ವರ್ಷದ ಆ ಯುವಕ ಇದ್ದ, ಆತ ಅಮಾಯಕ ಎಂದು ಪ್ರೀತಂ ಗೌಡ ತಿಳಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಇಬ್ಬರು ಆಪ್ತರನ್ನು ಬಂಧಿಸಿರುವ ಬಗ್ಗೆ ಮಾಜಿ ಶಾಸಕ ಪ್ರೀತಂ ಗೌಡ ಅವರು ಮೊದಲ ಬಾರಿ ಮಾಧ್ಯಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಮಗೂ ವಿಡಿಯೊಗೂ ಸಂಬಂಧ‌ ಇಲ್ಲ, ನೆನ್ನೆ ಅಮಾಯಕರ ಬಂಧ‌ನ ಆಗಿದೆ. ಹಾಸನದಲ್ಲಿ ಯುವಕರಿಂದ ಮುದುಕರವರೆಗೆ ಎಲ್ಲರ ಬಳಿಯೂ ವಿಡಿಯೊಗಳಿವೆ. ಪೆನ್‌ಡ್ರೈವ್ ಇದೆ, ವಿಡಿಯೊ ಇದೆ ಅಂತ ವಶಕ್ಕೆ ತೆಗೆದುಕೊಳ್ಳುತ್ತಾ ಹೋದರೆ ಹಾಸನದಲ್ಲಿ ಅಂತಹ 1.5 ಲಕ್ಷ ಜನರನ್ನು ವಶಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಹೀಗಾಗಬಾರದಿತ್ತು ಎಂದು ಹಲವರು‌ ಹೇಳುತ್ತಾರೆ. ನಾನು ಕೂಡ ವಿಡಿಯೊ ಸಿಕ್ಕಿದರೆ ಸರ್ಕ್ಯುಲೇಟ್ ಮಾಡಬೇಡಿ, ಇಟ್ಟುಕೊಳ್ಳಬೇಡಿ, ಅದು ನೀಚ ಕೆಲಸ ಎಂದು ಹೇಳುತ್ತಿರುತ್ತೇನೆ. ನಮಗೆ ಜವಾಬ್ದಾರಿ ಇದೆ, ವಿಡಿಯೊ ಹಂಚಬೇಡಿ, ಡಿಲೀಟ್ ಮಾಡಿ ಎಂತಲೇ ನಮ್ಮ ಕಾರ್ಯಕರ್ತರಿಗೂ ಹೇಳಿದ್ದೀನಿ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಹಾಸನದಲ್ಲಿ ಬಹಳ ಜನರ ಬಳಿ ವಿಡಿಯೊ ಹರಿದಾಡುತ್ತಿದೆ. ವಿಡಿಯೊ ಇದ್ದವರನ್ನೆಲ್ಲ ಬಂಧನ ಮಾಡಕ್ಕಾಗುತ್ತಾ? ಚೇತನ್ ಗೌಡ ಬೇರೆ, ಚೇತನ್ ಬೇರೆ. ನಮ್ಮ ಕಚೇರಿಯಲ್ಲಿ 24 ವರ್ಷದ ಆ ಯುವಕ ಇದ್ದ, ಆತ ಅಮಾಯಕ. ಅವನ ಬಳಿ ಹೇಗೋ ವಿಡಿಯೋ ಬಂದಿರುತ್ತೆ, ಅದೇ ಅಪರಾಧ ಅಂದರೆ, ಹಾಸನದಲ್ಲಿ ಯುವಕರಿಂದ ಮುದುಕರವರೆಗೆ ಎಲ್ಲರ ಬಳಿಯೂ ಇದೆ. ವಿಡಿಯೊ, ಪೆನ್‌ಡ್ರೈವ್ ಇದೆ ಅನ್ನೋದೇ ಮಾನದಂಡವಾದರೆ ವಿಡಿಯೊ ಇರೋರೆಲ್ಲ ತಪ್ಪಿತಸ್ಥರಾ ಎಂದು ಪ್ರಶ್ನಿಸಿದ್ದಾರೆ.

ಏ.23 ರಂದು ಲಾಯರ್ ಪೆನ್‌ಡ್ರೈವ್ ತಂದು ಕೊಟ್ಟರು. ಹಾಗಂತ ಆ ಲಾಯರ್ ಮೇಲೆ ಕೇಸ್ ಹಾಕಲು ಆಗುತ್ತಾ? ಎಲೆಕ್ಷನ್ ಏಜೆಂಟ್ ಪೆನ್‌ಡ್ರೈವ್ ಸಿಕ್ಕಿತು ಎಂದು ತಂದುಕೊಟ್ಟರು, ಹಾಗಂತ ಅವರ ಮೇಲೂ ಕೇಸ್ ಮಾಡಕ್ಕಾಗುತ್ತಾ? ಆ ರೀತಿಯಾದರೆ ಹದಿನೈದು ಲಕ್ಷ ಜನರ ಮೇಲೆ ಕೇಸ್ ಹಾಕಬೇಕಾಗುತ್ತದೆ. ಈ ವಿಚಾರದಲ್ಲಿ ಅಮಾಯಕರು ಬಂಧನ ಆಗಬಾರದು ಎಂದು ತಿಳಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಲ್ಲ, ಆದರೆ ತನಿಖೆ ದಿಕ್ಕು ಸರಿಯಾಗಿ ನಡೆಯಲಿ. ಪ್ರಜ್ವಲ್ ಪ್ರಕರಣದಲ್ಲಿ ನನ್ನದು ಯಾವಾಗಲೂ ನೋ ಕಾಮೆಂಟ್. ವಿಡಿಯೊ ಬಗ್ಗೆ ಮೊದಲು ಯಾರು ಮಾಹಿತಿ ಕೊಟ್ಟರೋ ಅವರನ್ನೇ ಕೇಳಲಿ. ಯಾರು ಮಾಹಿತಿ ಕೊಟ್ಟು? ವಿಡಿಯೊ ಮಾಡಿಕೊಂಡವರು ಯಾರು? ಎಂಬುವುದು ತಿಳಿಯಬೇಕು. ಒಂದು ವರ್ಷದಿಂದಲೇ ವಿಡಿಯೊ ಹರಿದಾಡುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ವರ್ಷದ ಹಿಂದೆಯೇ ಕ್ರಮ ಕೈಗೊಳ್ಳಬೇಕಿತ್ತು. ಈಗ ಚರ್ಚೆ ಮಾಡಿದರೆ ಏನು ಪ್ರಯೋಜನ? ಸಂತ್ರಸ್ತರ ಬಗ್ಗೆಯೂ ಯೋಚಿಸಬೇಕು. ಯಾವ ದಿಕ್ಕಿನಲ್ಲಿ ತನಿಖೆ ಆಗಬೇಕೋ ಆ ದಿಕ್ಕಿನಲ್ಲಿ ಆಗಲಿ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

ಹಾಸನದಲ್ಲಿ ಇಂಥ ಪ್ರಕರಣ ಆಗಬಾರದಿತ್ತು, ಆಗಿ ಹೋಗಿದೆ. ಎಲ್ಲರೂ ಸಾಮಜಿಕ ಬದ್ಧತೆ ತೋರಿಸಬೇಕು. ಯಾರೂ ಅಶ್ಲೀಲ ವಿಡಿಯೊ ಹಂಚಬಾರದು ಎಂದು ಪ್ರೀತಂ ಗೌಡ ತಿಳಿಸಿದ್ದಾರೆ.

Continue Reading

ರಾಜಕೀಯ

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Karnataka Politics: ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

VISTARANEWS.COM


on

Karnataka Politics Operation Kamala is not possible says CM Siddaramaiah
Koo

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Politics) ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ (Operation Kamala) ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಬಾರಿ ಎನ್‌ಡಿಎ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ (Maharashtra CM Eknath Shinde) ಹೇಳಿಕೆ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಉತ್ತರಿಸಿದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ, ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮಾನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕ ಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ. ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

Continue Reading

ವಿಜಯನಗರ

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Vijayanagara News: ಕೊಟ್ಟೂರು ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ ರಥವನ್ನು ಶ್ರದ್ಧಾ ಭಕ್ತಿಯಿಂದ ಎಳೆದು ಭಕ್ತಿ ಸಮರ್ಪಿಸಿದರು.

VISTARANEWS.COM


on

Ujjaini Sri Marulasiddeshwara Rathotsava
Koo

ಕೊಟ್ಟೂರು: ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ (Vijayanagara News) ನೆರವೇರಿತು. ಇದಕ್ಕೂ ಮೊದಲು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

ಪಟಾಕ್ಷಿ ಸವಾಲು

ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ರಥದ ಪಟಾಕ್ಷಿ ಸವಾಲು ಪ್ರಕ್ರಿಯೆ ನಡೆಯಿತು. 2.01 ಲಕ್ಷ ರೂ.ಗೆ ಚಿತ್ರದುರ್ಗ ಜಿಲ್ಲೆಯ ಸಿದ್ದಾಪುರ ಪ್ರವೀಣ್ ಸವಾಲಿನಲ್ಲಿ ಪಡೆದುಕೊಂಡರು. ಬಳಿಕ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವೈಭವದ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ, ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಪೀಠದ ಪ್ರೌಢಶಾಲಾ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Continue Reading
Advertisement
Naxals
ದೇಶ13 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ17 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ21 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್22 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ35 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್35 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ40 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ51 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ1 hour ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Health Tips Kannada
ಆರೋಗ್ಯ1 hour ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌