ಕರ್ನಾಟಕ
Karnataka Election 2023: ಅಡಕೆ ಬೆಳೆಗಾರರಿಗೆ ಮೋಡಿ ಮಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
Karnataka Election 2023: ಶಿವಮೊಗ್ಗದ ಆಯನೂರಿನಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ಕಾಂಗ್ರೆಸ್ ಆಡಳಿತದಲ್ಲಿ ಅಡಕೆ ಬೆಳೆಗಾರರು ಹೇಗೆ ನಷ್ಟ ಅನುಭವಿಸುತ್ತಿದ್ದರು ಎಂದು ವಿವರಿಸಿದರು.
ಶಿವಮೊಗ್ಗ, ಕರ್ನಾಟಕ: ಬಿಜೆಪಿ ಸರ್ಕಾರವು ಅಡಕೆ ಬೆಳೆಗಾರರಿಗೆ ಎಲ್ಲ ರೀತಿಯ ನೆರವು ನೀಡುತ್ತಿದೆ. ಅಡಿಕೆ ಆಮದು ನಿಯಂತ್ರಿಸಿ ಇಲ್ಲಿನ ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತಿದ್ದೇನೆ. 2014ರಲ್ಲಿ ಪ್ರತಿ ಕೆಜಿಗೆ ಅಡಕೆಯ ಕನಿಷ್ಠ ಆಮದು ಬೆಲೆ (MIP) 100 ರೂ. ಇತ್ತು. ಅದನ್ನು ನಾನು 350 ರೂ.ಗೆ ಹೆಚ್ಚಿಸಿದ್ದೇನೆ. ಜಗತ್ತಿನಲ್ಲಿ ಯಾರು ಏನೆಂದರೂ ನನಗೆ ಲೆಕ್ಕಕ್ಕಿಲ್ಲ. ನನ್ನ ಕರ್ನಾಟಕದ ರೈತರಿಗೆ ಒಳ್ಳೆಯದಾಗಬೇಕು, ಅಡಕೆ ಬೆಳೆಗಾರರಿಗೆ ಒಳ್ಳೆಯದಾಗಬೇಕು. ಎಂಐಪಿ ಹೆಚ್ಚಿಸಿದ್ದರಿಂದ ಕರ್ನಾಟಕದ ರೈತರಿಗೆ, ಅಡಕೆ ಬೆಳೆಗಾರರಿಗೆ ಭಾರಿ ಲಾಭವಾಗಿದೆ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಹೇಳಿದರು(Karnataka Election 2023).
ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಒಂದೆಡೆ ಆಮದು ಮೇಲೆ ನಿಯಂತ್ರಣ ಹೇರುತ್ತಿದ್ದರೆ ಮತ್ತೊಂದೆಡೆ ಕೃಷಿ ರಫ್ತು ಹೆಚ್ಚಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ರಫ್ತು ಬಹಳ ಕಡಿಮೆ ಇತ್ತು. ಮೋದಿ ಸರ್ಕಾರದ ಪ್ರಯತ್ನದ ಫಲವಾಗಿ ಈಗ ಭಾರತವು ಕೃಷ್ಟಿ ರಫ್ತು ಮಾಡುವ ಟಾಪ್ 10 ರಾಷ್ಟ್ರಗಳ ಸಾಲಿಗೆ ಸೇರಿಕೊಂಡಿದೆ. ಆ ಮೂಲಕ ಕೃಷ್ಟಿ ರಫ್ತು ಮಾಡುವ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ನಾನು ಪ್ರಧಾನಿಯಾಗುವುದಕ್ಕಿಂತಲೂ ಮುಂಚೆನಿಂದಲೂ ಕರ್ನಾಟಕ ಅಡಕೆ ಬೆಳೆಗಾರರ ಪರವಾಗಿಯೇ ಇದ್ದೇನೆ. ಹಿಂದೆ ನಾನು ಗುಜರಾತ್ ಸಿಎಂ ಆಗಿದ್ದಾಗ, ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಅವರು ತಮ್ಮ ನಿಯೋಗದೊಂದಿಗೆ ಬಂದು, ಅಡಕೆ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ನೆರವು ನೀಡಿ ಎಂದರು. ಆಗ ನಾನು ಸಾಧ್ಯವಿರುವ ಎಲ್ಲ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗ ಸೇರಿದಂತೆ ಈ ಪ್ರದೇಶದಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರವು ಅಡಕೆ ಬೆಳೆಗಾರರ ಮೇಲೆ ಗದಾಪ್ರಹಾರ ಮಾಡಿತು. ಇದಕ್ಕೆ ಕಾಂಗ್ರೆಸ್ ಆಡಳಿತದಲ್ಲಿದ್ದ ಅಡಕೆ ಆಮದು ನೀತಿಯನ್ನೇ ಉದಾಹರಣೆಯಾಗಿ ತೆಗೆದುಕೊಳ್ಳಬಹುದು. ಈಗ ನೀವು ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತದ ಆಮದು ನೀತಿಗಳನ್ನು ಹೋಲಿಕೆ ಮಾಡಿದರೆ, ಯಾರು ಅಡಕೆ ಬೆಳೆಗಾರರ ಪರವಾಗಿ ಇದ್ದಾರೆಂಬುದು ಖಚಿತವಾಗುತ್ತದೆ. ಆಮದು ಕನಿಷ್ಠ ಬೆಲೆಯನ್ನು ಮೂರು ಪಟ್ಟು ಹೆಚ್ಚಳ ಮಾಡಿದ್ದರಿಂದ ಹೊರಗಿನಿಂದ ಯಾರೂ ಅಡಕೆ ಖರೀದಿಸುವ ಧೈರ್ಯವನ್ನೇ ಮಾಡಲಿಲ್ಲ. ಇದರಿಂದ ಕರ್ನಾಟಕ ರೈತರಿಗೆ, ಅಡಕೆ ಬೆಳೆಗಾರರಿಗೆ ಲಾಭವಾಯಿತೋ ಇಲ್ಲ ಎಂದು ಪ್ರಧಾನಿ ಮೋದಿ ಅವರು ಪ್ರಶ್ನಿಸಿದರು.
ಇದನ್ನೂ ಓದಿ: Karnataka Election: ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿರುವ ನನಗೆ ಕಾಂಗ್ರೆಸ್ ಧಮ್ಕಿ ಹಾಕುತ್ತಿದೆ; ಪ್ರಧಾನಿ ನರೇಂದ್ರ ಮೋದಿ
ಪ್ರತಿ ವರ್ಷ 13 ಲಕ್ಷ ಉದ್ಯೋಗ ಸೃಷ್ಟಿ
ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದರೆ ಐದು ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದೆ. ಅಂದರೆ ವರ್ಷಕ್ಕೆ 2 ಲಕ್ಷ ಉದ್ಯೋಗ ಎಂದಾಯಿತು. ಕಾಂಗ್ರೆಸ್‌ನ ಈ ಗ್ಯಾರಂಟಿ ಎಷ್ಟು ಸುಳ್ಳು ಎಂದು ನಾನು ಹೇಳುತ್ತೇನೆ. ಕೇವಲ 3.5 ವರ್ಷ ಆಡಳಿತ ನಡೆಸಿದ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರವು ಪ್ರತಿ ವರ್ಷ 13 ಲಕ್ಷ ಔಪಚಾರಿಕ ಉದ್ಯೋಗಗಳನ್ನು ಸೃಷ್ಟಿ ಮಾಡಿದೆ. ಅದು ಕೊರೊನಾದಂಥ ಸಂಕಟ ಕಾಲದಲ್ಲೂ ಈ ಸಾಧನೆ ಮಾಡಿದೆ. ಈಗ ಗೊತ್ತಾಯಿತು ಅಲ್ವಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೇಗೆ ಕರ್ನಾಟಕವನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಪ್ರತಿ ಎರಡು ದಿನಕ್ಕೆ ಒಂದು ಕಾಲೇಜ್ ನಿರ್ಮಿಸಿದ್ದಾರೆ ಮೋದಿ
ಈ ನಾಡಿನ ಯುವಕರಿಗೆ ಮೋದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರವು ಕಳೆದ 9 ವರ್ಷದಲ್ಲಿ ಸಾಕಷ್ಟು ಕೆಲಸಗಳನ್ನು ಯುವಕರ ಸಬಲೀಕರಣಕ್ಕೆ ಮಾಡಿದೆ. ದೇಶದಲ್ಲಿ ಪ್ರತಿ ಎರಡು ದಿನಕ್ಕೆ ಒಂದು ಕಾಲೇಜ್ ನಿರ್ಮಾಣ ಮಾಡಿದೆ. ಪ್ರತಿ ವಾರಕ್ಕೆ ಒಂದು ವಿಶ್ವವಿದ್ಯಾಲಯ ಆರಂಭಿಸಿದೆ. ದೇಶದಲ್ಲಿ 300ಕ್ಕೂ ಅಧಿಕ ವೈದ್ಯಕೀಯ ಕಾಲೇಜ್ ಆರಂಭಿಸಿದೆ. ಗ್ರೂಪ್ ಡಿ ಮತ್ತು ಸಿ ನೇಮಕಾತಿಯಲ್ಲಿದ್ದ ಸಂದರ್ಶನವನ್ನು ತೆಗೆದು ಹಾಕಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ. ಮುದ್ರಾ ಮೂಲಕ 20 ಲಕ್ಷ ರೂ. ಸಾಲವನ್ನು ಯಾವುದೇ ಗ್ಯಾರಂಟಿ ಇಲ್ಲದೇ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಯಡಿಯೂರಪ್ಪ, ಈಶ್ವರಪ್ಪ ಅವರ ಭುಜ ತಟ್ಟಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಜನರತ್ತ ಕೈ ಬೀಸಿ, ತಮ್ಮ ಅಕ್ಕಪಕ್ಕದಲ್ಲಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಕೈಗಳನ್ನು ಎತ್ತಿ ಹಿಡಿದು ಒಗ್ಗಟ್ಟು ಸೂಚಿಸಿದರು. ಬಳಿಕ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರನ್ನು ಗಟ್ಟಿಯಾಗಿ ಭುಜ ತಟ್ಟಿದರು. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಫೋನ್ ಮಾಡಿ ಮಾತನಾಡಿದ್ದರು.
ಕರ್ನಾಟಕ
ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್ಟಿಐ ಕಾರ್ಯಕರ್ತ
ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ.
ದಾವಣಗೆರೆ: ಕೋಟ್ಯಂತರ ರೂಪಾಯಿ ಭೂ ಅಕ್ರಮದ ಆರೋಪಿಯಾಗಿದ್ದ ಹರೀಶ್ ಹಳ್ಳಿ (Harish Halli) ಎಂಬಾತ ಪೊಲೀಸ್ ಕಾರಿ (Police Vehicle)ನಿಂದ ಜಿಗಿದು ಮೃತಪಟ್ಟಿದ್ದಾನೆ. ತನ್ನ ಪತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಈ ಘಟನೆ ನಡೆದಿದ್ದು ದಾವಣಗೆರೆಯಲ್ಲಿ (Davanagere News).
ಈ ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ. ಈ ಭೂ ಅಕ್ರಮ ಕೇಸ್ನಡಿ ಹರೀಶ್ ಹಳ್ಳಿ, ಸಬ್ ರಿಜಿಸ್ಟ್ರಾರ್ ಆರ್.ಎಲ್.ವೀಣಾ ಸೇರಿ ಒಟ್ಟು ಐವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈತ ಸೈಟ್ನ್ನು ತನ್ನದಾಗಿಸಿಕೊಳ್ಳಲು ನಕಲಿ ಮಾಲೀಕರನ್ನೇ ಸೃಷ್ಟಿಸಿದ್ದ. ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.
ಭೂ ಅಕ್ರಮದ ಕೇಸ್ನಲ್ಲಿ ಎ 1 ಆರೋಪಿಯಾದ ಹರೀಶ್ನನ್ನು ಮೇ 27ರ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆದುಕೊಂಡು ಬರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಫ್ಲೈಓವರ್ ಮೇಲೆ ಪೋಲೀಸ್ ವಾಹನ ಹೋಗುತ್ತಿದ್ದಾಗ ಈತ ಜಿಗಿದಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಆತನ ಪತ್ನಿ ಕಿಡಿಕಾರಿದ್ದಾರೆ. ನನ್ನ ಪತಿಯನ್ನು ಪೊಲೀಸರು ಮಧ್ಯರಾತ್ರಿ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಹರಿಶ್ ಹಳ್ಳಿಯನ್ನು ಕರೆದುಕೊಂಡು ಹೋದ ಗಾಂಧಿನಗರ ಪೊಲೀಸ್ ಠಾಣೆ ಪಿಎಸ್ಐ ಮತ್ತು ಚಾಲಕನ ವಿರುದ್ಧ ದೂರು ನೀಡಿದ್ದಾರೆ.
ಅಪ್ಪ ಹೇಳೋದೇನು?
ಪೊಲೀಸರೇ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ಮುಂಜಾನೆ ನಮಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರೇ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿದ್ದಾರೆ. ಈಗ ಜಂಪ್ ಮಾಡಿದ, ಅದೂ ಇದು ಎಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತ ಹರೀಶ್ ಹಳ್ಳಿ ತಂದೆ ಆರೋಪಿಸಿದ್ದಾರೆ. ವಾಹನದಲ್ಲಿ ಅವನ ಅಕ್ಕ-ಪಕ್ಕ ಪೊಲೀಸರೇ ಕುಳಿತಿದ್ದರು. ಅಂದಮೇಲೆ ಅವನು ಹೇಗೆ ಕಾರಿನಿಂದ ಜಂಪ್ ಮಾಡಿದ ಎಂದೂ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:Illegal Mining | ಕೊಪ್ಪಳದಲ್ಲಿ ನೀರಾವರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಸಚಿವರಿಂದ ಕ್ರಮ ಕೈಗೊಳ್ಳುವ ಭರವಸೆ
ಕರ್ನಾಟಕ
ಒಂಟಿಯಾಗಿದ್ದ ವೃದ್ಧೆಯ ಭೀಕರ ಹತ್ಯೆ; ಗಂಡ ಕಟ್ಟಿದ ಮನೆಯೆಂದು ಮಗನ ಜತೆಗೂ ಹೋಗಿರಲಿಲ್ಲ
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ.
ಬೆಂಗಳೂರಿನ ಉತ್ತರ ವಿಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೊಲೆ, ಕೊಲೆಯತ್ನ, ರಾಬರಿ ಪ್ರಕರಣಗಳು ನಡೆಯುತ್ತಲೇ ಇವರ. ಈಗ ಮೇ 27ರಂದು ರಾತ್ರಿ ಹಂತಕರು ಮಹಾಲಕ್ಷ್ಮೀ ಲೇಔಟ್ನಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ಇದ್ದ 80ವರ್ಷದ ವೃದ್ಧೆಯನ್ನು (Old Lady Murder) ಭಯಾನಕವಾಗಿ ಹತ್ಯೆಗೈದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ಗಳನ್ನೆಲ್ಲ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ. ವೃದ್ಧೆಗೆ ಮೂರು ಮಕ್ಕಳಿದ್ದು ಮಗ ವೈಟ್ಫೀಲ್ಡ್ನಲ್ಲಿ ಮತ್ತು ಹೆಣ್ಣುಮಕ್ಕಳಿಬ್ಬರು ಜೆಪಿ ನಗರದಲ್ಲಿ ಇದ್ದಾರೆ. ಮಗ ಅದೆಷ್ಟೋ ಬಾರಿ ಇವರನ್ನು ತನ್ನ ಜತೆಗೆ ಬಂದಿರು ಎಂದು ಕರೆದರೂ ವೃದ್ಧೆ ಹೋಗಿರಲಿಲ್ಲ. ನನ್ನ ಗಂಡ ಕಟ್ಟಿಸಿದ ಮನೆ ಇದು, ಇಲ್ಲಿಯೇ ಇರುತ್ತೇನೆ ಎಂದು ಹೇಳಿ ಈ ಮನೆಯಲ್ಲೇ ಒಬ್ಬರೇ ಇದ್ದರಂತೆ.
ಹಂತಕರು ಸಂಜೆ ವೇಳೆ ಮನೆಗೆ ನುಗ್ಗಿದಾಗ ಕಮಲಮ್ಮ ತಮ್ಮ ಮಲಗುವ ಕೋಣೆಯಲ್ಲಿ ಇದ್ದರು. ಅಲ್ಲಿಗೇ ಹೋಗಿ ಅವರ ಕೈಕಾಲು ಕಟ್ಟಿದ್ದಾರೆ. ಬಳಿಕ ಉಸಿರುಗಟ್ಟಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಎಲ್ಲ ಚಿನ್ನಾಭರಣಗಳು, ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನು ಏಳುಗಂಟೆ ಹೊತ್ತಿಗೆ ಪಕ್ಕದ ಮನೆ ಮಕ್ಕಳು ಅಜ್ಜಿಯನ್ನು ಹುಡುಕಿ ಬಂದಾಗ, ಬಾಗಿಲು ತೆರೆದೇ ಇತ್ತು. ಒಳಗೆ ಹೋದರೆ ಅಜ್ಜಿ ಬಿದ್ದಿದ್ದರು. ಅದನ್ನು ನೋಡಿ ತಮ್ಮ ಮನೆಯವರಿಗೆ ತಿಳಿಸಿದ್ದಾರೆ. ಅಕ್ಕಪಕ್ಕದ ಮನೆಯವರೆಲ್ಲ ಸೇರಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ
ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಶ್ವಾನದಳ, ಪಿಂಗರ್ ಪ್ರಿಂಟ್ ತಜ್ಞರು ಹಾಗೂ ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ಮಾಡಿಸಿದ್ದಾರೆ. ಹಂತಕರ ಸುಳಿವಿನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮೇಲ್ನೊಟಕ್ಕೆ ಕಮಲಮ್ಮನನ್ನ ವೃತ್ತಿಪರ ಹಂತಕರೇ ಚಿನ್ನಾಭರಣ ದೋಚುವ ಸಲುವಾಗಿ ಹತ್ಯೆಗೈದಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಶವವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕರ್ನಾಟಕ
CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ
CBSE Exam Results: ಸಿಬಿಎಸ್‌ಸಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ.
ಬೆಂಗಳೂರು: ಸಿಬಿಎಸ್‌ಸಿ ದ್ವಿತೀಯ ಪಿಯುಸಿ ಪರೀಕ್ಷೆಯ (CBSE Exam Results) ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಉತ್ತಮ ಸಾಮರ್ಥ್ಯ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರನ್ನು ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಶಾಲೆಯಿಂದ ಸನ್ಮಾನಿಸಲಾಯಿತು.
ನಗರದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಜಯ್ ಕಿರಣ್ ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್ಸ್‌ನ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ. ಎನ್. ವಿಜಯ ಕುಮಾರ್ ಮಾತನಾಡಿ, ಎಲ್ಲಾ ವಿಭಾಗಗಳಲ್ಲೂ ವಿದ್ಯಾರ್ಥಿಗಳ ಸಾಧನೆ ಗಣನೀಯವಾಗಿ ಹೆಚ್ಚಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಸಿಬಿಎಸ್‌ಸಿ ವಿದ್ಯಾರ್ಥಿಗಳಿಗೆ ಬಹುಬೇಗ ತರಗತಿಗಳನ್ನು ಆರಂಭಿಸಿ ಡಿಸೆಂಬರ್ ವೇಳೆಗೆ ಪಠ್ಯ ಕ್ರಮ ಪೂರ್ಣಗೊಳಿಸುತ್ತೇವೆ. ಆ ನಂತರ ಪರೀಕ್ಷೆಗೆ ಸಜ್ಜುಗೊಳಿಸುತ್ತೇವೆ ಎಂದರು.
ಶಿಕ್ಷಣದ ಇತ್ತೀಚಿನ ಪರಿಕಲ್ಪನೆ, ಆಧುನಿಕ ತಂತ್ರಜ್ಞಾನ ಕುರಿತು ಶಿಕ್ಷಣಕರಿಗೆ ವ್ಯಾಪಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿಯೇ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ | Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕಿರಣ್, ಮುಖ್ಯ ಕಾರ್ಯಾಚರಣೆ ಅಧಿಕಾರಿ ಸುನಾಲಿನಿ ಬೆಂಜಮಿನ್ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ22 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ20 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ16 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್12 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ4 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ12 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER2 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?