Site icon Vistara News

Mallikarjun Kharge: ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ; ಮೋದಿ, ರಾಹುಲ್‌ ಶುಭಾಶಯ

Narendra Modi Wishes Mallikarjun Kharge

Narendra Modi, Rahul Gandhi Wish Mallikarjun Kharge On His Birthday

ಬೆಂಗಳೂರು: ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ (Mallikarjun Kharge) ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. “ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುದೀರ್ಘ ಆರೋಗ್ಯ ಕೊಟ್ಟು ಕಾಪಾಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೂಡ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. “ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಶ್ರಮ ಹಾಗೂ ಬದ್ಧತೆಯು ಎಂದಿಗೂ ನಮಗೆ ಸ್ಫೂರ್ತಿದಾಯಕವಾಗಿದೆ. ಉತ್ತಮ ಆರೋಗ್ಯ, ಪ್ರೀತಿ ತುಂಬಿದ ಜೀವನ ನಿಮ್ಮದಾಗಿರಲಿ ಎಂಬುದಾಗಿ ಆಶಿಸುತ್ತೇನೆ” ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಶುಭಾಶಯ ಕೋರಿದ್ದಾರೆ.

ಶುಭಾಶಯ ತಿಳಿಸಿದ ಮೋದಿ

ರಾಜ್ಯ ಸಚಿವ ಎಂ.ಬಿ.ಪಾಟೀಲ್‌ ಅವರು ಕೂಡ ಶುಭಕೋರಿದ್ದಾರೆ. “ಪ್ರಜಾಪ್ರಭುತ್ವವಾದಿಗಳು, ಸಂವಿಧಾನದ ಆಶಯದಂತೆ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವವನ್ನು ಪ್ರತಿಪಾದಿಸುವ ಸಂಸದೀಯ ಪಟು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಹರಸಲಿ ಎಂದು ಪ್ರಾರ್ಥಿಸುತ್ತೇನೆ. ಪಕ್ಷಕ್ಕೆ ಮತ್ತು ದೇಶಕ್ಕೆ ಅವರ ಮಾರ್ಗದರ್ಶನ ನಿರಂತರವಾಗಿರಲಿ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Opposition Meet: ಈಗ ಭೇದ ಮರೆತು ಒಂದಾಗೋಣ ಎಂದ ಖರ್ಗೆ: ಘಟಬಂಧನಕ್ಕೆ 3+1 ಹೆಸರು ಸೂಚನೆ

ರಾಹುಲ್‌ ಗಾಂಧಿ ಟ್ವೀಟ್

ಮೋದಿ, ರಾಹುಲ್‌ ಸೇರಿ ದೇಶಾದ್ಯಂತ ಕಾಂಗ್ರೆಸ್‌ ನಾಯಕರು, ಗಣ್ಯರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ವರವಟ್ಟಿ ಗ್ರಾಮದಲ್ಲಿ 1942ರ ಜುಲೈ 21ರಂದು ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯ ಏಳು-ಬೀಳುಗಳ ಮಧ್ಯೆಯೂ ಎಐಸಿಸಿ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ ಸಾಧನೆ ಮಾಡಿದ್ದಾರೆ.

Exit mobile version