ಬೆಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಾದ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ʼʼಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು. ಯಕ್ಷಗಾನದ ಹಿನ್ನೆಲೆ ಸಂಗೀತಕ್ಕೆ ತಮ್ಮ ಜೀವಿತವನ್ನು ಅರ್ಪಿಸಿದ್ದರು. ತಮ್ಮ ವಿಶಿಷ್ಟ ಶೈಲಿಗಾಗಿ ಹೆಸರಾಗಿದ್ದರು. ಅವರ ಸಾಧನೆಯು ಮುಂಬರುವ ತಲೆಮಾರುಗಳ ಸ್ಮರಣೆಯಲ್ಲಿ ಇರುತ್ತದೆ. ಅವರ ಸಾವಿನಿಂದ ನೋವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆʼʼ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
“ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Balipa Narayana Bhagavata : ಬಲಿಪ ಪರಂಪರೆಯ ಬಲಿಷ್ಠ ಕೊಂಡಿ, ಯಕ್ಷ ಲೋಕದ ದಂತ ಕಥೆ ಬಲಿಪ ನಾರಾಯಣ ಭಾಗವತರು