ಚಿತ್ರದುರ್ಗ : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಮೃತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಪಿ. ಉಮೇಶ್ ಅವರು ೨೦೨೨ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಕ್ಲಾಸ್ ಸ್ಥಾಪನೆ ಸೇರಿದಂತೆ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡಿದ ಗಣನೀಯ ಸೇವೆಗಾಗಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತುಮಕೂರಿನ ಕೇಂದ್ರಿಯ ವಿದ್ಯಾಲಯದ ಶಿಕ್ಷಕರಾಗಿರುವ ಜಿ. ಪೊನ ಶಂಕರಿ ಅವರೂ ಪ್ರಸಕ್ತ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅದರೆ, ಈ ಶಾಲೆಯನ್ನು ಕೇಂದ್ರಿಯ ವಿದ್ಯಾಲಯ ಸಂಘಟನೆ ವಿಭಾಗಕ್ಕೆ ಪರಿಗಣಿಸುವುರಿಂದ ಉಮೇಶ್ ಅವರು ಪ್ರತಿಷ್ಠಿತ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ಶಿಕ್ಷಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟಿ.ಪಿ ಉಮೇಶ್ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದವರಾಗಿದ್ದು, ದೇಶದಲ್ಲಿ ಆಯ್ಕೆಯಾಗಿರುವ ಒಟ್ಟು 47 ಉತ್ತಮ ಶಿಕ್ಷಕರ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಶಿಕ್ಷಣ ಸಚಿವರ ಅಭಿನಂದನೆ
ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಟಿ.ಪಿ ಉಮೇಶ್ ಅವರಿಗೆ ರಾಜ್ಯ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಶಿಕ್ಷಕ ಉಮೇಶ್ ಅವರ್ ಸಾಧನೆಯನ್ನು ಹೊಗಳಿದ್ದಾರೆ.
ಇದನ್ನೂ ಓದಿ | Teacher Recruitment 2022 | ಸರ್ಕಾರಿ ಶಿಕ್ಷಕರ ನೇಮಕಾತಿ ಮತ್ತೆ ಯಾವಾಗ ನಡೆಯಬಹುದು?