Site icon Vistara News

CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ

Bengalurus CBSE class 12 topper SS Akanksh felicitated

ಬೆಂಗಳೂರು: ಸಿಬಿಎಸ್‌ಸಿ ದ್ವಿತೀಯ ಪಿಯುಸಿ ಪರೀಕ್ಷೆಯ (CBSE Exam Results) ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಉತ್ತಮ ಸಾಮರ್ಥ್ಯ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರನ್ನು ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಶಾಲೆಯಿಂದ ಸನ್ಮಾನಿಸಲಾಯಿತು.

ನಗರದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಜಯ್ ಕಿರಣ್ ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್ಸ್‌ನ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ. ಎನ್. ವಿಜಯ ಕುಮಾರ್ ಮಾತನಾಡಿ, ಎಲ್ಲಾ ವಿಭಾಗಗಳಲ್ಲೂ ವಿದ್ಯಾರ್ಥಿಗಳ ಸಾಧನೆ ಗಣನೀಯವಾಗಿ ಹೆಚ್ಚಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಸಿಬಿಎಸ್‌ಸಿ ವಿದ್ಯಾರ್ಥಿಗಳಿಗೆ ಬಹುಬೇಗ ತರಗತಿಗಳನ್ನು ಆರಂಭಿಸಿ ಡಿಸೆಂಬರ್ ವೇಳೆಗೆ ಪಠ್ಯ ಕ್ರಮ ಪೂರ್ಣಗೊಳಿಸುತ್ತೇವೆ. ಆ ನಂತರ ಪರೀಕ್ಷೆಗೆ ಸಜ್ಜುಗೊಳಿಸುತ್ತೇವೆ ಎಂದರು.

ಶಿಕ್ಷಣದ ಇತ್ತೀಚಿನ ಪರಿಕಲ್ಪನೆ, ಆಧುನಿಕ ತಂತ್ರಜ್ಞಾನ ಕುರಿತು ಶಿಕ್ಷಣಕರಿಗೆ ವ್ಯಾಪಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿಯೇ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಇದನ್ನೂ ಓದಿ | Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕಿರಣ್, ಮುಖ್ಯ ಕಾರ್ಯಾಚರಣೆ ಅಧಿಕಾರಿ ಸುನಾಲಿನಿ ಬೆಂಜಮಿನ್ ಮತ್ತಿತರರು ಭಾಗವಹಿಸಿದ್ದರು.

Exit mobile version