ತುಮಕೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ತುಮಕೂರು ಜಿಲ್ಲೆಯ ಗುಬ್ಬಿಯ ಎಚ್ಎಎಲ್ ಘಟಕ, ದೇಸಿ ತಂತ್ರಜ್ಞಾನದ ಲಘು ಯುದ್ಧ ಹೆಲಿಕಾಪ್ಟರ್‌ಗಳನ್ನು ತಯಾರಿಸಲಿದೆ.
ಸುಮಾರು 615 ಎಕರೆ ಭೂ ಪ್ರದೇಶದಲ್ಲಿ ಇದು ನಿರ್ಮಾಣವಾಗಿದ್ದು, 5300 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಿ ನಿಂತಿದೆ. ಏಷ್ಯಾದ ಅತಿ ದೊಡ್ಡ ಲಘು ಯುದ್ಧ ಹೆಲಿಕಾಪ್ಟರ್ ತಯಾರಿಕೆ ಘಟಕವೆನಿಸಿದೆ. ಇಲ್ಲಿ ಹಂತಹಂತವಾಗಿ 6 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ರಕ್ಷಣಾ ವಲಯದಲ್ಲಿ ಆತ್ಮನಿರ್ಭರ ಭಾರತ ಯೋಜನೆಗೆ ಈ ಘಟಕ ತನ್ನದೇ ಕೊಡುಗೆ ನೀಡಲಿದೆ.
2016ರಲ್ಲಿ ಇದಕ್ಕೆ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರೇ ಮಾಡಿದ್ದರು. 2018ರಲ್ಲಿ ಪರೀಕ್ಷಾರ್ಥ ಹೆಲಿಕಾಪ್ಟರ್ ಹಾರಾಟ ನಡೆದಿತ್ತು. ಈ ಕಾರ್ಖಾನೆಯಲ್ಲಿ ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಗುರಿಯಿದೆ. ಹಂತ ಹಂತವಾಗಿ ವರ್ಷಕ್ಕೆ 60 ಮತ್ತು ನಂತರ 90ಕ್ಕೆ ಹೆಚ್ಚಿಸುವ ಚಿಂತನೆ ಇದೆ. 3-15 ಟನ್‌ಗಳ ವ್ಯಾಪ್ತಿಯಲ್ಲಿ 1,000ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲು HAL ಚಿಂತನೆ ಹೊಂದಿದೆ. ಮುಂದಿನ 20 ವರ್ಷಗಳ ಅವಧಿಯಲ್ಲಿ ಒಟ್ಟು 4 ಲಕ್ಷ ಕೋಟಿ ರೂಪಾಯಿ ವ್ಯವಹಾರವಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Narendra Modi: ಇಂದು ಪ್ರಧಾನಿ ಮೋದಿ ಬೆಂಗಳೂರು, ತುಮಕೂರಿಗೆ ಭೇಟಿ; ಕಾರ್ಯಕ್ರಮಗಳ ವೇಳಾಪಟ್ಟಿ ಹೀಗಿದೆ