National Anthem: ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ; ಕ್ಷಮೆಯಾಚಿಸಿದ ಮುಸ್ಲಿಂ ದಂಪತಿ - Vistara News

ಕರ್ನಾಟಕ

National Anthem: ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ; ಕ್ಷಮೆಯಾಚಿಸಿದ ಮುಸ್ಲಿಂ ದಂಪತಿ

National Anthem: ಮೈಸೂರಿನ ಜಯಲಕ್ಷ್ಮೀಪುರಂನಲ್ಲಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಪ್ರಸಾರದ ವೇಳೆ ಮುಸ್ಲಿಂ ದಂಪತಿ ಎದ್ದು ನಿಲ್ಲದೆ ಅಗೌರವ ತೋರಿದ್ದರು. ಬಳಿಕ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದಾರೆ.

VISTARANEWS.COM


on

National Anthem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ರಾಷ್ಟ್ರಗೀತೆಗೆ ಅಗೌರವ ತೋರಿರುವ ಘಟನೆ ನಗರದ ಜಯಲಕ್ಷ್ಮೀಪುರಂನಲ್ಲಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ (National Anthem) ಪ್ರಸಾರವಾದ ವೇಳೆ ಮುಸ್ಲಿಂ ದಂಪತಿ ಎದ್ದು ನಿಲ್ಲದೆ ಅಗೌರವ ತೋರಿದ್ದರು. ಇದನ್ನು ಪಕ್ಕದಲ್ಲಿದ್ದವರು ಪ್ರಶ್ನಿಸಿದ ಬಳಿಕ ತಪ್ಪಿನ ಅರಿವಾಗಿ ಮುಸ್ಲಿಂ ದಂಪತಿ ಕ್ಷಮೆಯಾಚಿಸಿದ್ದಾರೆ.

ಭಾನುವಾರ ರಾತ್ರಿ ಬ್ಯಾಡ್ ನ್ಯೂಸ್ ಸಿನಿಮಾ ವೀಕ್ಷಿಸಲು ಮುಸ್ಲಿಂ ದಂಪತಿ ಡಿಆ‌ರ್‌ಸಿ ಚಿತ್ರಮಂದಿರಕ್ಕೆ ತೆರಳಿದ್ದರು. ಚಿತ್ರ ಆರಂಭವಾಗುವ ಮೊದಲೇ ಚಿಪ್ಸ್, ಪಾಪ್ ಕಾರ್ನ್ ಸೇರಿ ಇನ್ನಿತರ ತಿಂಡಿ ಇರಿಸಿಕೊಂಡು ಕುಳಿತಿದ್ದರು. ಈ ವೇಳೆ ಸಿನಿಮಾ ಆರಂಭಕ್ಕೂ ಮುಂಚೆ ರಾಷ್ಟ್ರಗೀತೆ ಪ್ರಸಾರ ಮಾಡಿದಾಗ, ಮುಸ್ಲಿಂ ದಂಪತಿ ಎದ್ದು ನಿಂತಿಲ್ಲ. ಇದಕ್ಕೆ ಅವರ ಪಕ್ಕದಲ್ಲಿದ್ದ ಹಿಂದು ದಂಪತಿ ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಚಿತ್ರಮಂದಿರದ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಧಾವಿಸಿದ ಜಯಲಕ್ಷ್ಮೀಪುರಂ ಠಾಣೆಯ ಪೊಲೀಸರು, ಮುಸ್ಲಿಂ ದಂಪತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದ್ದಾರೆ.

ರಾಷ್ಟ್ರಗೀತೆ ಪ್ರಸಾರದ ವೇಳೆ ತಮ್ಮ ಮಡಿಲಲ್ಲಿ ತಿಂಡಿ ಇದ್ದಿದ್ದರಿಂದ ಮೇಲೇಳಲು ಆಗಿಲ್ಲ. ನಮ್ಮಿಂದ ತಪ್ಪಾಗಿದೆ ಎಂದು ಮುಸ್ಲಿಂ ದಂಪತಿ ಕ್ಷಮೆ ಕೋರಿದ್ದಾರೆ. ಹೀಗಾಗಿ, ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ದಂಪತಿಯನ್ನು ಕಳುಹಿಸಿದ್ದಾರೆ.

ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದ ಪ್ರತಾಪ್‌ ಸಿಂಹ

ಚಿತ್ರಮಂದಿರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಘಟನೆ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಯಾರಲ್ಲಿ ದೇಶದ ಬಗ್ಗೆ ಜನ್ಮ ಭೂಮಿ, ಪವಿತ್ರ ಭೂಮಿ ಎಂಬ ಭಾವನೆ ಇರುವುದಿಲ್ಲವೋ ಅಂತಹವರಿಂದ ಈ ರೀತಿ ಆಗುತ್ತದೆ. ಹೋಲಿ ಲ್ಯಾಂಡ್ ಅರಬ್‌ನಲ್ಲಿ ಇದೆ ಎಂದು ಭಾವಿಸುತ್ತಾರೋ ಅವರಿಂದ ಈ ರೀತಿ ಆಗುತ್ತದೆ. ಚಿತ್ರಮಂದಿರದಲ್ಲಿದ್ದ ಇತರರು ಕಿವಿ ಹಿಂಡುವ ಕೆಲಸ ಮಾಡಬೇಕಿತ್ತು. ಆದರೆ, ಯಾರೂ ಆ ಕೆಲಸ ಮಾಡಿಲ್ಲ. ಇನ್ನು ಮುಂದೆಯಾದರೂ ಈ ರೀತಿ ಆಗದಂತೆ ನೋಡಿಕೊಳ್ಳಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ | Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

ಅಡ್ಡಗಟ್ಟಿದ ಪೊಲೀಸ್‌ ಜೀಪ್‌ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ ಎಸ್ಕೇಪ್‌!

theft case

ಚಿತ್ರದುರ್ಗ: ಪೊಲೀಸರ ಮೇಲೆ ಕಳ್ಳರು (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದಾರೆ. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದಾರೆ.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿದೆ. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದಾರೆ.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬುಲೇರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಸ್ಥಳಕ್ಕೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ನಡೆದ ಘಟನೆ ಕುರಿತು ಸ್ಟಲಿತರುಲ್ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಪೊಲೀಸರ ಮೇಲೆ ಕಳ್ಳರ ದಾಳಿ ಸುದ್ದಿ ತಿಳಿದು ಸ್ಥಳೀಯರು ಆತಂಕಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

VISTARANEWS.COM


on

ಬಿಡದಿ ಟೌನ್‌ಶಿಪ್‌

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೃಹತ್ ಪ್ರತಿಭಟನೆ ರೈತ ಸಂಘಟನೆಗಳ ತೀರ್ಮಾನ

ಬಿಡದಿ ಟೌನ್‌ಶಿಪ್ ಯೋಜನೆಯ ಅಂತಿಮ ಅಧಿಸೂಚನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ, ಯೋಜನೆ ವಿರೋಧಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯೋಜನೆಗಾಗಿ ಭೂಮಿ ನೀಡದಿರಲು ರೈತರು ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಎಪಿಎಂಸಿ ಆವರಣದ ರೈತಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಭೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದು ಯೋಜನೆ ವಿರುದ್ಧದ ರೈತರ ಅಸಮಾಧಾನವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ರೈತರ ಬದುಕು ಮತ್ತು ಕೃಷಿ ಭೂಮಿಗೆ ಧಕ್ಕೆ ತರುವ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ರೈತರ ಅಭಿಪ್ರಾಯವನ್ನು ಗೌರವಿಸಿ ಯೋಜನೆ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ರೈತರ ಹೋರಾಟಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕೂಡಾ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿವೆ ಎನ್ನಲಾಗಿದೆ.

ಜೂನ್ 22ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

Also Read: ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

VISTARANEWS.COM


on

ಸಿಎಂ ಡಿಕೆಶಿ

ಸಿಎಂ ಡಿಕೆಶಿ: ಲಂಚ ಕೇಳಿದ್ರೆ ದೂರು ನೀಡಲು ಪೋನ್ ನಂಬರ್ ಡಿಸ್ ಪ್ಲೇ

ಭ್ರಷ್ಟಾಚಾರ ಮುಕ್ತ ಸರ್ಕಾರದ ನಿರ್ಮಾಣವೇ ನನ್ನ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಸಿಎಂ ಡಿ.ಕೆ.ಶಿವಕುಮಾರ್‌ ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಸೇವೆ ನೀಡುವ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಸಹಾಯಕ ಆಯುಕ್ತರು (ಎಸಿ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಲಂಚ ಕೇಳಿದರೆ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲಿ ದೂರು ಸಲ್ಲಿಸಲು ಅಗತ್ಯವಿರುವ ಫೋನ್ ನಂಬರ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

“ನನಗೆ ಯಾವುದೇ ವೈಯಕ್ತಿಕ ನಿರೀಕ್ಷೆಗಳಿಲ್ಲ. ಜನರಿಗೆ ಸ್ವಚ್ಛ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತಂಡದಂತೆ ಕೆಲಸ ಮಾಡಬೇಕು. “ನಾವೆಲ್ಲ ಕರ್ನಾಟಕ ಟೀಂ ಆಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅತ್ಯಗತ್ಯ” ಎಂದು ತಿಳಿಸಿದರು.

ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲೆಗಳ ಸಮಸ್ಯೆಗಳನ್ನು ಆಲಿಸಲು ತಾವೇ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Also Read: ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest11 hours ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest12 hours ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest2 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest2 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest2 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ4 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest4 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest4 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest4 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌